ಭಾರತೀಯರಿಗೆ ಭರ್ಜರಿ ಡಿಸ್ಕೌಂಟ್: ಮನೆಗೆ ತನ್ನಿ ಗಟ್ಟಿಮುಟ್ಟಾದ ಈ ಟಾಟಾ ಕಾರು!
ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ಸ್ವದೇಶಿ ಕಾರು ತಯಾರಕ ಕಂಪನಿಯಾಗಿ ದೇಶದಲ್ಲಿ ಹೆಸರುವಾಸಿಯಾಗಿದೆ. ಟಾಟಾ ಕಂಪನಿಯು ತನ್ನ ಹ್ಯಾರಿಯರ್ ಎಸ್‍ಯುವಿಯ ಹೊರಭಾಗ - ಒಳಭಾಗದಲ್ಲಿ ಸಾಕಷ್ಟು ನವೀನ ಬದಲಾವಣೆ ಹಾಗೂ ವೈಶಿಷ್ಟ್ಯಗಳನ್ನು ಪಡೆದಿರುವ ಫೇಸ್‌ಲಿಫ್ಟ್ ಹ್ಯಾರಿಯರ್ (Harrier facelift) ಎಸ್‌ಯುವಿಯನ್ನು ಮಾರುಕಟ್ಟೆಗೆ ಪರಿಚಯಿಸಿತು, ಈ ಎಸ್‍ಯುವಿ ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಟಾಟಾದ ಇತರ ಕಾರುಗಳಂತೆ ಸುರಕ್ಷತೆ ಮತ್ತು ಅತ್ಯಾಧುನಿಕ ಫಿಚರ್ಸ್ ಗಳನ್ನು ಹೊಂದಿರುವ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಯಲ್ಲಿ ಸಂಚಲನವನ್ನು ಸೃಷ್ಟಿಸಿದೆ.
ಈ ಟಾಟಾ ಹ್ಯಾರಿಯರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದೀಗ ಟಾಟಾ ಕಂಪನಿಯು ತನ್ನ ಹ್ಯಾರಿಯರ್ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ಘೋಷಿಸಿದೆ. ಟಾಟಾ ಹ್ಯಾರಿಯರ್ ಎಸ್‍ಯುವಿಯ ಮೇಲೆ ಉತ್ತಮವಾದ ಹಣಕಾಸಿನ ಪ್ರಯೋಜನಗಳನ್ನು ಹೊಂದಿದೆ. ಈ ಕಾರಿನ ಎಲ್ಲ ರೂಪಾಂತರಗಳು ರೂ.25,000 ವರೆಗೆ ರಿಯಾಯಿತಿ ಪಡೆದಿವೆ. ನೂತನ ಹ್ಯಾರಿಯರ್ ಕಾರು ರೂ.14.99 ರಿಂದ ರೂ.25.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಟಾಟಾ ಹ್ಯಾರಿಯರ್ (Tata Harrier) ಎಸ್‍ಯುವಿ ಪ್ರತಿಯೊಬ್ಬರನ್ನು ಆಕರ್ಷಿಸುವ ಡಿಸೈನ್ ಹೊಂದಿದೆ. ಮುಂಭಾಗದಲ್ಲಿ ಹಲವು ನವೀಕರಣಗಳನ್ನು ಒಳಗೊಂಡಿದ್ದು, ಹೊಸದಾದ ಗ್ರಿಲ್, ಸ್ಪ್ಲಿಟ್ ಹೆಡ್‌ಲೈಟ್ ಪಡೆದಿದೆ. ಜೊತೆಗೆ ಗ್ರಿಲ್ ಮೇಲ್ಭಾಗ ಫುಲ್-ವಿಡ್ತ್ (ಅಗಲ) ಎಲ್ಇಡಿ ಲೈಟ್ ಬಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಬಂಪರ್ ಕೂಡ ಹೊಸದಾಗಿದ್ದು, ಸೈಡ್ ಪ್ರೊಫೈಲ್‌ನಲ್ಲಿ ಹ್ಯಾರಿಯರ್ ಫೇಸ್‌ಲಿಫ್ಟ್ ಅಷ್ಟಾಗಿ ಬದಲಾವಣೆ ಪಡೆದಿಲ್ಲ.
ಇನ್ನು ಈ ಟಾಟಾ ಎಸ್‍ಯುವಿಯಲ್ಲಿ 18 ಹಾಗೂ 19 ಇಂಚಿನ ಅಲಾಯ್ ವೀಲ್ಸ್ ಅನ್ನು ಹೊಂದಿದೆ. ಈ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಎಸ್‍ಯುವಿ ಹಿಂಭಾಗ ಹಲವು ಹೊಸತನವನ್ನು ಹೊಂದಿದೆ. ನವೀಕರಿಸಿದ ಬಂಪರ್ ಹಾಗೂ ಎಲ್ಇಡಿ ಲೈಟಿಂಗ್ ಅನ್ನು ಹೊಂದಿದೆ. ಈ ಟಾಟಾ ಹ್ಯಾರಿಯರ್ ಎಸ್‍ಯುವಿಯ ಒಳಭಾಗದಲ್ಲೂ ಹಲವು ಬದಲಾವಣೆಗಳಾಗಿವೆ. ರೂಪಾಂತರಗಳಿಗೆ ಅನುಗುಣವಾಗಿ 10.25 - ಇಂಚು ಅಥವಾ 12.3 - ಇಂಚಿನ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಹೊಂದಿದೆ.

ಇನ್ನು ಈ ಟಾಟಾ ಎಸ್‍ಯುವಿಯ ಎಲ್ಇಡಿ ಅಂಬಿಯೇಟ್ ಲೈಟಿಂಗ್, 10.25 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಾಟಾ ಲೋಗೋದೊಂದಿಗೆ ಹೊಸದಾದ 4- ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, 10 - ಸ್ಪೀಕರ್ ಜೆಬಿಎಲ್ - ಟ್ಯೂನ್ಡ್ ಸೌಂಡ್ ಸಿಸ್ಟಮ್, 360 - ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೇರಿದಂತೆ ಹತ್ತಾರು ಫೀಚರ್ಸ್ ಗಳನ್ನು ಹೊಂದಿವೆ.
ಈ ಹ್ಯಾರಿಯರ್ ಸೇಫ್ಟಿ ದೃಷ್ಟಿಯಿಂದ ಅತ್ಯುತ್ತಮ ಕಾರೆಂದು ಗುರುತಿಸಿಕೊಂಡಿದ್ದು, ಗ್ಲೋಬಲ್ ಎನ್‌ಸಿಎಪಿ ಪರೀಕ್ಷೆಯ ವಯಸ್ಕರ ಸುರಕ್ಷತೆ ವಿಭಾಗದಲ್ಲಿ 34ಕ್ಕೆ 33.05 ಅಂಕ ಗಳಿಸುವ ಮೂಲಕ 5 - ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ಟಾಟಾ ಹ್ಯಾರಿಯರ್ ಎಸ್‌ಯುವಿ ಎಂಜಿನ್ ಪರ್ಫಾಮೆನ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 2.0 - ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿದ್ದು, 170 hp ಪವರ್ ಹಾಗೂ 350 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಈ ಎಂಜಿನ್ ನೊಂದಿಗೆ 6 - ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಈ ಎಸ್‍ಯುವಿ ಇಕೋ, ಸಿಟಿ ಮತ್ತು ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಒಳಗೊಂಡಿದೆ. ಈ ಟಾಟಾ ಹ್ಯಾರಿಯರ್ (Tata Harrier) ಮಾದರಿಗೆ ಹುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications