Tata Nexon: 7 ವರ್ಷ.. 7 ಲಕ್ಷ ಟಾಟಾ ನೆಕ್ಸಾನ್ ಕಾರು ಮಾರಾಟ, ಮತ್ತೆ ಬಂತು ಶುಭಕಾಲ.. ರೂ.1 ಲಕ್ಷ ರಿಯಾಯಿತಿ!

ದೇಶದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಹಳ್ಳಿಯಿಂದ ದಿಲ್ಲಿವರೆಗೆ ಖ್ಯಾತಿಗಳಿಸಿದೆ. ಕಂಪನಿಯು ಟಿಯಾಗೊ, ಟಿಗೂರ್, ಪಂಚ್, ಹ್ಯಾರಿಯರ್, ಸಫಾರಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, 'ನೆಕ್ಸಾನ್' ಎಸ್‌ಯುವಿ ಮಾರಾಟದಲ್ಲಿ ಕಂಪನಿಯು ಐತಿಹಾಸಿಕ ಮೈಲಿಗಲ್ಲನ್ನು ನಿರ್ಮಾಣ ಮಾಡಿದ್ದು, ಈ ಕಾರನ್ನು ಮತ್ತಷ್ಟು ಖರೀದಿದಾರರಿಗೆ ಹತ್ತಿರವಾಗುಸಲು ದೊಡ್ಡಮಟ್ಟದ ರಿಯಾಯಿತಿಯನ್ನು ಘೋಷಿಸಿದೆ.

ಟಾಟಾ ಮೋಟಾರ್ಸ್ 2017ರ ದ್ವಿತೀಯಾರ್ಧದಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ನೆಕ್ಸಾನ್ (Nexon) ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಅಂದಿನಿಂದಲೂ ಈ ಕಾರು ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕಂಪನಿಯು 7 ವರ್ಷಗಳಲ್ಲಿ ಬರೋಬ್ಬರಿ 7 ಲಕ್ಷ ನೆಕ್ಸಾನ್ ಎಸ್‌ಯುವಿಗಳನ್ನು ಮಾರಾಟಗೊಳಿಸುವ ಮೂಲಕ ಹೊಸದೊಂದು ದಾಖಲೆಯನ್ನು ನಿರ್ಮಾಣ ಮಾಡಿದೆ.

Tata Nexon 7 Years 7 Lakh Car Sales Milestone Upto Rs 1 Lakh Discount In June 2024 24 Km Mileage

ಪ್ರಸ್ತುತ ನೆಕ್ಸಾನ್ ಕಾರಿನ 7ನೇ ವರ್ಷದ ವಾರ್ಷಿಕೋತ್ಸವವನ್ನು ಕಂಪನಿಯು ಸಂಭ್ರಮದಿಂದ ಆಚರಿಸುತ್ತಿದ್ದು, ಈ ಎಸ್‌ಯುವಿಯ ಮಾರಾಟ ಪ್ರಮಾಣವನ್ನು ಹೆಚ್ಚಿಸಲು ಉದ್ದೇಶಿಸಿದೆ. ಅದರ ಭಾಗವಾಗಿ ಆಯ್ದ ರೂಪಾಂತರ (ವೇರಿಯೆಂಟ್)ಗಳ ಮೇಲೆ ರೂ.1 ಲಕ್ಷದವರೆಗೆ ರಿಯಾಯಿತಿ ಪ್ರಯೋಜನವನ್ನು ಘೋಷಿಸಿದೆ. ಈ ವಿಶೇಷ ಕೊಡುಗೆಯು ಜೂನ್ 15 ರಿಂದ 30ರವರೆಗೆ ಲಭ್ಯವಿರಲಿದೆ ಎಂದು ವರದಿಯಾಗಿದೆ.

ದೇಶೀಯವಾಗಿ ಖರೀದಿಗೆ ಲಭ್ಯವಿರುವ ಟಾಟಾ ನೆಕ್ಸಾನ್ ಎಸ್‌ಯುವಿ (Tata Nexon SUV) ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್, ಕ್ರಿಯೇಟಿವ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗಲಿದ್ದು, ಫಿಯರ್ಲೆಸ್ ಪರ್ಪಲ್, ಫ್ಲೇಮ್ ರೆಡ್, ಕ್ಯಾಲ್ಗರಿ ವೈಟ್, ಡೇಟೋನಾ ಗ್ರೇ ಬಣ್ಣಗಳನ್ನು ಕೂಡ ಒಳಗೊಂಡಿದೆ.

Tata Nexon 7 Years 7 Lakh Car Sales Milestone Upto Rs 1 Lakh Discount In June 2024 24 Km Mileage

ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಜೊತೆಗೆ 17.01 - 24.08 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಟಾಟಾ ನೆಕ್ಸಾನ್ ಎಸ್‌ಯುವಿ FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ಸ್, ಸಬ್ ವೂಫರ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟವನ್ನು ನಡೆಸಬಹುದು.

Tata Nexon Fuel Discount
Smart (O) Petrol 0
Smart Petrol ₹16,000
Smart + Petrol ₹20,000
Smart + Diesel 0
Smart + S Petrol ₹40,000
Smart + S Diesel 0
Pure Petrol ₹30,000
iPure Diesel ₹20,000
Pure S Petrol ₹40,000
Pure S Diesel ₹30,000
Creative Petrol/Diesel ₹60,000
Creative + Petrol/Diesel ₹80,000
Creative + S Petrol/Diesel ₹1,00,000
Fearless Petrol/Diesel ₹60,000
Fearless S Petrol/Diesel ₹60,000
Fearless + Petrol/Diesel ₹60,000
Fearless + S Petrol/Diesel ₹60,000

ನೆಕ್ಸಾನ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್‌, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಎಸ್‌ಯುವಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ಮಾರುತಿ ಸುಜುಕಿ ಬ್ರೆಝಾ, ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಟಾಟಾ ನೆಕ್ಸಾನ್ ಇವಿಯು ಖರೀದಿಗೆ ದೊರೆಯುತ್ತದೆ. ಇದು ರೂ.14.49 ಲಕ್ಷದಿಂದ ರೂ.19.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 30 ಕೆಡಬ್ಲ್ಯೂಹೆಚ್ ಹಾಗೂ 40.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಕ್ರಮವಾಗಿ 325 ರಿಂದ 465 ರೇಂಜ್ (ಮೈಲೇಜ್) ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, June 16, 2024, 9:30 [IST]
English summary
Tata nexon 7 years 7 lakh car sales milestone upto rs 1 lakh discount june 2024 24 km mileage
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+