TATA: ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರಿನ ವಿತರಣೆ ಶುರು.. ಗ್ರಾಹಕರು ಫುಲ್ ಖುಷ್, ಬೆಲೆ ಎಷ್ಟು?

ಟಾಟಾ ಮೋಟಾರ್ಸ್ (Tata Motors) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಮನೆ ಮಾತಾಗಿದೆ. ತಿಂಗಳಾರಂಭದಲ್ಲಿ ಹೊಚ್ಚ ಹೊಸ ಕರ್ವ್ ಇವಿಯನ್ನು (Curvv EV) ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದೊಂದು ಪ್ರೀಮಿಯಂ ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದ್ದು, ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿದೆ. ದೇಶಾದ್ಯಂತ ಆಗಸ್ಟ್ 12 ಈ ಕಾರಿನ ಬುಕ್ಕಿಂಗ್ ಶುರುವಾಗಿತ್ತು. ಇಂದಿನಿಂದ (ಆಗಸ್ಟ್ 23) ವಿತರಣೆ ಆರಂಭವಾಗಿದ್ದು, ಗ್ರಾಹಕರು ಕೂಡ ಖುಷಿಯಿಂದ ನೂತನ ಕರ್ವ್ ಇವಿಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ.

ಟಾಟಾ ಡೀಲರ್‌ಶಿಪ್‌ಗಳಲ್ಲಿ ಹೊಸ ಕರ್ವ್ ಇವಿಯನ್ನು ವಿತರಣೆ ಪಡೆಯುತ್ತಿರುವ ಫೋಟೋ ಹಾಗೂ ವಿಡಿಯೋಗಳನ್ನು ಖರೀದಿದಾರರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದಾಗ್ಯೂ ಈ ಕಾರು ಎಷ್ಟು ಬುಕ್ಕಿಂಗ್‌ನ್ನು ಪಡೆದುಕೊಂಡಿದೆ ಎಂಬುದರ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ಮಾಹಿತಿಯನ್ನು ಪ್ರಕಟಿಸಿಲ್ಲ. ಸದ್ಯ ದೊಡ್ಡ ಸಂಖ್ಯೆಯಲ್ಲಿ ಕರ್ವ್ ಐವಿಯನ್ನು ಗ್ರಾಹಕರು ಆರ್ಡರ್ ಮಾಡುತ್ತಿರುವುದರಿಂದ ಕಾಯುವಿಕೆ ಅವಧಿಯು ಕೊಂಚ ಹೆಚ್ಚಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆಯೂ ನಿಖರವಾದ ವಿವರಗಳಿಲ್ಲ.

Tata Curvv Ev Delivery Began In India

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಟಾಟಾ ಕರ್ವ್ ಇವಿ (Tata Curvv EV) ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಕ್ರಿಯೇಟಿವ್, ಅಕಾಂಪ್ಲಿಶ್ಡ್, ಅಕಾಂಪ್ಲಿಶ್ಡ್ ಪ್ಲಸ್ ಎಸ್ ಮತ್ತು ಎಂಪವರ್ಡ್ ಪ್ಲಸ್ ಎ ಎಂಬ 5 ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

ನೂತನ ಟಾಟಾ ಕರ್ವ್ ಇವಿ ಎರಡು ವಿಧದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಚಿಕ್ಕದಾದ 45 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿರುವ ರೂಪಾಂತರಗಳು ಭರ್ತಿ ಚಾರ್ಜ್‌ನಲ್ಲಿ 502 ಕಿಲೋಮೀಟರ್ ಓಡುತ್ತವೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 150 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 215 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Tata Curvv Ev Delivery Began In India

ದೊಡ್ಡದಾದ 55 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ ಒಳಗೊಂಡಿರುವ ರೂಪಾಂತರಗಳು ಸಂಪೂರ್ಣ ಚಾರ್ಜ್‌ನಲ್ಲಿ 585 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತವೆ. ಇದರ ಎಲೆಕ್ಟ್ರಿಕ್ ಮೋಟಾರ್ 167 ಪಿಎಸ್ ಗರಿಷ್ಠ ಶಕ್ತಿ ಹಾಗೂ 215 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

ಹೊಸ ಟಾಟಾ ಕರ್ವ್ ಇವಿ ಫ್ಲೇಮ್ ರೆಡ್, ಎಂಪವರ್ಡ್ ಆಕ್ಸೈಡ್, ಪ್ರಿಸ್ಟಿನ್ ವೈಟ್ ಮತ್ತು ಪ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಏರ್ ಪ್ಯೂರಿಫೈಯರ್‌, ಪನೊರೊಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟಾಟಾ ಕರ್ವ್ ಇವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, August 23, 2024, 22:20 [IST]
English summary
Tata curvv ev delivery began in india
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+