Tata: ಸದ್ದಿಲ್ಲದೇ ಟಾಟಾದ ಹೊಸ ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿದ್ದ..ಇಂಟೀರಿಯರ್ ಫೀಚರ್‌ಗಳು ಬಹಿರಂಗ!
ಟಾಟಾ ಮೋಟಾರ್ಸ್ (Tata Motors) ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿದೆ. ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಹಾಗೂ ಕರ್ವ್ ಇವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಈ ಲೈನ್ಅಪ್‌ನ್ನು ಬಲಪಡಿಸಲು ಮತ್ತೊಂದು ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. 2025ರ ಮೊದಲ ತ್ರೈಮಾಸಿಕದಲ್ಲಿ ಹ್ಯಾರಿಯರ್ ಇವಿಯನ್ನು (Harrier EV) ಅದ್ದೂರಿಯಾಗಿ ಪರಿಚಯಿಸಲಿದೆ ಎಂದು ತಿಳಿದುಬಂದಿದೆ.
ಸದ್ಯ, ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಹೊಚ್ಚ ಹೊಸ ಟಾಟಾ ಹ್ಯಾರಿಯರ್ ಇವಿ (Tata Harrier EV) ಪರೀಕ್ಷಾರ್ಥ ಸಂಚಾರದ ಸಂದರ್ಭದಲ್ಲಿ ಪಾರ್ಕಿಂಗ್ ಮಾಡಿದ್ದಾಗ ಕಾಣಿಸಿಕೊಂಡಿದೆ. ಈ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಒಳಭಾಗದಲ್ಲಿರುವ ವಿನ್ಯಾಸ (Design) ಹಾಗೂ ವೈಶಿಷ್ಟ್ಯಗಳ (Features) ಕುರಿತಂತೆ ಒಂದಷ್ಟು ವಿವರಗಳು ಬಹಿರಂಗಗೊಂಡಿವೆ.

ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ನೂತನ ಎಲೆಕ್ಟ್ರಿಕ್ ಕಾರಿನ ಡ್ಯಾಶ್‌ಬೋರ್ಡ್ ಲೇಔಟ್ ಬಹುತೇಕ ಇಂಧನ ಚಾಲಿತ ಹ್ಯಾರಿಯರ್‌ಗೆ ಹೋಲಿಕೆಯಾಗುತ್ತಿದೆ. ಈ ಹ್ಯಾರಿಯರ್ ಇವಿ ದೊಡ್ಡದಾಗಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), 4-ಸ್ಪೋಕ್ ಸ್ಟೀರಿಂಗ್ ವೀಲ್, ಡ್ಯಾಶ್‌ಬೋರ್ಡ್ ಮೌಂಟೆಡ್ ಸ್ಪೀಕರ್, ಟಚ್ ಬೇಸ್ಡ್ ಹೆಚ್‌ವಿಎಸಿ ಪ್ಯಾನೆಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು ಡ್ರೈವ್ ಮೋಡ್‌ನ್ನು ಬದಲಾಯಿಸಲು ರೋಟರಿ ಡಯಲ್‌ನ್ನು ಹೊಂದಿದೆ.
ಈ ಟಾಟಾ ಹ್ಯಾರಿಯರ್ ಇವಿಯು ಹೊರಭಾಗದಲ್ಲಿಯೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿರಲಿದೆ. ಆದರೆ, ಸೋರಿಕೆಯಾಗಿರುವ ಫೋಟೋದಲ್ಲಿರುವ ಕಾರಿನ ಸುತ್ತಲು ಕಪ್ಪು (ಬ್ಲ್ಯಾಕ್) ಬಣ್ಣದ ಬಟ್ಟೆಯಿಂದ ಮುಚ್ಚಿದ್ದರಿಂದ ಅಷ್ಟಾಗಿ ಯಾವುದೇ ಮಾಹಿತಿ ಲಭ್ಯವಾಗಲಿಲ್ಲ. ನೂತನ ಎಲೆಕ್ಟ್ರಿಕ್ ಕಾರು, ಅತ್ಯಾಧುನಿಕವಾಗಿರುವ ಅಲಾಯ್ ವೀಲ್‌ಗಳು ಹಾಗೂ ಬಂಪರ್‌ಗಳನ್ನು ಪಡೆದಿರುವ ನೀರಿಕ್ಷೆಯಿದೆ.

ಮುಂಬರಲಿರುವ ಟಾಟಾ ಹ್ಯಾರಿಯರ್ ಇವಿ ಶಕ್ತಿಯುತವಾಗಿರುವ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಮಾರಾಟಕ್ಕೆ ಬರಲಿದೆ ಎಂದು ಮೂಲಗಳು ಖಚಿತಪಡಿಸಿವೆ. ಈ ಎಲೆಕ್ಟ್ರಿಕ್ ಕಾರು, ಸಂಪೂರ್ಣ ಚಾರ್ಜ್‌ನಲ್ಲಿ 600 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿರುವ ಸಾಧ್ಯತೆಯಿದೆ.
5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಮಾರಾಟ ಬರಲಿರುವ ಟಾಟಾ ಹ್ಯಾರಿಯರ್ ಇವಿ, ರೂ.25 ಲಕ್ಷದಿಂದ ರೂ.35 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಈ ಕಾರಿಗೆ ಮಹೀಂದ್ರಾ ಎಕ್ಸ್‌ಯುವಿ.ಇ9 ಹಾಗೂ ಹ್ಯುಂಡೈ ಕ್ರೆಟಾ ಇವಿಗಳು ಪ್ರಬಲವಾದ ಸ್ಪರ್ಧೆಯೊಡ್ಡಬಹುದು ಎನ್ನಲಾಗಿದೆ.

ಪ್ರಸ್ತುತ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಇಂಧನ ಚಾಲಿತ ಟಾಟಾ ಹ್ಯಾರಿಯರ್ ಕಾರು, ರೂ.14.99 ಲಕ್ಷದಿಂದ ರೂ.25.89 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಡಿಸೇಲ್ ಎಂಜಿನ್ ಮತ್ತು 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 14.60 ರಿಂದ 16.80 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಒಟ್ಟಾರೆಯಾಗಿ, ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗುವ ಟಾಟಾ ಹ್ಯಾರಿಯರ್ ಇವಿ (Tata Harrier EV) ಹತ್ತಾರು ನವೀನ-ಶೈಲಿಯ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂಬುದು ಬಹುತೇಕ ದೃಢಪಟ್ಟಿದೆ. ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬಂದ ಮೇಲೆ ಈ ಕಾರಿಗೆ ಗ್ರಾಹಕರಿಂದ ಯಾವ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: Team BHP


Click it and Unblock the Notifications