TATA: ಹೊಸ ಎಲೆಕ್ಟ್ರಿಕ್ ಕಾರು ಬರಲಿದೆ.. ಹೇಗಿರಲಿದೆ.. ಡಾಕ್ಟರ್, ಎಂಜಿನಿಯರ್‌ಗಳು ಸೇರಿ ಎಲ್ಲರೂ ತೆಗೆದುಕೊಳ್ಳುವರು!
ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿದೆ. ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಮತ್ತು ಕರ್ವ್ ಇವಿಗಳನ್ನು ಮಾರಾಟ ಮಾಡುತ್ತಿದೆ. ಮುಂಬರುವ ತಿಂಗಳಲ್ಲಿ ಹೊಚ್ಚ ಹೊಸ ಹ್ಯಾರಿಯರ್ ಇವಿಯನ್ನು (Harrier EV) ಬಿಡುಗಡೆಗೊಳಿಸಲು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಇಲ್ಲಿ ನೂತನ ಎಲೆಕ್ಟ್ರಿಕ್ ಕಾರಿನ ಅಂದಾಜು ಬೆಲೆ ಎಷ್ಟಿರಲಿದೆ.. ಕಾರ್ಯಕ್ಷಮತೆ.. ವೈಶಿಷ್ಟ್ಯಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರ ತಿಳಿಯೋಣ.
ಮುಂದಿನ ವರ್ಷದ (2025) ಜನವರಿಯಲ್ಲಿ ಆಯೋಜಿಸಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ (Bharat Mobility Global Expo) ಉತ್ಪಾದನೆಗೆ ಸಿದ್ದಗೊಂಡಿರುವ ಟಾಟಾ ಹ್ಯಾರಿಯರ್ ಇವಿಯನ್ನು ಅನಾವರಣಗೊಳಿಸುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಈ ಹೊಸ ಎಲೆಕ್ಟ್ರಿಕ್ ಕಾರು ಕೆಲವೇ ತಿಂಗಳಲ್ಲಿ ದೇಶೀಯ ಗ್ರಾಹಕರ ಮನೆ ಸೇರಲಿದೆ.

ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುವ ನಿರೀಕ್ಷೆಯಿದೆ. ರೂ.25 ರಿಂದ ರೂ.35 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರಬಹುದು ಎನ್ನಲಾಗಿದೆ. ಈ ಕಾರು, ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರುವ ಹಲವು ಎಲೆಕ್ಟ್ರಿಕ್ ಕಾರುಗಳಿಗೂ ಪ್ರಬಲವಾದ ಸ್ಪರ್ಧೆಯೊಡ್ಡಬೇಕಾಗಿದೆ. ಮಹೀಂದ್ರಾ ಎಕ್ಸ್‌ಯುವಿ.ಇ9 ಮತ್ತು ಹ್ಯುಂಡೈ ಕ್ರೆಟಾ ಇವಿಗಳು ದೊಡ್ಡ ಎದುರಾಳಿಯಾಗಲಿವೆ.
ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ ಬೃಹದಾಕಾರದ ಬ್ಯಾಟರಿಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಅದಕ್ಕೆ ತಕ್ಕಂತೆ ಒಮ್ಮೆ ಭರ್ತಿ ಚಾರ್ಜ್ ಮಾಡಿದರೆ 500 ಕಿ.ಮೀ.ಗೂ ಅಧಿಕ ರೇಂಜ್ (ಮೈಲೇಜ್) ಕೊಡಬಹುದು. ಎನ್ನಲಾಗಿದೆ. ಇದರಲ್ಲಿರುವ ಮೋಟಾರ್ ಹೆಚ್ಚಿನ ಶಕ್ತಿ (ಪವರ್) ಹಾಗೂ ಪೀಕ್ ಟಾರ್ಕ್ ಸಹ ಉತ್ಪಾದಿಸುವ ಸಾಧ್ಯತೆಯಿದ್ದು, ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ಟಾಟಾ ಹ್ಯಾರಿಯರ್ ಇವಿ (Tata Harrier EV) ವಿನ್ಯಾಸ (ಡಿಸೈನ್) ಬಹುತೇಕ ಇಂಧನ ಚಾಲಿತ ಮಾದರಿಗೆ ಹೋಲಿಕೆಯಾಗುವ ಸಾಧ್ಯತೆಯಿದೆ. ಆದರೂ ವಿನೂತನವಾಗಿರುವ ಅಲಾಯ್ ವೀಲ್‌ಗಳು ಹಾಗೂ ಬಂಪರ್‌ಗಳನ್ನು ಪಡೆದಿರುವ ಸಾಧ್ಯತೆಯಿದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ದೊರೆಯಲಿದ್ದು, ಪ್ರಯಾಣಿಕರೂ ಆರಾಮದಾಯಕವಾಗಿ ದೂರದ ಊರುಗಳಿಗೆ ತೆರಳಬಹುದು.
ಈ ಕಾರು ಡಾಕ್ಟರ್, ಎಂಜಿನಿಯರ್‌ಗಳು ಸೇರಿದಂತೆ ಎಲ್ಲ ವರ್ಗದವರನ್ನು ಸೆಳೆಯುವಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ವಿನ್-ಸ್ಪೋಕ್ ಸ್ಟೀರಿಂಗ್ ವೀಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, 10-ಸ್ಪೀಕರ್ ಜೆಬಿಎಲ್ ಸೆಟಪ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸಲಿದೆ ಎಂದು ತಿಳಿದುಬಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications