TATA: ಶೀಘ್ರ 'ರತನ್ ಟಾಟಾ' ಕಂಪನಿಯ ಹೊಸ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ.. ಬೆಲೆ ಎಷ್ಟು, ವಿಶೇಷತೆಗಳೇನು?

ದೇಶದ ಅತಿದೊಡ್ಡ ಎಲೆಕ್ಟ್ರಿಕ್ ಕಾರು ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ನೆಕ್ಸಾನ್ ಇವಿ, ಪಂಚ್ ಇವಿ, ಟಿಯಾಗೊ ಇವಿ ಹಾಗೂ ಟಿಗೊರ್ ಇವಿಗಳನ್ನು ಮಾರಾಟ ಮಾಡುವುದರೊಂದಿಗೆ ಭಾರೀ ಜನಪ್ರಿಯತೆ ಗಳಿಸಿದೆ. ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ಸ್ (ಎಫ್‌ಎಡಿಎ - FADA) ಪ್ರಕಾರ, 2024ರ ಹಣಕಾಸು ವರ್ಷದಲ್ಲಿ ಟಾಟಾ ಮೋಟಾರ್ಸ್ 64,217 ಯುನಿಟ್ ಇವಿ (ಎಲೆಕ್ಟ್ರಿಕ್ ವಾಹನ)ಗಳನ್ನು ಮಾರಾಟ ಮಾಡಿ ಶೇಕಡ 70.6% ಮಾರುಕಟ್ಟೆ ಪಾಲನ್ನು ಹೊಂದಿದೆ.

ಭಾರತ್‌-ಎನ್‌ಸಿಎಪಿ ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ರೇಟಿಂಗ್ ಪಡೆದಿರುವ 2 ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಏಕೈಕ ಕಂಪನಿ 'ಟಾಟಾ' ಮಾತ್ರವೇ ಆಗಿದೆ. ನೆಕ್ಸಾನ್ ಇವಿ ಹಾಗೂ ಪಂಚ್ ಇವಿಗಳು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತವೆ. ಸದ್ಯ, ಮತ್ತಷ್ಟು ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸಲು ಟಾಟಾ ಮೋಟಾರ್ಸ್ ಶೀಘ್ರದಲ್ಲೇ ಹೊಚ್ಚ ಹೊಸ 'ಕರ್ವ್' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಪರಿಚಯಿಸಲು ಸಜ್ಜಾಗುತ್ತಿದೆ.

Tata Curvv EV Launch Soon Expected Price Range And Features

ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಟಾಟಾ ಕರ್ವ್ ಇವಿ (Tata Curvv EV) ದೊಡ್ಡದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 400 ರಿಂದ 500 ಕಿ.ಮೀ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ. ಈ ಕಾರು ಸಿಂಗಲ್-ಮೋಟಾರ್ ಹಾಗೂ ಡುಯಲ್ ಮೋಟಾರ್ ಸೆಟಪ್‌ಗಳಲ್ಲಿ ಲಭ್ಯವಾಗಬಹುದು ಎಂದು ಹೇಳಲಾಗಿದೆ.

ಟಾಟಾ ಕರ್ವ್ ಇವಿ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಸಿಗಲಿದ್ದು, ಸುಮಾರು ರೂ.18 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿರುವ ಸಾಧ್ಯತೆಯಿದೆ. ಈ ಕಾರಿಗೆ ಮುಂಬರುವ ತಿಂಗಳಲ್ಲಿ ದೇಶೀಯ ಮಾರುಕಟ್ಟೆಗೆ ಬರಲಿರುವ ಮಾರುತಿ ಸುಜುಕಿ ಇವಿಎಕ್ಸ್ (Maruti Suzuki eVX) ಮತ್ತು ಹ್ಯುಂಡೈ ಕ್ರೆಟಾ ಇವಿ (Hyundai Creta EV) ಮಾದರಿಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ ಎನ್ನಲಾಗಿದೆ.

Tata Curvv EV Launch Soon Expected Price Range And Features

ನೂತನ ಕರ್ವ್ ಇವಿ 'ಕೂಪ್ ಎಸ್‌ಯುವಿ' ಆಗಿದ್ದು, ಬಹುತೇಕ ವಿನ್ಯಾಸ ನೆಕ್ಸಾನ್ (Nexon) ಕಾರಿಗೆ ಹೋಲಿಕೆಯಾಗುತ್ತದೆ. ಈ ಹಿಂದೆ ಕರ್ವ್ ಎಸ್‌ಯುವಿ ಪರೀಕ್ಷಾರ್ಥ ಓಡಾಟದ ಸಂದರ್ಭದಲ್ಲಿ ಹಲವು ಫೋಟೋಗಳನ್ನು ಸೆರೆಹಿಡಿಯಲಾಗಿತ್ತು. ಅವುಗಳಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಹೊಂದಿರುವುದನ್ನು ನೋಡಬಹುದಾಗಿತ್ತು.

ಈ ಕಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. 12-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಆಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ವಿನ್-ಸ್ಪೋಕ್ ಸ್ಟೀರಿಂಗ್ ವೀಲ್, ಹೀಟಡ್-ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.

ಟಾಟಾ ಕರ್ವ್ ಇಂಧನ ಚಾಲಿತ ಆಯ್ಕೆಯಲ್ಲಿ ಕೂಡ ಬಿಡುಗಡೆಯಾಗಲಿದೆ. 1.2-ಲೀಟರ್ ಟಿಜಿಡಿಐ ಪೆಟ್ರೋಲ್ ಹಾಗೂ 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರಬಹುದು. 6-ಸ್ವೀಡ್ ಮ್ಯಾನುವಲ್ ಅಥವಾ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿರಲಿದ್ದು, ಸುಮಾರು ರೂ.15 ಲಕ್ಷ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಬಹುದು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, July 10, 2024, 10:51 [IST]
English summary
Tata curvv ev launch soon expected price range and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+