TATA: ರತನ್ ಟಾಟಾ ಕಂಪನಿಯಿಂದ ಬರಲಿವೆ 2 ಹೊಸ ಕಾರುಗಳು.. ದುಡ್ಡು ಕೂಡಿಡಿ!

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ, ಟಿಗೊರ್, ಆಲ್ಟ್ರೋಜ್, ಪಂಚ್, ನೆಕ್ಸಾನ್‌ ಮತ್ತು ಸಫಾರಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಕಂಪನಿಯು ನೆಕ್ಸಾನ್ ಸಿಎನ್‌ಜಿ (Nexon CNG) ಮತ್ತು ಹ್ಯಾರಿಯರ್ (Harrier) ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟಕ್ಕೆ ತರಲು ದೊಡ್ಡಮಟ್ಟದಲ್ಲಿ ತಯಾರಿ ಮಾಡಿಕೊಳ್ಳುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಈ ತಿಂಗಳಾಂತ್ಯದಲ್ಲಿ ಬಿಡುಗಡೆಯಾಗಲು ಸಿದ್ಧಗೊಂಡಿರುವ ಟಾಟಾ ನೆಕ್ಸಾನ್ ಸಿಎನ್‌ಜಿ (Tata Nexon CNG) ಕುರಿತಂತೆ ಮಾತನಾಡೋಣ. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ರೂ.9 ಎಕ್ಸ್ ಶೋರೂಂ ಬೆಲೆಗೆ ಬಿಡುಗಡೆಯಾಗಬಹುದು ಎಂದು ಅಂದಾಜಿಸಲಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಗ್ರಾಹಕರಿಗೆ ಲಭ್ಯವಾಗಲಿದೆ.

Tata Launch New Two Cars Soon Details

ನೂತನ ಟಾಟಾ ನೆಕ್ಸಾನ್ ಸಿಎನ್‌ಜಿ ಕಾರು, 1.2-ಲೀಟರ್ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಪಡೆದಿರಲಿದ್ದು, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 150 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕಲಿದೆ ಎಂದು ಹೇಳಲಾಗಿದೆ. 5 ಸ್ಪೀಡ್ ಮ್ಯೂನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದ್ದು, 26.99 ಕೆಎಂ/ಕೆಜಿ ಮೈಲೇಜ್ ನೀಡಬಹುದು ಎನ್ನಲಾಗಿದೆ.

ಹೊಸ ಟಾಟಾ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ, ಇಂಧನ ಹಾಗೂ ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್‌ನಂತೆಯೇ ಬಹುತೇಕ ಎಲ್ಲ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಇದರೊಟ್ಟಿಗೆ 60-ಲೀಟರ್ ಸಾಮರ್ಥ್ಯದ ಟ್ವಿನ್ ಸಿಎನ್‌ಜಿ ಟ್ಯಾಂಕ್‌ನ್ನು ಹೊಂದಿರಲಿದ್ದು, ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 230 ಲೀಟರ್‌ನ ಬೂಟ್ ಸ್ಪೇಸ್‌ ಕೂಡ ಪಡೆದಿರಲಿದೆ ಎಂದು ತಿಳಿದುಬಂದಿದೆ.

Tata Launch New Two Cars Soon Details

ಮುಂಬರುವ ತಿಂಗಳಲ್ಲಿ ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) ಸಹ ಬಿಡುಗಡೆಯಾಗಲಿದೆ. ಈ ಎಲೆಕ್ಟ್ರಿಕ್ ಕಾರು ರೂ.25 ರಿಂದ ರೂ.35 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿರಬಹುದು ಎನ್ನಲಾಗಿದೆ. ಇದು ದೊಡ್ಡದಾದ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ಈ ಟಾಟಾ ಹ್ಯಾರಿಯರ್ ಇವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದ್ದು, ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿರಬಹುದು. ಜೊತೆಗೆ ಆಕರ್ಷಕವಾದ ವಿನ್ಯಾಸವನ್ನು ಹೊಂದಿರಲಿದ್ದು, ಬಹುತೇಕ ಇಂಧನ ಚಾಲಿತ ಹ್ಯಾರಿಯರ್ ಕಾರಿಗೆ ಹೋಲಿಕೆಯಾಗುತ್ತದೆ ಎಂದು ತಿಳಿದುಬಂದಿದೆ. ನವೀನವಾಗಿರುವ ಅಲಾಯ್ ವೀಲ್‌ಗಳು ಮತ್ತು ಬಂಪರ್‌ಗಳನ್ನು ಪಡೆದಿರಲಿದೆ ಎನ್ನಲಾಗಿದೆ.

ಹೊಸ ಟಾಟಾ ಹ್ಯಾರಿಯರ್ ಇವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ವಿನ್-ಸ್ಪೋಕ್ ಸ್ಟೀರಿಂಗ್ ವೀಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, September 19, 2024, 22:51 [IST]
English summary
Tata launch new two cars soon details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+