TATA: ಎದುರಾಳಿಗಳಿಗೆ ಟೆನ್ಶನ್ ಹೆಚ್ಚಾಯ್ತು.. 2 ಹೊಸ ಲಕ್ಷುರಿ ಕಾರುಗಳ ಬಿಡುಗಡೆಗೆ 'ಟಾಟಾ' ಸಿದ್ಧತೆ, ಯಾವುವು ಗೊತ್ತಾ?
ಟಾಟಾ ಮೋಟಾರ್ಸ್ (Tata Motors) ನಂಬಿಕೆಗೆ ಹೆಸರುವಾಸಿಯಾಗಿರುವ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೋಟಿ ಬೆಲೆಯ ಕಾರುಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಬಜೆಟ್ ದರದಲ್ಲಿಯೇ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಈ ವರ್ಷ 'ಕರ್ವ್' ಕೂಪೆ ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಇದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆಯಲು ಕೂಡ ಯಶಸ್ವಿಯಾಗಿತ್ತು. ಸದ್ಯ, ಕಂಪನಿಯು ಎರಡು ಹೊಚ್ಚ ಹೊಸ ಕಾರುಗಳನ್ನು ಮಾರಾಟಕ್ಕೆ ತರಲು ಸಾಕಷ್ಟು ಸಿದ್ಧತೆಯನ್ನು ನಡೆಸುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಟಾಟಾ ಹ್ಯಾರಿಯರ್ ಇವಿ (Tata Harrier EV): ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರಿನ ಮೇಲೆ ಗ್ರಾಹಕರು ದೊಡ್ಡಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. 2025ರ ಮಾರ್ಚ್‌ನಲ್ಲಿ ಹ್ಯಾರಿಯರ್ ಇವಿ ಅದ್ದೂರಿಯಾಗಿ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಇದು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾಗಿರಲಿದೆ. ನವೀನವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಈ ಕಾರು ಶಕ್ತಿಯುತವಾದ ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್ ಪಡೆದಿರಲಿದೆ ಎಂದು ಹೇಳಲಾಗಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ಓಡಬಹುದು ಎಂದು ಅಂದಾಜಿಸಲಾಗಿದೆ. ಇದು 5 ಆಸನಗಳನ್ನು ಹೊಂದಿರುವ ನೀರಿಕ್ಷೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ದೂರದ ಊರುಗಳಿಗೆ ಸಂಚಾರ ನಡೆಸಬಹುದು. ಜೊತೆಗೆ ಉತ್ತಮವಾದ ಬೂಟ್ ಸ್ಪೇಸ್ ಅನ್ನು ಒಳಗೊಂಡಿರುವ ನೀರಿಕ್ಷೆಯಿದೆ.
ನೂತನ ಟಾಟಾ ಹ್ಯಾರಿಯರ್ ಇವಿ, ರೂ.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಆಕರ್ಷಕ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎನ್ನಲಾಗಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.

ಟಾಟಾ ಸಿಯೆರಾ (Tata Sierra): ಇದು ಸಹ ಎಸ್‌ಯುವಿ ಆಗಿದ್ದು, ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಯಲ್ಲಿ 2025ರ ದ್ವಿತೀಯಾರ್ಧದಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಸಿಯೆರಾ ಇವಿ ರೂ.25 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಆದರೆ, ಇಂಧನ ಚಾಲಿತ ಸಿಯೆರಾ ಕಾರಿನ ಬೆಲೆ ಕುರಿತಂತೆ ಯಾವುದೇ ವಿವರಗಳು ತಿಳಿದುಬಂದಿಲ್ಲ.
ಈ ಟಾಟಾ ಸಿಯೆರಾ ಇವಿ ದೊಡ್ಡದಾಗಿರುವ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ. ಇಂಧನ ಚಾಲಿತ ಸಿಯೆರಾ, 2.0-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಟಿ-ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ ಒಳಗೊಂಡಿರುವ ಸಾಧ್ಯತೆಯಿದೆ.
ಹೊಸ ಇಂಧನ ಮತ್ತು ಎಲೆಕ್ಟ್ರಿಕ್ ಚಾಲಿತ ಸಿಯೆರಾ ಎಸ್‌ಯುವಿಗಳೆರೆಡು ಬಹುತೇಕ ಒಂದೇ ರೀತಿಯ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಡುಯಲ್-ಡಿಜಿಟಲ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 6 ಏರ್‌ಬ್ಯಾಗ್‌ಗಳು ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿರುವ ಸಾಧ್ಯತೆಯಿದೆ. ಇವುಗಳಲ್ಲಿಯೂ 5 ಜನರು ಓಡಾಟ ನಡೆಸಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications