TATA: ಟಾಟಾದಿಂದ ಬರಲಿವೆ 3 ನೂತನ ಕಾರುಗಳು.. ಸರಿ ಸಾಟಿಯಿಲ್ಲದ ವೈಶಿಷ್ಟ್ಯಗಳು, ಈಗಲೇ ದುಡ್ಡು ಎತ್ತಿಡಿ!
ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ, ಟಿಗೂರ್, ಪಂಚ್, ಆಲ್ಟ್ರೊಜ್, ಸಫಾರಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತೀಚೆಗೆ 'ಕರ್ವ್' ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸುವ ಮೂಲಕ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಸೆಪ್ಟೆಂಬರ್ 2ರಂದು ಈ ಕಾರು ಇಂಧನ ಚಾಲಿತ ರೂಪದಲ್ಲಿ ಮಾರಾಟಕ್ಕೆ ಬರಲಿದೆ. ಆ ನಂತರ ಸಿಎನ್‌ಜಿ ಆಯ್ಕೆಯಲ್ಲಿ ನೆಕ್ಸಾನ್ ಮತ್ತು ಹ್ಯಾರಿಯರ್ ಇವಿಗಳನ್ನು (ಎಲೆಕ್ಟ್ರಿಕ್ ಕಾರು) ಪರಿಚಯಿಸಲಿದೆ.
ಮೊದಲಿಗೆ ಸೆಪ್ಟೆಂಬರ್ 2ರಂದು ಮಾರಾಟಕ್ಕೆ ಬರಲಿರುವ ಇಂಧನ ಚಾಲಿತ ಟಾಟಾ ಕರ್ವ್ (Tata Curvv) ಬಗ್ಗೆ ಮಾತನಾಡೋಣ. ಇದೊಂದು ಕೂಪೆ ಎಸ್‌ಯುವಿಯಾಗಿದೆ. ಈ ಕಾರಿನ ಎಲ್ಲ ವಿವರಗಳು ಬಹಿರಂಗಗೊಂಡಿದ್ದು, ಅಧಿಕೃತ ಬೆಲೆಯನ್ನು ಮಾತ್ರ ಘೋಷಣೆ ಮಾಡಬೇಕಾಗಿದೆ. ನೂತನ ಕರ್ವ್ 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೋಕ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಹೊಸ ಟಾಟಾ ನೆಕ್ಸಾನ್ ಸಿಎನ್‌ಜಿ (Tata Nexon CNG) ಎಸ್‌ಯುವಿಯು ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ. ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದೆ. 100 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 150 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದೆ ಎನ್ನಲಾಗಿದ್ದು, 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.

ನೂತನ ನೆಕ್ಸಾನ್ ಸಿಎನ್‌ಜಿ 26.99 ಕೆಎಂ/ಕೆಜಿ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. ಇದರ ಹಲವು ವೈಶಿಷ್ಟ್ಯಗಳು ಇಂಧನ ಚಾಲಿತ ನೆಕ್ಸಾನ್ ಕಾರಿಗೆ ಹೋಲಿಕೆಯಾಗಲಿದ್ದು, ರೂ.9 ಲಕ್ಷದಿಂದ ರೂ.10.40 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಹೇಳಲಾಗಿದೆ. ಇದಕ್ಕೆ ಮಾರುತಿ ಸುಜುಕಿ ಬ್ರೆಝಾ ಸಿಎನ್‌ಜಿ ಪ್ರಬಲವಾದ ಪ್ರತಿಸ್ಪರ್ಧಿಯಾಗಲಿದೆ.
ಟಾಟಾ ಹ್ಯಾರಿಯರ್ ಇವಿ (Tata Harrier EV) ಸಹ ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಇದು ಎಲೆಕ್ಟ್ರಿಕ್ ಕಾರು ಆಗಿರುವುದರಿಂದ ದೊಡ್ಡದಾದ ಬ್ಯಾಟರಿ ಪ್ಯಾಕ್ ಒಳಗೊಂಡಿರಲಿದ್ದು, ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ಗೂ ಅಧಿಕ ರೇಂಜ್ (ಮೈಲೇಜ್) ಕೊಡಬಹುದು ಎಂದು ತಿಳಿದುಬಂದಿದೆ. ರೂ.25 ಲಕ್ಷದಿಂದ ರೂ.35 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುವ ನಿರೀಕ್ಷೆಯಿದೆ.

ಈ ಹ್ಯಾರಿಯರ್ ಇವಿ ದೊಡ್ಡದಾದ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಟ್ವಿನ್-ಸ್ಪೋಕ್ ಸ್ಟೀರಿಂಗ್ ವೀಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6-ಏರ್‌ಬ್ಯಾಗ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications