TATA: ನಾಳೆ ರತನ್ ಟಾಟಾ ಕಂಪನಿಯಿಂದ ನೂತನ ಎಲೆಕ್ಟ್ರಿಕ್ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ನಾಳೆ (ಆಗಸ್ಟ್ 7) ಟಾಟಾ ಮೋಟಾರ್ಸ್ ಬಹುನಿರೀಕ್ಷಿತ ಕರ್ವ್ ಇವಿ (ಎಲೆಕ್ಟ್ರಿಕ್ ಕಾರು)ಯನ್ನು ಬಿಡುಗಡೆಗೊಳಿಸಲಿದೆ. ನಂತರದ ದಿನಗಳಲ್ಲಿ ಇದೇ ಕಾರನ್ನು ಇಂಧನ (ಪೆಟ್ರೋಲ್/ಡೀಸೆಲ್) ಚಾಲಿತ ರೂಪದಲ್ಲಿಯೂ ಮಾರಾಟಕ್ಕೆ ತರಲಿದೆ. ಇದೊಂದು ಕೂಪೆ ಎಸ್‌ಯುವಿಯಾಗಿದ್ದು, ಖರೀದಿದಾರರಿಗೂ ನಿರೀಕ್ಷೆಗಳು ದುಪ್ಪಟ್ಟಾಗಿವೆ.

ವಿನ್ಯಾಸ (Design): ನೂತನ ಟಾಟಾ ಕರ್ವ್ ಇವಿ (Tata Curvv EV) ಅತ್ಯಾಧುನಿಕ ವಿನ್ಯಾಸ ಹೊಂದಿದೆ. ಬಹುತೇಕ ನೆಕ್ಸಾನ್ (Nexon) ಕಾರಿಗೆ ಹೋಲಿಕೆಯಾಗುತ್ತದೆ. ಈಗಾಗಲೇ ವಿನ್ಯಾಸ ಸಂಬಂಧ ಹಲವು ವಿಚಾರಗಳು ಬಹಿರಂಗಗೊಂಡಿವೆ. ಈ ಕಾರು ಆಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ರೂಫ್‌ಟಾಪ್ ಮೌಂಟೆಡ್ ಸ್ಪಾಯ್ಲರ್, ಕನೆಕ್ಟ್ದ್ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ. ಜೊತೆಗೆ ಇಳಿಜಾರಾದ ರೂಫ್‌ಲೈನ್ ಒಳಗೊಂಡಿದೆ.

Tata Curvv Ev Launch Tomorrow Expected Price And Features Details

ಕಾರ್ಯಕ್ಷಮತೆ (Performance): ಈ ಎಲೆಕ್ಟ್ರಿಕ್ ಕಾರಿನ ಕಾರ್ಯಕ್ಷಮತೆ ಕುರಿತಂತೆ ಯಾವುದೇ ಮಾಹಿತಿ ಲಭ್ಯವಿಲ್ಲ. ಆದಾಗ್ಯೂ 55 - 56 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 550 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ. ಇದು ಸಿಂಗಲ್-ಮೋಟಾರ್ ಮತ್ತು ಡುಯಲ್ ಮೋಟಾರ್ ಸೆಟಪ್‌ಗಳಲ್ಲಿ ಖರೀದಿಗೆ ಲಭ್ಯವಾಗಬಹುದು ಎನ್ನಲಾಗಿದೆ.

ವೈಶಿಷ್ಟ್ಯಗಳು (Features): ಟಾಟಾ ಕರ್ವ್ ಇವಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. 12.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೋಕ್ ಸ್ಟೀರಿಂಗ್ ವೀಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಮತ್ತು ಆಟೋ ಡಿಮ್ಮಿಂಗ್ ಐಆರ್‌ವಿಎಂಗಳನ್ನು ಪಡೆದುಕೊಂಡಿರಬಹುದು.

Tata Curvv Ev Launch Tomorrow Expected Price And Features Details

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುವ ನಿರೀಕ್ಷೆಯಿದೆ. ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 4 ಡಿಸ್ಕ್ ಬ್ರೇಕ್‌ಗಳು, ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು, ಲೆವೆಲ್-2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು.

ಬೆಲೆ (Price): ನೂತನ ಟಾಟಾ ಕರ್ವ್ ಇವಿ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ ಎಂದು ಅಂದಾಜಿಸಲಾಗಿದೆ. ಇದು ರೂ.18 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಈ ಎಲೆಕ್ಟ್ರಿಕ್ ಕಾರಿಗೆ ಮುಂಬರುವ ತಿಂಗಳಲ್ಲಿ ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಇವಿಎಕ್ಸ್ ಮತ್ತು ಹ್ಯುಂಡೈ ಕ್ರೆಟಾ ಇವಿ ಮಾದರಿಗಳು ಪ್ರಬಲ ಪ್ರತಿಸ್ಪರ್ಧಿಯಾಗಲಿವೆ ಎನ್ನಲಾಗಿದೆ.

ಇಂಧನ ಚಾಲಿತ ಕರ್ವ್ ಕಾರು ಹೇಗಿರಲಿದೆ: ಇದು 1.2-ಲೀಟರ್ ಟಿಜಿಡಿಐ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಪಡೆದಿರಲಿದೆ. 6-ಸ್ವೀಡ್ ಮ್ಯಾನುವಲ್/ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನೊಂದಿಗೂ ದೊರೆಯಲಿದ್ದು, ರೂ.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, August 6, 2024, 15:50 [IST]
English summary
Tata curvv ev launch tomorrow expected price and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+