Tata: ಪೆಟ್ರೋಲ್‌ ಕಾರುಗಳಿಗೆ ಗುಡ್‌ಬೈ, ಟಾಟಾ ಇವಿಗಳಿಗೆ ಜೈ, ರತನ್ ಟಾಟಾ ಕಂಪನಿ ಅಂದ್ರೆ ಸುಮ್ಮನೇನಾ..!

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಮನೆಮಾತಾಗಿದೆ. ಕಂಪನಿಯು ದೇಶೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದು, ಟಿಯಾಗೊ ಇವಿ, ಟಿಗೂರ್ ಇವಿ, ಪಂಚ್ ಇವಿ ಹಾಗೂ ನೆಕ್ಸಾನ್ ಇವಿಗಳನ್ನು ಮಾರಾಟಗೊಳಿಸುತ್ತಿದೆ. ಇವು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, 'ಟಾಟಾ' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌, ಸೆಡಾನ್‌ ಹಾಗೂ ಕಾಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದೆ.

ಟಾಟಾ ಮೋಟಾರ್ಸ್, ಒಟ್ಟು 1.5 ಲಕ್ಷ ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವುದರೊಂದಿಗೆ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. 2023ರ ಹಣಕಾಸು ವರ್ಷದಲ್ಲಿ ಮಾರಿದ 50,000 ಯುನಿಟ್‌ಗೆ ಹೋಲಿಸಿದರೆ, 2024ರ ಹಣಕಾಸು ವರ್ಷದಲ್ಲಿ 73,800 ಯುನಿಟ್‌ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟಗೊಳಿಸುವ ಮೂಲಕ ವರ್ಷದಿಂದ ವರ್ಷಕ್ಕೆ ಶೇಕಡ 48% ಬೆಳವಣಿಗೆಯನ್ನು ಸಾಧಿಸಿದೆ.

Tata EVs Achieve 1 5 Lakh Car Sales Milestone 48 Percent Y-o-Y Growth

ಮೊದಲಿಗೆ ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ನೆಕ್ಸಾನ್ ಇವಿ (Tata Nexon EV) ಬಗ್ಗೆ ಮಾತನಾಡೋಣ. ಈ ಕಾರು ರೂ.14.49 ಲಕ್ಷದಿಂದ ರೂ.19.49 ಲಕ್ಷ ದರವನ್ನು (ಎಕ್ಸ್ ಶೋರೂಂ) ಪಡೆದಿದೆ. 30 ಕೆಡಬ್ಲ್ಯೂಹೆಚ್ ಮತ್ತು 40.5 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 325 ಕಿ.ಮೀ ರಿಂದ 465 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ನೆಕ್ಸಾನ್ ಇವಿಯು ಇಕೋ, ಸಿಟಿ, ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್‌ನ್ನು ಹೊಂದಿದೆ.

Tata EVs Achieve 1 5 Lakh Car Sales Milestone 48 Percent Y-o-Y Growth

ಟಾಟಾ ಪಂಚ್ ಇವಿ (Tata Punch EV) ಬಗ್ಗೆ ಹೇಳುವುದಾದರೆ, ಇದು ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 25 ಮತ್ತು 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್ ಓಡುತ್ತದೆ. ಇದರ ಬ್ಯಾಟರಿಯು ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಶೇಕಡ 10-80% ಚಾರ್ಜ್ ಆಗುವುದಕ್ಕೆ 56 ನಿಮಿಷ ಬೇಕಾಗುತ್ತದೆ.

ಹೊಸ ಪಂಚ್ ಇವಿಯು ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಅಡ್ವೆಂಚರ್, ಎಂಪವರ್ಡ್ ಒಳಗೊಂಡಂತೆ ಹಲವು ರೂಪಾಂತರ (ವೇರಿಯೆಂಟ್)ಗಳು ಹಾಗೂ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಏರ್ ಪ್ಯೂರಿಫೈಯರ್, ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ ಪಡೆದಿದೆ.

ಟಾಟಾ ಟಿಯಾಗೊ ಇವಿ (Tata Tiago EV) ಕೂಡ ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 19.2 ಮತ್ತು 24 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ಓಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಟಿಗೂರ್ ಇವಿ (Tata Tigor EV) ಬಗ್ಗೆ ಮಾತನಾಡುವುದಾದರೆ, ಇದು ವಾಣಿಜ್ಯ ಬಳಕೆಗೆ ಮಾತ್ರ ಲಭ್ಯವಿದೆ. ರೂ.12.49 ಲಕ್ಷದಿಂದ ರೂ.13.75 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 26 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 315 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 21, 2024, 16:11 [IST]
English summary
Tata evs achieve 1 5 lakh car sales milestone 48 percent y o y growth
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+