Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಶೀಘ್ರದಲ್ಲಿಯೇ ಆಕರ್ಷಕ ವೈಶಿಷ್ಟ್ಯ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ 4 ಹೊಚ್ಚ ಹೊಸ ಎಸ್ಯುವಿಗಳನ್ನು ಬಿಡುಗಡೆಗೊಳಿಸಲು ತಯಾರಿಯನ್ನು ನಡೆಸುತ್ತಿದೆ. ಆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಮೊದಲಿಗೆ ಬಹುತೇಕ ಈ ವರ್ಷವೇ ಬಿಡುಗಡೆಗೊಳ್ಳಲಿರುವ ಟಾಟಾ ಕರ್ವ್ (Tata Curvv) ಎಸ್ಯುವಿ ಕುರಿತು ಮಾತನಾಡೋಣ. ಈ ಕಾರು ಹಲವು ಬಾರಿ ಪರೀಕ್ಷಾರ್ಥ ಸಂಚಾರವನ್ನು ನಡೆಸುವಾಗ ಕಂಡುಬಂದಿದೆ. ಇತ್ತೀಚೆಗೆ ಚಾರ್ಜಿಂಗ್ ಸ್ಟೇಷನ್ ನಿಂತಿದ್ದ ಕರ್ವ್ ಎಸ್ಯುವಿ ಫೋಟೋಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿದ್ದವು. ನೂತನ ಕರ್ವ್, ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿರಲಿದೆ ಎಂದು ತಿಳಿದುಬಂದಿದೆ.

ಟಾಟಾ ಕಂಪನಿಯು ಕರ್ವ್ ಎಸ್ಯುವಿಯನ್ನು ಎಲೆಕ್ಟ್ರಿಕ್ ಮತ್ತು ಇಂಧನ ಚಾಲಿತ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಲಿದೆ ಎನ್ನಲಾಗಿದೆ. ಕರ್ವ್ ಇವಿಯು ನೆಕ್ಸಾನ್ ಇವಿಯಂತೆ 30 ಕೆಡಬ್ಲ್ಯೂಹೆಚ್ ಮತ್ತು 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಭರ್ತಿ ಚಾರ್ಜ್ ನಲ್ಲಿ 325 - 465 ಕಿ.ಮೀ ಕ್ರಮಿಸಲಿದೆ ಎಂದು ಅಂದಾಜಿಸಲಾಗಿದೆ. ಇಂಧನ ಚಾಲಿತ ಕಾರು 1.2-ಲೀಟರ್ ಪೆಟ್ರೋಲ್ - 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಮೈಕ್ರೋ ಎಸ್ಯುವಿಯಾಗಿ ಟಾಟಾ ಪಂಚ್ (Tata Punch) ಹೊರಹೊಮ್ಮಿದೆ. ಕೆಲ ತಿಂಗಳ ಹಿಂದೆಯಷ್ಟೇ ನವೀನ ವಿನ್ಯಾಸದೊಂದಿಗೆ ಪಂಚ್ ಇವಿ ಬಿಡುಗಡೆಯಾಗಿತ್ತು. ಬಹುತೇಕ ಈ ವರ್ಷವೇ ಇಂಧನ ಚಾಲಿತ ಟಾಟಾ ಪಂಚ್ ಫೇಸ್ಲಿಫ್ಟ್ (Tata Punch Facelift) ಆವೃತ್ತಿಯು ಪರಿಚಯಗೊಳ್ಳುವ ನಿರೀಕ್ಷೆಯಿದೆ.

ನೂತನ ಪಂಚ್ ಕಾರು ಉತ್ತಮವಾದ ವಿನ್ಯಾಸವನ್ನು ಪಡೆದಿರಲಿದ್ದು, ಮುಂಭಾಗ ಆಕರ್ಷಕ ಹೆಡ್ಲ್ಯಾಂಪ್ಸ್, ಎಲ್ಇಡಿ ಡಿಆರ್ಎಲ್, ನವೀಕೃತ ಬಂಪರ್ ಅನ್ನು ಹೊಂದಿರಬಹುದು. ಒಳಭಾಗವು ಹೆಚ್ಚು ಅತ್ಯುತ್ತಮವಾಗಿರಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 10.25-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್, 360-ಡಿಗ್ರಿ ಪಾರ್ಕಿಂಗ್ ಕ್ಯಾಮೆರಾ, ವೈರ್ಲೆಸ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿರಲಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.
ಟಾಟಾ ಮಾರಾಟಗೊಳಿಸುವ ಶಕ್ತಿಯುತ ಸಫಾರಿ (Safari) ಹಾಗೂ ಹ್ಯಾರಿಯರ್ (Harrier) ಎಸ್ಯುವಿಗಳು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಖರೀದಿ ಲಭ್ಯವಿವೆ. ಮುಂಬರುವ ಕೆಲವೇ ತಿಂಗಳಲ್ಲಿ ಪೆಟ್ರೋಲ್ ಚಾಲಿತ ರೂಪಾಂತರಗಳನ್ನು ಸಹ ಕಂಪನಿಯು ಬಿಡುಗಡೆಗೊಳಿಸಬಹುದು. ಇವು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಸಫಾರಿ ಎಸ್ಯುವಿ, ರೂ.16.19 ಲಕ್ಷದಿಂದ 27.34 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿರುವ ಈ ಕಾರು, 16.3 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ. ಟಾಟಾ ಹ್ಯಾರಿಯರ್ ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಜೊತೆಗೆ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications