Tata: ಈ ಜನಪ್ರಿಯ ಕಾರು ಖರೀದಿಸಬೇಕೇ.. ಇಲ್ಲಿದೆ ಸಿಹಿಸುದ್ದಿ, ರೂ.15 ಲಕ್ಷ ಬೆಲೆ, 5-ಸ್ಟಾರ್ ಸೇಫ್ಟಿ ರೇಟಿಂಗ್
ಭಾರತದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನವೀಕರಿಸಿದ ಹ್ಯಾರಿಯರ್ (Facelift Harrier) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಈ ಫೆಬ್ರವರಿಯಲ್ಲಿ ಇದರ ಕಾಯುವಿಕೆ ಅವಧಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎಂಬ ವಿವರಗಳು ಲಭಿಸಿದೆ.
ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ (Tata Harrier Facelift) ಎಸ್‌ಯುವಿಯನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆಯಾಗಲು 3 ರಿಂದ 6 ವಾರಗಳ ಕಾಲಾವಕಾಶ ಬೇಕಾಗಿದೆ. ಇದು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್ (Dealership), ರೂಪಾಂತರ (Variant) ಹಾಗೂ ಬಣ್ಣ(Colour)ಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಕಾರು, ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್, ಅಡ್ವೆಂಚರ್, ಫಿಯರ್ ಲೆಸ್ ರೂಪಾಂತರ ಮತ್ತು ಕೋರಲ್ ರೆಡ್, ಪೆಬಲ್ ಗ್ರೇ, ಲೂನಾರ್ ವೈಟ್, ಒಬೆರಾನ್ ಬ್ಲಾಕ್, ಸೀವೀಡ್ ಗ್ರೀನ್ ಸೇರಿದಂತೆ ವಿವಿಧ ಅತ್ಯಾಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ.
ವಿನ್ಯಾಸದ ದೃಷ್ಟಿಯಿಂದಲೂ ಹ್ಯಾರಿಯರ್ ಎಸ್‌ಯುವಿ ಆಕರ್ಷಣೀಯವಾಗಿದೆ. ಹಿಂದಿನ ಮಾದರಿಗೆ ಹೋಲಿಕೆ ಮಾಡಿದರೆ ಹಲವು ಬದಲಾವಣೆಗಳನ್ನು ಪಡೆದುಕೊಂಡಿದೆ. ನವೀಕೃತ ಗ್ರಿಲ್, ಸ್ಪ್ಲಿಟ್ ಹೆಡ್‌ಲೈಟ್ ಅನ್ನು ಹೊಂದಿದೆ. ಗ್ರಿಲ್ ಮೇಲ್ಭಾಗದಲ್ಲಿ ಎಲ್ಇಡಿ ಲೈಟ್ ಬಾರ್ ಇದ್ದು, 18 ಹಾಗೂ 19 ಇಂಚಿನ ಅಲಾಯ್ ವೀಲ್ಸ್ ಪಡೆದಿದೆ. ಹಿಂಭಾಗದ ವಿನ್ಯಾಸ (ಡಿಸೈನ್)ವು ಸಹ ಹೆಚ್ಚು ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಪವರ್‌ಟ್ರೇನ್ ಬಗ್ಗೆ ಮಾತನಾಡುವುದಾದರೆ, ಇದು 2.0-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 170 ಪವರ್ ಹಾಗೂ 350 ಎನ್ಎಂ ಪೀಕ್ ಟಾರ್ಕ್ ಹೊರ ಹಾಕುವ ಸಾಮರ್ಥ್ಯವನ್ನು ಪಡೆದಿದೆ. ರೂಪಾಂತರಗಳ ಅನ್ವಯ 6-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 14.60 ಕೆಎಂಪಿಎಲ್ - 16.80 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಈ ಕಾರು ರೂಪಾಂತರಗಳಿಗೆ ತಕ್ಕಂತೆ 10.25-ಇಂಚು ಅಥವಾ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹೊಂದಿದೆ. ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೋಕ್ ಸ್ಟೀರಿಂಗ್ ವೀಲ್, ಡುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಇಕೋ, ಸಿಟಿ & ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್ ಗಳನ್ನು ಪಡೆದಿದೆ.
ದೇಶದ ವಾಹನ ಸುರಕ್ಷತಾ ಪರೀಕ್ಷಾ ಸಂಸ್ಥೆ 'ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ' (ಭಾರತ್ ಎನ್‌ಸಿಎಪಿ - Bharat NCAP) ಪರೀಕ್ಷೆಯಲ್ಲಿ ಟಾಟಾ ಹ್ಯಾರಿಯರ್ ಕಾರು 5-ಸ್ಟಾರ್ ರೇಟಿಂಗ್ ಪಡೆದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಹಿಲ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications