ಟಾಟಾ ತಾಕತ್ತು ಮತ್ತೆ ಸಾಬೀತು: ಬಿರುಗಾಳಿ ಎಬ್ಬಿಸಿದ ರತನ್ ಟಾಟಾ ಕಾರುಗಳು!
ಗರಿಷ್ಟ ಗುಣಮಟ್ಟದ ಕಾರುಗಳ ನಿರ್ಮಾಣ ಕಂಪನಿಯಾಗಿ ಸ್ವದೇಶಿ ಬ್ರ್ಯಾಂಡ್ ಟಾಟಾ ಮೋಟಾರ್ಸ್ (Tata Motors) ಹೆಚ್ಚು ಜನಪ್ರಿಯತೆ ಗಳಿಸಿದೆ. ಟಾಟಾ ಮೋಟಾರ್ಸ್ ಕಂಪನಿಯು 2024ರ ನವೆಂಬರ್ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿ ಪ್ರಕಾರ, ಕಳೆದ ತಿಂಗಳಿನಲ್ಲಿ ಟಾಟಾ ಕಂಪನಿಯು 74,753 ಯುನಿಟ್ ಗಳನ್ನು ಮಾರಾಟ ಮಾಡಿವೆ. ಇನ್ನು ಕಳೆದ ವರ್ಷದ ಅದೇ ನವೆಂಬರ್ ತಿಂಗಳಿನಲ್ಲಿ 74,172 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಹಬ್ಬಗಳ ಸೀಸನ್ ಆಗಿರುವುದರಿಂದ ಟಾಟಾ ಕಂಪನಿಯು ಮಾರಾಟದಲ್ಲಿ ಸ್ವಲ್ಪ ಹೆಚ್ಚಳವನ್ನು ಸಾಧಿಸುವಲ್ಲಿ ಯಶ್ವಸಿಯಾಗಿದೆ.
ದೇಶೀಯ ಮಾರಾಟಕ್ಕೆ ಸಂಬಂಧಿಸಿದಂತೆ ಟಾಟಾ ಕಂಪನಿಯು ಪ್ಯಾಸೆಂಜರ್ ವೆಹಿಕಲ್ (ಪಿವಿ) ಮತ್ತು ಇವಿಗಳು ಸೇರಿದಂತೆ 2024ರ ನವೆಂಬರ್ ತಿಂಗಳಿನಲ್ಲಿ 47,063 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ಇದೇ ಅವಧಿಯಲ್ಲಿ 46,068 ಯುನಿಟ್‌ಗಳನ್ನು ಮಾರಾಟಗೊಳಿಸಿತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.2 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಟಾಟಾದ ಪ್ರಯಾಣಿಕ ವಾಹನಗಳ ಮಾರಾಟವು ಅದರ ಎಸ್‍ಯುವಿಗಳು ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ. ಇದರಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಪಂಚ್, ನೆಕ್ಸಾನ್, ಕರ್ವ್, ಹ್ಯಾರಿಯರ್ ಮತ್ತು ಸಫಾರಿ ಮಾದರಿಗಳು ಸೇರಿವೆ. ಇನ್ನು ಟಾಟಾ ಪಂಚ್, ನೆಕ್ಸಾನ್ ಮತ್ತು ಕರ್ವ್ ಗಳನ್ನು ಇಂಧನ ಚಾಲಿತ (ICE) ಮತ್ತು ಎಲೆಕ್ಟ್ರಿಕ್ ವೆಹಿಕಲ್ (EV) ರೂಪಾಂತರಗಳಲ್ಲಿ ಕೂಡ ಮಾರಾಟ ಮಾಡುತ್ತಿದೆ.
ಭಾರತದ ಇವಿ (ಎಲೆಕ್ಟ್ರಿಕ್ ವೆಹಿಕಲ್) ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಅತಿಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಅದರಲ್ಲೂ ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಮತ್ತು ಕರ್ವ್ ಇವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. 2025ರಲ್ಲಿ ಎರಡು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಕಂಪನಿಯು ತೆರೆಮರೆಯಲ್ಲಿ ಸಿದ್ದತೆಯನ್ನು ನಡೆಸುತ್ತಿದೆ.

ಎಲ್ಲವು ಅಂದುಕೊಂಡಂತೆ ನಡೆದರೆ, ಮೊದಲಿಗೆ ಹ್ಯಾರಿಯರ್ ಇವಿ, ಆ ನಂತರದ ದಿನಗಳಲ್ಲಿ ಸಿಯೆರಾ ಇವಿಯನ್ನು ಮಾರಾಟಕ್ಕೆ ತರಲಿದೆ. 2023ರಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಆಟೋ ಎಕ್ಸ್‌ಪೋದಲ್ಲಿಯೇ ಟಾಟಾ ಸಿಯೆರಾ ಇವಿಯ ಕಾನ್ಸೆಪ್ಟ್ ಮಾಡೆಲ್‌ನ್ನು ಪ್ರದರ್ಶಿಸಲಾಗಿತ್ತು. ಸದ್ಯ, ಉತ್ಪಾದನೆಗೆ ಸಿದ್ದಗೊಂಡಿರುವ ಹೊಚ್ಚ ಹೊಸ ಟಾಟಾ ಸಿಯೆರಾ ಇವಿ ಫೋಟೋಗಳು ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಲ್‌ಚಲ್ ಸೃಷ್ಟಿಸಿವೆ ಎಂದು ಹೇಳಬಹುದು.
ಈ ಫೋಟೋಗಳಲ್ಲಿ ನೂತನ ಎಲೆಕ್ಟ್ರಿಕ್ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬ್ಲಾಂಕ್ಡ್ ಆಫ್ ಗ್ರಿಲ್, ಬ್ಲ್ಯಾಕ್ಡ್ ಔಟ್ ಫ್ರಂಟ್ ಬಂಪರ್, ಡುಯಲ್ ಟೋನ್ ರೂಫ್, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿರುವುದನ್ನು ಕಾಣಬಹುದು.
ನೂತನ ಟಾಟಾ ಸಿಯೆರಾ ಇವಿ ಕೂಡ 'ಕರ್ವ್' ಎಲೆಕ್ಟ್ರಿಕ್ ಕಾರಿನಂತೆ ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರುವ ಸಾಧ್ಯತೆಯಿದೆ. ಸಂಪೂರ್ಣವಾಗಿ ಚಾರ್ಜ್ ಮಾಡಿದರೆ ಬರೋಬ್ಬರಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ ಗರಿಷ್ಠ ಪವರ್ ಮತ್ತು ಪೀಕ್ ಟಾರ್ಕ್ ಉತ್ಪಾದಿಸಲಿದೆ ಎಂದು ಅಂದಾಜಿಸಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications