Tata: ಟಾಟಾದ ಹೊಸ ಪೆಟ್ರೋಲ್-ಡೀಸೆಲ್ ಕಾರು ಶೀಘ್ರ ಮಾರುಕಟ್ಟೆಗೆ.. ಬೆಲೆ ಎಷ್ಟಿರಲಿದೆ?, ದುಡ್ಡು ಕೂಡಿಡಿ!
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಬುಧವಾರ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಕರ್ವ್ ಇವಿಯನ್ನು (Curvv EV) ಬಿಡುಗಡೆ ಮಾಡಿತ್ತು. ಈ ಎಲೆಕ್ಟ್ರಿಕ್ ಕಾರು ರೂ.17.49 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ನೂತನ 'ಕರ್ವ್' ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಾಗಲಿದ್ದು, ಸೆಪ್ಟೆಂಬರ್ 2ರಂದು ಮಾರಾಟಕ್ಕೆ ಬರಲಿದೆ. ಅಂದೇ ಅಧಿಕೃತ ಬೆಲೆಯನ್ನು ಘೋಷಣೆ ಮಾಡಲಾಗುತ್ತದೆ. ಬನ್ನಿ.. ಈ ಕಾರಿನ ಪ್ರಮುಖ ವಿಶೇಷತೆ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ವಿನ್ಯಾಸ (Design): ನೂತನ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಯಾಗಿದ್ದು, ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು, ಎಲ್‌ಇಡಿ ಟೈಲ್‌ಲೈಟ್‌ಗಳು ಹಾಗೂ ಇಳಿಜಾರಾದ ರೂಫ್‌ಲೈನ್‌ನ್ನು ಹೊಂದಿದೆ. ಒಳಭಾಗದ ಕ್ಯಾಬಿನ್ ಕೂಡ ಹೆಚ್ಚು ಆಕರ್ಷಕವಾಗಿದೆ.

ರೂಪಾಂತರಗಳು (Variants): ಈ ಕಾರು ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಂಪ್ಲಿಶೆಡ್ ಎಸ್ ಹಾಗೂ ಅಕಂಪ್ಲಿಶೆಡ್ ಪ್ಲಸ್ ಎ ಎಂಬ 6 ರೂಪಾಂತರಗಳನ್ನು ಪಡೆದಿದೆ. ಜೊತೆಗೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಜನರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.
ಕಾರ್ಯಕ್ಷಮತೆ (Perfomance): ಟಾಟಾ ಕರ್ವ್ 3 ವಿವಿಧ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ ಹೊಸದಾದ 1.2-ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ.
ವೈಶಿಷ್ಟ್ಯಗಳು (Features): ನೂತನ ಕಾರು ವಿವಿಧ ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೋಕ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ಟಾಟಾ ಕರ್ವ್ ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಬೆಲೆ (Price): ಟಾಟಾ ಕರ್ವ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಿಗೆ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ ನೇರ ಎದುರಾಳಿಯಾಗಲಿದೆ. ಇನ್ನುಳಿದಂತೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳು ಸಹ ಪ್ರಬಲವಾದ ಸ್ಪರ್ಧೆಯೊಡ್ಡಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications