Tata: ಈ ಜನಪ್ರಿಯ ಕಾರಿಗೆ ಭಾರಿ ರಿಯಾಯಿತಿ.. ರೂ.8 ಲಕ್ಷ ಬೆಲೆ, 24 ಕಿ.ಮೀ ಮೈಲೇಜ್, 6 ಏರ್‌ಬ್ಯಾಗ್‌

ಭಾರತದಲ್ಲಿ ಸುರಕ್ಷಿತ ವಾಹನ ತಯಾರಿಕೆಗೆ ಟಾಟಾ ಮೋಟಾರ್ಸ್ (Tata Motors) ಹೆಸರುವಾಸಿಯಾಗಿದೆ. ಕಂಪನಿಯು ಟಿಯಾಗೊ, ಟಿಗೂರ್, ಪಂಚ್, ಹ್ಯಾರಿಯರ್ ಹಾಗೂ ಸಫಾರಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವು ನವೀನ ಶೈಲಿಯ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯ ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಕೊಂಡುಕೊಳ್ಳುತ್ತಿದ್ದಾರೆ. ಸದ್ಯ ಟಾಟಾ ಮೋಟಾರ್ಸ್ ಮಾರಾಟಗೊಳಿಸುವ ಜನಪ್ರಿಯ ಎಸ್‌ಯುವಿಯಾಗಿ 'ನೆಕ್ಸಾನ್' ಹೊರಹೊಮ್ಮಿದೆ. ಈ ಆಗಸ್ಟ್ ತಿಂಗಳು ಭಾರಿ ಹಣಕಾಸಿನ ಪ್ರಯೋಜನ ಪಡೆದಿದೆ. ಬನ್ನಿ.. ಎಷ್ಟಿದೆ ರಿಯಾಯಿತಿ.. ಏನೇನು ವಿಶೇಷತೆಗಳನ್ನು ಹೊಂದಿದೆ ಎಂಬುದನ್ನು ತಿಳಿಯೋಣ.

ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿಯ ಆಯ್ದ ರೂಪಾಂತರ (ವೇರಿಯೆಂಟ್)ಗಳು ರೂ.16 ಸಾವಿರದಿಂದ ರೂ.1 ಲಕ್ಷವರೆಗೆ ರಿಯಾಯಿತಿ ಹೊಂದಿವೆ ಎಂದು ಎಂದು ವರದಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ನೂತನ ನೆಕ್ಸಾನ್ ಕಾರು ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

Tata Nexon Car Get Upto Rs 1 Lakh Discount In August 2024 Rs 8 Lakh price 24 km mileage

ಈ ಟಾಟಾ ನೆಕ್ಸಾನ್ ಕಾರು ಸ್ಮಾರ್ಟ್, ಪ್ಯೂರ್, ಕ್ರಿಯೇಟಿವ್ ಸೇರಿದಂತೆ ವಿವಿಧ ರೂಪಾಂತರಗಳನ್ನು ಹೊಂದಿದ್ದು, ಫಿಯರ್ಲೆಸ್ ಪರ್ಪಲ್, ಫ್ಲೇಮ್ ರೆಡ್, ಕ್ಯಾಲ್ಗರಿ ವೈಟ್, ಡೇಟೋನಾ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಮಂದಿ ಸಂಚರಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 350 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಸ ಟಾಟಾ ನೆಕ್ಸಾನ್ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 115 ಪಿಎಸ್ ಶಕ್ತಿ ಮತ್ತು 260 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

Tata Nexon Car Get Upto Rs 1 Lakh Discount In August 2024 Rs 8 Lakh price 24 km mileage

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಹಾಗೂ 7-ಸ್ವೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಜೊತೆಗೆ 17.01 ರಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೆಕ್ಸಾನ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ಸ್, ಸಬ್ ವೂಫರ್ ಹಾಗೂ 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್‌ಗಳನ್ನು ಪಡೆದಿದೆ.

Tata Nexon Car Get Upto Rs 1 Lakh Discount In August 2024 Rs 8 Lakh price 24 km mileage

ನೂತನ ಟಾಟಾ ನೆಕ್ಸಾನ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV) ಕೂಡ ಖರೀದಿಗೆ ಲಭ್ಯವಿದ್ದು, ರೂ.14.49 ಲಕ್ಷದಿಂದ ರೂ.19.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇದು 30 ಹಾಗೂ 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 325 ರಿಂದ 465 ಕಿ.ಮೀ ಓಡುತ್ತದೆ. 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Tuesday, August 6, 2024, 18:11 [IST]
English summary
Tata nexon car get upto 1 lakh discount in august 2024 rs 8 lakh price 24 km mileage
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+