Tata: ಸದ್ದಿಲ್ಲದೇ ಬಿಡುಗಡೆಯಾಗುವ ಸನಿಹಕ್ಕೆ ಟಾಟಾದ ಈ ಹೊಸ ಎಲೆಕ್ಟ್ರಿಕ್ ಕಾರು? 5-ಸೀಟರ್.. ದುಡ್ಡು ಕೂಡಿಡಿ!

ದೇಶದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಹಾಗೂ ಕರ್ವ್ ಇವಿಗಳು ಹೆಚ್ಚು ವಿಶ್ವಾಸಾರ್ಹವಾಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಇದೀಗ ಕಂಪನಿಯು ಸದ್ದಿಲ್ಲದೇ ಹೊಚ್ಚ ಹೊಸ ಹ್ಯಾರಿಯರ್ ಇವಿಯನ್ನು ಬಿಡುಗಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಕಾರು ಅತಿ ಶೀಘ್ರದಲ್ಲಿ ಮಾರಾಟಕ್ಕೆ ಬರಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) 2025ರ ಮಾರ್ಚ್‌ನಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಆ ಬಳಿಕ, ಸಿಯೆರಾ ಇವಿಯನ್ನು (Sierra EV) ಪರಿಚಯಿಸಬಹುದು ಎಂದು ಅಂದಾಜಿಸಲಾಗಿದೆ. ಹೊಸ ಹ್ಯಾರಿಯರ್ ಇವಿ ಬಗ್ಗೆ ಗ್ರಾಹಕರು ಕೂಡ ದೊಡ್ಡ ಮಟ್ಟದಲ್ಲಿ ನೀರಿಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

Tata Harrier EV Launch Expected In March 2025

ಈ ಟಾಟಾ ಹ್ಯಾರಿಯರ್ ಇವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿರಲಿದೆ. ಬಹುತೇಕ ಇಂಧನ ಚಾಲಿತ ಹ್ಯಾರಿಯರ್ ಕಾರಿಗೆ ಹೋಲಿಕೆಯಾಗುತ್ತದೆ. ಇದು ಹೊಸದಾಗಿರುವ ಗ್ರಿಲ್, ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಜೊತೆಗೆ ಆಕರ್ಷಕವಾದ ಬಣ್ಣಗಳನ್ನು ಹೊಂದಿರಲಿದೆ ಎನ್ನಲಾಗಿದೆ.

ನೂತನ ಟಾಟಾ ಹ್ಯಾರಿಯರ್ ಇವಿ ಬೃಹತ್ ಗಾತ್ರದ ಶಕ್ತಿಯುತವಾದ ಬ್ಯಾಟರಿ ಪ್ಯಾಕ್ ಹೊಂದಿರಲಿದೆ. ಇದರೊಟ್ಟಿಗೆ ಡುಯಲ್ - ಮೋಟಾರ್ ಸೆಟಪ್ ಒಳಗೊಂಡಿರಲಿದ್ದು, ಅಲ್ ವೀಲ್ ಡ್ರೈವ್ ತಂತ್ರಜ್ಞಾನವನ್ನು ಪಡೆದುಕೊಂಡಿರಲಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ.

Tata Harrier EV Launch Expected In March 2025

ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಇದರೊಟ್ಟಿಗೆ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ, 6-ವೇ ಪವರ್ ಡ್ರೈವರ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೋರಮಿಕ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ ಎಂದು ತಿಳಿದುಬಂದಿದೆ.

ಈ ಕಾರು ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್-ಹೋಲ್ಡ್, ಹಿಲ್-ಡಿಸೆಂಟ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.

Tata Harrier EV Launch Expected In March 2025

ನೂತನ ಟಾಟಾ ಹ್ಯಾರಿಯರ್ ಇವಿ ರೂ.30 ಲಕ್ಷ (ಎಕ್ಸ್ ಶೋರೂಂ) ಆಸುಪಾಸಿನಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ಈ ಕಾರಿಗೆ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಮತ್ತು ಎಂಜಿ ಝಡ್ಎಸ್ ಇವಿ ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ. ಇವುಗಳು ಮಾತ್ರವಲ್ಲದೆ, ಮುಂಬರುವ ಮಹೀಂದ್ರಾ ಎಕ್ಸ್‌ಯುವಿ.ಇ9 ಹಾಗೂ ಹ್ಯುಂಡೈ ಕ್ರೆಟಾ ಇವಿಗಳು ಕೂಡ ಎದುರಾಳಿಯಾಗಲಿವೆ.

ಒಟ್ಟಾರೆಯಾಗಿ ಟಾಟಾ ಹ್ಯಾರಿಯರ್ ಇವಿ ಬರುವಿಕೆ ಮೇಲೆ ಗ್ರಾಹಕರು ಸಹ ದೊಡ್ಡ ಮಟ್ಟದ ನೀರಿಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಕಾರು ಬಿಡುಗಡೆಯಾದ ಮೇಲೆ ಪ್ರೀಮಿಯಂ 'ಎಲೆಕ್ಟ್ರಿಕ್ ಎಸ್‌ಯುವಿ' ಆಗಿ ಹೊರಹೊಮ್ಮುವುದರಲ್ಲಿ ಎರಡು ಮಾತಿಲ್ಲ. ನೂತನ ಹ್ಯಾರಿಯರ್ ಇವಿ ಮಾರಾಟಕ್ಕೆ ಬಂದ ನಂತರ ದೇಶೀಯ ಖರೀದಿದಾರರಿಂದ ಯಾವ ರೀತಿಯ ಪತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, November 19, 2024, 9:43 [IST]
English summary
Tata harrier ev launch expected in march 2025
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+