Tata Curvv: ಇಂದು ಬಹುನಿರೀಕ್ಷಿತ ಟಾಟಾ ಕರ್ವ್ ಕಾರು ಬಿಡುಗಡೆ.. ವಿಶೇಷತೆಗಳೇನು.. 10 ಲಕ್ಷಕ್ಕಿಂತ ಅಗ್ಗ?
ಟಾಟಾ ಮೋಟಾರ್ಸ್ (Tata Motors) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕಳೆದ ತಿಂಗಳು ನೂತನ ಕರ್ವ್ ಇವಿಯನ್ನು (Curvv EV) ಬಿಡುಗಡೆಗೊಳಿಸಿತ್ತು. ಇದೊಂದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದ್ದು, ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕಂಪನಿಯು ಇಂದು ಹೊಚ್ಚ ಹೊಸ ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಕರ್ವ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಿದೆ. ಈಗಾಗಲೇ, ಈ ಕಾರು ಶೋರೂಂಗಳನ್ನು ತಲುಪಲು ಆರಂಭವಾಗಿದೆ. ನೂತನ ಕರ್ವ್ ಕುರಿತಂತೆ ಬಹುತೇಕ ಎಲ್ಲ ವಿವರಗಳು ಲಭ್ಯವಾಗಿದ್ದು, ದರವನ್ನು ಮಾತ್ರ ಬಹಿರಂಗಪಡಿಸಬೇಕಾಗಿದೆ.
ಹೊಸ ಟಾಟಾ ಕರ್ವ್ ಸುಮಾರು ರೂ.10 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ. ಈ ಕಾರಿಗೆ ಸಿಟ್ರನ್ ಬಸಾಲ್ಟ್ (Citroen Basalt) ಕೂಪೆ ಎಸ್‌ಯುವಿ ನೇರ ಎದುರಾಳಿಯಾಗಿದೆ. ಇದರೊಟ್ಟಿಗೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳು ಸಹ ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ನೂತನ ಟಾಟಾ ಕರ್ವ್ ಎಸ್‌ಯುವಿ ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು ಹಾಗೂ ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಇಳಿಜಾರಾಗಿರುವ ರೂಫ್‌ಲೈನ್ ಇದ್ದು, ಒಳಭಾಗದ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ.
ಈ ಟಾಟಾ ಕರ್ವ್ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ ನವೀನವಾಗಿರುವ 1.2-ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ.
ಹೊಸ ಇಂಧನ ಚಾಲಿತ ಟಾಟಾ ಕರ್ವ್ ಎಸ್‌ಯುವಿ ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಎಸ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎ ಎಂಬ 6 ರೂಪಾಂತರ (ವೇರಿಯೆಂಟ್)ಗಳನ್ನು ಹೊಂದಿದೆ. 5 ಆಕರ್ಷಕ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.
ಟಾಟಾ ಕರ್ವ್ ಕಾರು ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು (ಫೀಚರ್) ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೋಕ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications