ಕಲ್ಲು ಬಂಡೆಯಂತಿರುವ ಈ ಟಾಟಾ ಕಾರಿನ ಮಾರಾಟದಲ್ಲಿ ದಿಢೀರ್ ಕುಸಿತ: ಕಾರಣವೇನು?

ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಖ್ಯಾತಿಗಳಿಸಿದೆ. ಟಾಟಾ ಕಂಪನಿಯು ತನ್ನ ಹ್ಯಾರಿಯರ್ ಎಸ್‍ಯುವಿಯ ಹೊರಭಾಗ - ಒಳಭಾಗದಲ್ಲಿ ಸಾಕಷ್ಟು ನವೀನ ಬದಲಾವಣೆ ಹಾಗೂ ವೈಶಿಷ್ಟ್ಯಗಳನ್ನು ಪಡೆದಿರುವ ಫೇಸ್‌ಲಿಫ್ಟ್ ಹ್ಯಾರಿಯರ್ (Harrier facelift) ಎಸ್‌ಯುವಿಯನ್ನು ಮಾರುಕಟ್ಟೆಗೆ ಪರಿಚಯಿಸಿತು, ಈ ಎಸ್‍ಯುವಿ ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸುರಕ್ಷತೆ ಮತ್ತು ಅತ್ಯಾಧುನಿಕ ಫಿಚರ್ಸ್ ಗಳನ್ನು ಹೊಂದಿರುವ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಯಲ್ಲಿ ಸಂಚಲನವನ್ನು ಸೃಷ್ಟಿಸಿತು.

ಹ್ಯಾರಿಯರ್ ಎಸ್‍ಯುವಿಯು ಮಾರಾಟವು ಭಾರತೀಯ ಮಾರುಕಟ್ಟೆಯಲ್ಲಿ ಕುಸಿತವನ್ನು ಕಂಡಿದೆ. ಈ ಟಾಟಾ ಹ್ಯಾರಿಯರ್ (Tata Harrier) ಮಾದರಿಗೆ ಹುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ. ಈ ನಡುವೆ 2024ರ ನವೆಂಬರ್ ತಿಂಗಳಿನ ಟಾಟಾ ಹ್ಯಾರಿಯರ್ ಮಾದರಿಯ ಮಾರಾಟದ ವರದಿ ಬಹಿರಂಗವಾಗಿದೆ. ಈ ವರದಿ ಪ್ರಕಾರ, ಕಳೆದ ತಿಂಗಳ ಟಾಟಾ ಹ್ಯಾರಿಯರ್ ಮಾದರಿಯ 1,374 ಯುನಿಟ್ ಗಳು ಮಾರಾಟವಾಗಿವೆ.

Tata Harrier

ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ಹ್ಯಾರಿಯರ್ ಮಾದರಿಯ 2,326 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.41 ರಷ್ಟು ಕುಸಿತವನ್ನು ಕಂಡಿದೆ. ಜನಪ್ರಿಯ ಟಾಟಾ ಹ್ಯಾರಿಯರ್ ಎಸ್‍ಯುವಿಯು ಲೂನಾರ್ ವೈಟ್, ಪೆಬಲ್ ಗ್ರೇ, ಸನ್ಲೈಟ್ ಯೆಲ್ಲೋ ಮತ್ತು ಕೊರಲ್ ರೆಡ್ ಸೇರಿದಂತೆ 6 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಈ ಟಾಟಾ ಹ್ಯಾರಿಯರ್ ಎಸ್‌ಯುವಿ ಎಂಜಿನ್ ಪರ್ಫಾಮೆನ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 2.0 - ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿದ್ದು, 170 hp ಪವರ್ ಹಾಗೂ 350 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಎಂಜಿನ್ ನೊಂದಿಗೆ 6 - ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಈ ಎಸ್‍ಯುವಿ ಇಕೋ, ಸಿಟಿ ಮತ್ತು ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಹೊಂದಿದೆ.

Tata Harrier

ಈ ಟಾಟಾ ಹ್ಯಾರಿಯರ್ ಎಸ್‍ಯುವಿಯ ಒಳಭಾಗದಲ್ಲೂ ಹಲವು ಬದಲಾವಣೆಗಳಾಗಿವೆ. ರೂಪಾಂತರಗಳಿಗೆ ಅನುಗುಣವಾಗಿ 10.25 - ಇಂಚು ಅಥವಾ 12.3 - ಇಂಚಿನ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಹೊಂದಿದೆ. ಇನ್ನು ಈ ಟಾಟಾ ಎಸ್‍ಯುವಿಯ ಎಲ್ಇಡಿ ಅಂಬಿಯೇಟ್ ಲೈಟಿಂಗ್, 10.25 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಾಟಾ ಲೋಗೋದೊಂದಿಗೆ ಹೊಸದಾದ 4- ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಹೊಂದಿದೆ.

ಇದರೊಂದಿಗೆ ಡ್ಯುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, 10 - ಸ್ಪೀಕರ್ ಜೆಬಿಎಲ್ - ಟ್ಯೂನ್ಡ್ ಸೌಂಡ್ ಸಿಸ್ಟಮ್, 360 - ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೇರಿದಂತೆ ಹತ್ತಾರು ಫೀಚರ್ಸ್ ಗಳನ್ನು ಹೊಂದಿವೆ. ಈ ಹ್ಯಾರಿಯರ್ ಸೇಫ್ಟಿ ದೃಷ್ಟಿಯಿಂದ ಅತ್ಯುತ್ತಮ ಕಾರೆಂದು ಗುರುತಿಸಿಕೊಂಡಿದ್ದು, ಗ್ಲೋಬಲ್ ಎನ್‌ಸಿಎಪಿ ಪರೀಕ್ಷೆಯ ವಯಸ್ಕರ ಸುರಕ್ಷತೆ ವಿಭಾಗದಲ್ಲಿ 34ಕ್ಕೆ 33.05 ಅಂಕ ಗಳಿಸುವ ಮೂಲಕ 5 - ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ.

Tata Harrier

ಇನ್ನು ಟಾಟಾ ಹ್ಯಾರಿಯರ್ ಎಸ್‍ಯುವಿ ಪ್ರತಿಯೊಬ್ಬರನ್ನು ಆಕರ್ಷಿಸುವ ಡಿಸೈನ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಮುಂಭಾಗದಲ್ಲಿ ಹಲವು ನವೀಕರಣಗಳನ್ನು ಒಳಗೊಂಡಿದ್ದು, ಹೊಸದಾದ ಗ್ರಿಲ್, ಸ್ಪ್ಲಿಟ್ ಹೆಡ್‌ಲೈಟ್ ಪಡೆದಿದೆ. ಜೊತೆಗೆ ಗ್ರಿಲ್‌ ಮೇಲ್ಭಾಗ ಫುಲ್-ವಿಡ್ತ್ (ಅಗಲ) ಎಲ್ಇಡಿ ಲೈಟ್ ಬಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಬಂಪರ್ ಕೂಡ ಹೊಸದಾಗಿದ್ದು, ಸೈಡ್ ಪ್ರೊಫೈಲ್‌ನಲ್ಲಿ ಹ್ಯಾರಿಯರ್ ಫೇಸ್‌ಲಿಫ್ಟ್‌ ಅಷ್ಟಾಗಿ ಬದಲಾವಣೆ ಪಡೆದುಕೊಂಡಿಲ್ಲ.

ಈ ಹ್ಯಾರಿಯರ್ ಎಸ್‍ಯುವಿಯಲ್ಲಿ 18 ಹಾಗೂ 19 ಇಂಚಿನ ಅಲಾಯ್ ವೀಲ್ಸ್ ಅನ್ನು ಹೊಂದಿದೆ. ಈ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಎಸ್‍ಯುವಿ ಹಿಂಭಾಗ ಹಲವು ಹೊಸತನವನ್ನು ಹೊಂದಿದೆ. ನವೀಕರಿಸಿದ ಬಂಪರ್ ಹಾಗೂ ಎಲ್ಇಡಿ ಲೈಟಿಂಗ್ ಅನ್ನು ಹೊಂದಿದೆ. ಇದರ ಒಟ್ಟಾರೆ ವಿನ್ಯಾಸ ಕಳೆದ ಜನವರಿಯಲ್ಲಿ ನಡೆದ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಹ್ಯಾರಿಯರ್ ಇವಿ ಮಾದರಿಗೆ ಹೋಲಿಕೆಯಾಗುತ್ತದೆ.

Article Published On: Tuesday, December 10, 2024, 8:30 [IST]
English summary
Tata harrier sales in november 2024 details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+