ಟಾಟಾ ತಾಕತ್ತು ಮತ್ತೆ ಸಾಬೀತು: ಧೂಳೆಬ್ಬಿಸಿದ ರತನ್ ಟಾಟಾ ಕಾರುಗಳು!

ಜನಪ್ರಿಯ ಮತ್ತು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ (Tata Motors) ಭಾರತೀಯ ಮಾರುಕಟ್ಟೆಯಲ್ಲಿ ಹಲವು ಜನಪ್ರಿಯ ಮಾದರಿಗಳನ್ನು ಮಾರಾಟ ಮಾಡುತ್ತಿವೆ. ಟಾಟಾ ಕಂಪನಿಯು ಕಳೆದ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2024ರ ಅಕ್ಟೋಬರ್ ತಿಂಗಳಿನಲ್ಲಿ ಟಾಟಾ ಕಂಪನಿಯು 48,133 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಇನ್ನು ಅಕ್ಟೋಬರ್ ತಿಂಗಳಿನಲ್ಲಿ ಮಾರಾಟವಾದ 48,343 ಯೂನಿಟ್‌ಗಳಿಗೆ ಹೋಲಿಸಿದರೆ ಸಮತಟ್ಟಾಗಿದೆ. 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾರಾಟವಾದ 41,065 ಯುನಿಟ್‌ಗಳಿಗೆ ಹೋಲಿಸಿದರೆ ಶೇ. 17 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಟಾ

2024ರ ಅಕ್ಟೋಬರ್ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಮಾರುತಿ, ಹುಂಡೈ ಮತ್ತು ಮಹೀಂದ್ರಾ ನಂತರ 4 ನೇ ಹೆಚ್ಚು ಮಾರಾಟವಾದ ವಾಹನ ತಯಾರಕರಾಗಿ ಮುಂದುವರೆದಿದೆ. ಸದ್ಯ ಟಾಟಾ ಮೋಟಾರ್ಸ್ ಕಂಪನಿಯು ಶೇ. 12.1 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಟಾಟಾ ಕಾರುಗಳ ಸರಣಿಯಲ್ಲಿ ಆಲ್ಟ್ರೊಜ್ ಹೊರತುಪಡಿಸಿ ಕಂಪನಿಯ ಪ್ರತಿಯೊಂದು ಮಾದರಿಯು ತಿಂಗಳಿನಿಂದ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

Tata

ಇನ್ನು ವಾರ್ಷದಿಂದ ವರ್ಷದ ಮಾರಾಟದಲ್ಲಿ ನಾಲ್ಕು ಮಾದರಿಗಳು ಕುಸಿತವನ್ನು ಕಂಡಿದೆ. ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪೋರ್ಟ್‌ಫೋಲಿಯೊದಾದ್ಯಂತ 8 ಕಾರುಗಳು ಮತ್ತು ಎಸ್‍ಯುವಿಗಳನ್ನು ಹೊಂದಿದೆ. ಅದರಲ್ಲಿ 5 ಅನ್ನು ಅವುಗಳ ಎಲೆಕ್ಟ್ರಿಕ್ ಕೌಂಟರ್‌ಪಾರ್ಟ್‌ಗಳೊಂದಿಗೆ ನೀಡಲಾಗುತ್ತದೆ. ಟಾಟಾ ಪಂಚ್ ಮಾದರಿಯು ಕಳೆದ ತಿಂಗಳು ಅತಿ ಹೆಚ್ಚು ಮಾರಾಟವಾದ ಮಾದರಿಯಾಗಿದೆ.

2024ರ ಅಕ್ಟೋಬರ್ ತಿಂಗಳಿನಲ್ಲಿ ಟಾಟಾ ಪಂಚ್ ಮಾದರಿಯ 15,740 ಯುನಿಟ್‌ಗಳು ಮಾರಾಟವಾಗಿತ್ತು. 2023ರ ಅಕ್ಟೋಬರ್ ತಿಂಗಳಿನಲ್ಲಿ 15,317 ಯೂನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.3 ರಷ್ಟು ಹೆಚ್ಚಾಗಿದೆ. ಇನ್ನು 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾರಾಟವಾದ 13,711 ಯೂನಿಟ್‌ಗಳನ್ನು ಹೋಲಿಸಿದರೆ ಶೇ. 15 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

Tata

ಟಾಟಾ ಮೋಟಾರ್ಸ್ ಕಂಪನಿಯು ತನ್ನ ವೆಬ್‌ಸೈಟ್‌ನಿಂದ ಪಂಚ್‌ನ ಕೆಲವು ರೂಪಾಂತರಗಳನ್ನು ತೆಗೆದುಹಾಕಲಾಗಿದೆ ಅದರ ಸನ್‌ರೂಫ್ ರೂಪಾಂತರಗಳಿಗೆ ಹೆಚ್ಚಿನ ಬೇಡಿಕೆಯೊಂದಿಗೆ CNG ಆಯ್ಕೆಗಳನ್ನು ಗುರುತಿಸಲಾಗಿದೆ. ಟಾಟಾ ನೆಕ್ಸಾನ್ ಕಳೆದ ತಿಂಗಳು 14,759 ಯುನಿಟ್ ಮಾರಾಟದೊಂದಿಗೆ ಕಳೆದ ತಿಂಗಳು ಹೆಚ್ಚು ಮಾರಾಟವಾದ ಎರಡನೇ ಟಾಟಾ ಕಾರ್ ಆಗಿದೆ.

2024ರ ಅಕ್ಟೋಬರ್ ತಿಂಗಳಿನಲ್ಲಿ ಟಾಟಾ ನೆಕ್ಸಾನ್ ಮಾದರಿಯ 14,759 ಯುನಿಟ್‌ಗಳು ಮಾರಾಟವಾಗಿತ್ತು. 2023ರ ಅಕ್ಟೋಬರ್ ತಿಂಗಳಿನಲ್ಲಿ 16,887 ಯೂನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.13 ರಷ್ಟು ಹಿನ್ನಡೆಯಾಗಿದೆ. ಇನ್ನು 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾರಾಟವಾದ 11,470 ಯೂನಿಟ್‌ಗಳನ್ನು ಹೋಲಿಸಿದರೆ ಶೇ.29 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

Tata

ಭಾರತದ ಪ್ರಮುಖ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಿಯಾಗೊ, ಟಿಗೂರ್, ಆಲ್ಟ್ರೋಜ್, ಪಂಚ್, ನೆಕ್ಸಾನ್, ಹ್ಯಾರಿಯರ್ ಮತ್ತು ಸಫಾರಿ ಕಾರುಗಳಿಗೆ ಈ ನವೆಂಬರ್‌ನಲ್ಲಿ ಭರ್ಜರಿ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಆದರೆ, ಕೆಲವೇ ತಿಂಗಳ ಹಿಂದೆ ಬಿಡುಗಡೆಯಾಗಿದ್ದ 'ಕರ್ವ್' ಕಾರಿಗೆ ಯಾವುದೇ ರಿಯಾಯಿತಿ ನೀಡಲಾಗಿಲ್ಲ.

ಒಟ್ಟಾರೆಯಾಗಿ, ಟಾಟಾ ಮೋಟಾರ್ಸ್ ಕಂಪನಿ ಘೋಷಣೆ ಮಾಡಿರುವ ಈ ರಿಯಾಯಿತಿಯಿಂದ ಹೊಸ ಕಾರು ಖರೀದಿ ಮಾಡಬೇಕು ಅಂದುಕೊಳ್ಳುವ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅದರಲ್ಲೂ ಕೆಲವು ಕಾರುಗಳು ಉತ್ತಮ ಹಣಕಾಸಿನ ಪ್ರಯೋಜನಗಳನ್ನು ಹೊಂದಿದ್ದು, ಕಾರು ತೆಗೆದುಕೊಳ್ಳಬೇಕೆಂಬ ನಿಮ್ಮ ಕನಸು ಸುಲಭವಾಗಿ ನನಸಾಗಲಿದೆ ಎಂದು ಹೇಳಿದರೆ ತಪ್ಪಾಗವುದಿಲ್ಲ. ಇನ್ನು ವರ್ಷದಿಂದ ವರ್ಷಕ್ಕೆ ಶೇ.2 ರಷ್ಟು ಕುಸಿತ ಅಷ್ಟು ದೊಡ್ದ ಕುಸಿತವಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, November 12, 2024, 13:57 [IST]
English summary
Tata motors october 2024 sales report details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+