Tata: ಜನಸಾಮಾನ್ಯರಿಗೆ ಇನ್ನೂ ಹಬ್ಬ.. ಟೆಸ್ಲಾವನ್ನು ಮೀರಿಸುವಂತೆ ಬರಲಿವೆ ಟಾಟಾದ ಹೊಸ ಎಲೆಕ್ಟ್ರಿಕ್ ಕಾರುಗಳು!
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯ ಟಿಯಾಗೊ, ಟಿಗೂರ್, ಆಲ್ಟ್ರೋಜ್, ನೆಕ್ಸಾನ್, ಹ್ಯಾರಿಯರ್ ಹಾಗೂ ಸಫಾರಿ ಕಾರುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲೂ ಟಾಟಾ ತನಗಾಗಿ ಪ್ರತ್ಯೇಕ ಸ್ಥಾನವನ್ನು ಸೃಷ್ಟಿಸಿಕೊಂಡಿದ್ದು, ಟಿಯಾಗೊ ಇವಿ, ಪಂಚ್ ಇವಿ ಹಾಗೂ ನೆಕ್ಸಾನ್ ಇವಿಗಳನ್ನು ಮಾರಾಟ ಮಾಡುತ್ತಿದೆ. ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಖರೀದಿದಾರರನ್ನು ಆಕರ್ಷಿಸಲು ಹೊಸ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುವ ಕೆಲಸದಲ್ಲಿಯೂ ತೊಡಗಿಸಿಕೊಂಡಿದೆ.
ಟಾಟಾ ಮೋಟಾರ್ಸ್ ಹಲವು ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ನಿರತವಾಗಿದ್ದು, 2025ರಲ್ಲಿ ಕರ್ವ್ವ್ ಇವಿ (Curvv EV) ಹಾಗೂ ಹ್ಯಾರಿಯರ್ ಇವಿ (Harrier EV) ಬಿಡುಗಡೆಯಾಗಲಿದೆ. ಮರುವರ್ಷ (2026) ಸಿಯೆರಾ ಇವಿ (Sierra EV) ಹಾಗೂ ಅವಿನ್ಯಾ ಇವಿ (Avinya EV)ಗಳು ದೇಶೀಯ ಮಾರುಕಟ್ಟೆಗೆ ಬರಲಿವೆ ಎಂದು ವರದಿಯಾಗಿದೆ. 2030ರ ವೇಳೆಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಭಾರೀ ಸಂಖ್ಯೆಯಲ್ಲಿ ಸ್ಥಾಪಿಸಲು ಕಂಪನಿಯು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮೊದಲಿಗೆ ಬಹುತೇಕ ಮುಂದಿನ ವರ್ಷ ಪರಿಚಯಿಸಲಾಗುವ ಟಾಟಾ ಕರ್ವ್ವ್ ಇವಿ (Tata Curvv EV) ಬಗ್ಗೆ ಮಾತನಾಡೋಣ. ಇದೊಂದು ಕೂಪ್ ಎಸ್‌ಯುವಿಯಾಗಿದ್ದು, ಇಂಧನ (ಪೆಟ್ರೋಲ್) ಹಾಗೂ ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಎಲೆಕ್ಟ್ರಿಕ್ ರೂಪದಲ್ಲಿ ಪರಿಚಯಿಸಲಾಗುವ ಈ ಕಾರು, ದೊಡ್ಡದಾದ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್ ಓಡಲಿದೆ ಎಂದು ಹೇಳಲಾಗಿದೆ.
ಈ ಕರ್ವ್ವ್ ಇವಿಯು ಹ್ಯಾರಿಯರ್, ಸಫಾರಿ ಮತ್ತು ನೆಕ್ಸಾನ್ ರೀತಿಯಲ್ಲಿ ಆಕರ್ಷಕವಾದ ವೈಶಿಷ್ಟ್ಯವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದ್ದು, 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 360-ಡಿಗ್ರಿ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.

2025ರಲ್ಲಿ ಟಾಟಾ ಹ್ಯಾರಿಯರ್ ಇವಿ (Tata Harrier EV) ಸಹ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಕಾರು ರೂ.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿ.ಮೀ ರೇಂಜ್ (ಮೈಲೇಜ್) ಕೊಡಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್-ಜೋನ್ ಆಟೋಮೆಟಿಕ್ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ಟಾಟಾ ಕಂಪನಿಯು ಸಿಯೆರಾ ಇವಿ (Sierra EV)ಯನ್ನು ಅಭಿವೃದ್ಧಿಪಡಿಸುತ್ತಿದೆ. ಇದು 2026ರಲ್ಲಿ ದೇಶೀಯ ಮಾರುಕಟ್ಟೆಗೆ ಬರುವ ನಿರೀಕ್ಷೆಯಿದ್ದು, ರೂ.25 ಲಕ್ಷ ಆರಂಭಿಕ ಬೆಲೆಯಲ್ಲಿ ಲಭ್ಯವಾಗಬಹುದು ಎನ್ನಲಾಗಿದೆ. ಪೂರ್ತಿ ಚಾರ್ಜ್‌ನಲ್ಲಿ 400 ಕಿ.ಮೀ ಕ್ರಮಿಸಲಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಸುರಕ್ಷತೆಯ ದೃಷ್ಟಿಯಿಂದ ಏರ್ ಬಾಗ್ಯ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಟಾಟಾ ಅವಿನ್ಯಾ ಇವಿ (Tata Avinya EV)ಯು ಉತ್ಪಾದನೆಯ ಹಂತದಲ್ಲಿದ್ದು, 2026ರಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ರೂ.30 ಲಕ್ಷ ಬೆಲೆಗೆ ಬರುವ ಈ ಕಾರು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದೆ ಎನ್ನಲಾಗಿದೆ. ದೊಡ್ಡದಾದ ಬ್ಯಾಟರಿಯನ್ನು ಒಳಗೊಂಡಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 500 ಕಿ.ಮೀ ರೇಂಜ್ ನೀಡಬಹುದು ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications