Tata Curvv EV: ಹೊಸ ಟಾಟಾ ಕರ್ವ್ ಇವಿ ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಮನೆ ಮಾತಾಗಿದೆ. ಬುಧವಾರ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಕರ್ವ್ ಇವಿಯನ್ನು (Curvv EV) ಅದ್ದೂರಿಯಾಗಿ ಬಿಡುಗಡೆ ಮಾಡಿದೆ. ಇದೊಂದು ಪ್ರೀಮಿಯಂ ಕೂಪೆ ಎಸ್‌ಯುವಿಯಾಗಿದ್ದು, ನವೀನ ಶೈಲಿಯ ವೈಶಿಷ್ಟ್ಯಗಳನ್ನು ಪಡೆದಿದೆ. ನೀವು ಈ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಇಲ್ಲಿ ನಿರೀಕ್ಷಿತ ಆನ್-ರೋಡ್ ಬೆಲೆ (On Road Price) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಟಾಟಾ ಕರ್ವ್ ಇವಿ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) 'ಕ್ರಿಯೇಟಿವ್ 45' ರೂ.19.10 ಲಕ್ಷ, ಮಧ್ಯಮ ಶೇಣಿ ರೂಪಾಂತರ (ಮಿಡ್ ಲೆವೆಲ್ ವೇರಿಯೆಂಟ್) 'ಅಕಂಪ್ಲಿಶೆಡ್ ಪ್ಲಸ್ ಎಸ್ 55' ರೂ.21.81 ಲಕ್ಷ ಹಾಗೂ ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) 'ಎಂಪವರ್ಡ್ ಪ್ಲಸ್ ಎ 55' ರೂ.23.98 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ.

Tata Curvv Ev On Road Price And Emi Details

ನೀವು ರೂ.19.10 ಲಕ್ಷ ಆನ್-ರೋಡ್ ಬೆಲೆ ಹೊಂದಿರುವ ಈ ಕಾರಿನ ಪ್ರಾರಂಭಿಕ ರೂಪಾಂತರ 'ಕ್ರಿಯೇಟಿವ್ 45' ಅನ್ನು ರೂ.10 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ರೂ.9.09 ಲಕ್ಷ ಸಾಲದ ಮೊತ್ತವಿರುತ್ತದೆ. ಅದಕ್ಕೆ ಶೇಕಡ 9.8% ಬಡ್ಡಿ ದರದಲ್ಲಿ ಮಾಸಿಕ ರೂ.19,243 ಇಎಂಐ ಪಾವತಿಸಬೇಕು.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಕರ್ವ್ ಇವಿ (Tata Curvv EV) ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಲಭ್ಯವಿದೆ. 45 ಕೆಡಬ್ಲ್ಯೂಹೆಚ್ ಮತ್ತು 55 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ ಕ್ರಮವಾಗಿ 502 ರಿಂದ 585 ಕಿಲೋಮಿಟರ್ ರೇಂಜ್ (ಮೈಲೇಜ್) ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ನೂತನ ಟಾಟಾ ಕರ್ವ್ ಇವಿ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಏರ್ ಪ್ಯೂರಿಫೈಯರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೊರೊಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, 9-ಸ್ಪೀಕರ್ ಜೆಬಿಎಲ್-ಸೌಂಡ್ ಸಿಸ್ಟಮ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ಹಲವು ವೈಶಿಷ್ಟ್ಯಗಳಿವೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಆಗಸ್ಟ್ 12ರಿಂದ ಹೊಸ ಟಾಟಾ ಕರ್ವ್ ಇವಿ ಕೂಪೆ ಎಸ್‌ಯುವಿ ಬುಕ್ಕಿಂಗ್ ಆರಂಭವಾಗಲಿದ್ದು, ಆಗಸ್ಟ್ 14ರಂದು ಟೆಸ್ಟ್ ಡ್ರೈವ್‌ ಶುರುವಾಗಲಿದೆ. ಆಗಸ್ಟ್ 23ರಿಂದ ವಿತರಣೆಗಳು ಪ್ರಾರಂಭವಾಗಲಿವೆ ಎಂದು ವರದಿಯಾಗಿದೆ. ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರೂಪಾಂತರಗಳನ್ನು ಅವಲಂಭಿಸಿ ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, August 8, 2024, 9:49 [IST]
English summary
Tata curvv ev on road price and emi details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+