Tata Harrier EV: ರಸ್ತೆಯಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಹ್ಯಾರಿಯರ್ ಇವಿ.. ಬೆಲೆ ಎಷ್ಟು, ರೇಂಜ್ ಏನು?

ದೇಶದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದ್ದು, ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿಯೂ ಅಗ್ರ ಸ್ಥಾನದಲ್ಲಿದೆ. ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ ಹಾಗೂ ನೆಕ್ಸಾನ್ ಇವಿಗಳನ್ನು ಮಾರಾಟ ಮಾಡುತ್ತಿದೆ. ಈ ಕಾರುಗಳು ಒಂದಕ್ಕಿಂತ ಒಂದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಇನ್ನಷ್ಟು ಸಂಖ್ಯೆಯಲ್ಲಿ ದೇಶೀಯ ಖರೀದಿದಾರರನ್ನು ಸೆಳೆಯಲು ಟಾಟಾ ಮುಂದಾಗಿದ್ದು, ಹಲವು ಎಲೆಕ್ಟ್ರಿಕ್ ಕಾರುಗಳನ್ನು ಸಿದ್ಧಪಡಿಸುತ್ತಿದೆ. ಅದರಲ್ಲಿ ಹ್ಯಾರಿಯರ್ ಇವಿಯೂ ಒಂದಾಗಿದೆ.

ಟಾಟಾ ಕಂಪನಿಯು ಹ್ಯಾರಿಯರ್ ಎಲೆಕ್ಟ್ರಿಕ್ ಕಾರನ್ನು ಮೊದಲ ಬಾರಿಗೆ 2023ರಲ್ಲಿ ನಡೆದ ಆಟೋ ಎಕ್ಸ್‌ಪೋ ಹಾಗೂ ಈ ವರ್ಷ ಆರಂಭದಲ್ಲಿ ಜರುಗಿದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿಯೂ ಪ್ರದರ್ಶಿಸಿತ್ತು. ಸದ್ಯ ಮಿಡ್-ಸೈಜ್ ಎಸ್‌ಯುವಿಯಾಗಿರುವ ಈ ಹ್ಯಾರಿಯರ್ ಇವಿ ತಯಾರಿಕೆಯ ಹಂತದಲ್ಲಿದೆ. ಇತ್ತಿಚೆಗೆ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗ ಕಾಣಿಸಿಕೊಂಡಿದ್ದು, ಆ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ.

Tata Harrier EV Spotted Testing Expected Price Range And Feature Details

ಈ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಟಾಟಾ ಹ್ಯಾರಿಯರ್ ಇವಿಯು ರೇರ್-ಆಕ್ಸಲ್ ಮೌಂಟೆಡ್ ಎಲೆಕ್ಟ್ರಿಕ್ ಮೋಟರ್ ಹೊಂದಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ. ಇದು ಹೊಸ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು AWD (ಆಲ್-ವೀಲ್-ಡ್ರೈವ್) ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಬಹುದು ಎಂಬುದನ್ನು ಸೂಚಿಸುತ್ತದೆ. ಹ್ಯಾರಿಯರ್ ಇವಿ ವಿನ್ಯಾಸವು ಬಹುತೇಕ ಇಂಧನ ಚಾಲಿತ ಮಾದರಿ (ಮಾಡೆಲ್)ಗೆ ಹೋಲಿಕೆಯಾಗುತ್ತದೆ. ಆದರೂ ಹೊಸದಾದ ಅಲಾಯ್ ವೀಲ್‌ಗಳು ಹಾಗೂ ನವೀನ ಶೈಲಿಯ ಬಂಪರ್‌ಗಳನ್ನು ಪಡೆದಿರಬಹುದು ಎನ್ನಲಾಗಿದೆ.

ಹೊಸ ಟಾಟಾ ಹ್ಯಾರಿಯರ್ ಇವಿ (Tata Harrier EV) ಕೂಡ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡುಯಲ್-ಜೋನ್ ಆಟೋಮೆಟಿಕ್ ಏರ್ ಕಂಡೀಷನ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಸನ್‌ರೂಫ್‌ನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

Tata Harrier EV Spotted Testing Expected Price Range And Feature Details

ಟಾಟಾ ಕಾರುಗಳು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ನೂತನ ಹ್ಯಾರಿಯರ್ ಇವಿಯು ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. 6 - ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಕ್ರೂಸ್ ಕಂಟ್ರೋಲ್ ಹಾಗೂ 360 - ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ.

ಮುಂಬರಲಿರುವ ಟಾಟಾ ಹ್ಯಾರಿಯರ್ ಇವಿಯು ದೊಡ್ಡದಾದ ಬ್ಯಾಟರಿ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ಗೂ ಹೆಚ್ಚಿನ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ. ಸರಿ ಸುಮಾರು ರೂ.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ.

Tata Harrier EV Spotted Testing Expected Price Range And Feature Details

ದೇಶೀಯವಾಗಿ ಲಭ್ಯವಿರುವ ಇಂಧನ ಚಾಲಿತ ಹ್ಯಾರಿಯರ್ ಎಸ್‌ಯುವಿಯು ರೂ.15.49 ಲಕ್ಷದಿಂದ ರೂ.26.44 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 14.60 ರಿಂದ 16.80 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: CarDekho

Article Published On: Wednesday, June 19, 2024, 15:44 [IST]
English summary
Tata harrier ev spotted testing expected price range and feature details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+