Tata: ಜನಸಾಮಾನ್ಯರು ಮೆಚ್ಚಿದ ಕಾರಿದು.. 8 ಲಕ್ಷ ಬೆಲೆ.. 5 ಜನ ಓಡಾಡಬಹುದು, ಭಾರಿ ಮೈಲೇಜ್!
ವಿಶ್ವದಲ್ಲೇ ಭಾರತ ಅತಿದೊಡ್ಡ ವಾಹನ ಮಾರುಕಟ್ಟೆಯನ್ನು ಹೊಂದಿದೆ. ಇತ್ತೀಚೆಗೆ ವಿವಿಧ ಕಾರು ತಯಾರಿಕ ಸಂಸ್ಥೆಗಳು 2024ರ ಜುಲೈನ ಮಾರಾಟದ ಅಂಕಿಸಂಖ್ಯೆಯನ್ನು ಪ್ರಕಟಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಹ್ಯುಂಡೈ ಕ್ರೆಟಾ (Hyundai Creta) ಮೊದಲ ಸ್ಥಾನದಲ್ಲಿದ್ದು, ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಎರಡನೇ ಸ್ಥಾನದಲ್ಲಿದೆ. ಆದಾಗ್ಯೂ ವಿವಿಧ ಕಂಪನಿಗಳ ತೀವ್ರ ಪೈಪೋಟಿಯ ನಡುವೆ ಟಾಟಾದ ಈ ಕಾರು ಭಾರಿ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಉತ್ತಮವಾದ ಪ್ರಗತಿ ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಟಾಟಾ ನೆಕ್ಸಾನ್ (Tata Nexon) ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ 7 ಸ್ಥಾನದಲ್ಲಿದೆ. ಕಳೆದ ತಿಂಗಳು (ಜುಲೈ) ಇಂಧನ ಹಾಗೂ ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್ ಕಾರುಗಳನ್ನು ಒಟ್ಟಿಗೆ ಸೇರಿಸಿ 13,902 ಯುನಿಟ್ ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಿದ 12,349 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ ಶೇಕಡ 12.58% ಬೆಳವಣಿಗೆಯಾಗಿದೆ.

ಮೊದಲಿಗೆ ಇಂಧನ ಚಾಲಿತ 'ಟಾಟಾ ನೆಕ್ಸಾನ್' ವಿಶೇಷತೆ ಕುರಿತಂತೆ ಮಾತನಾಡೋಣ. ಇದೊಂದು ಎಸ್‌ಯುವಿಯಾಗಿದ್ದು, ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, 7-ಸ್ವೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಈ ಕಾರು ಆಕರ್ಷಕವಾದ ವಿನ್ಯಾಸ ಹೊಂದಿದ್ದು, ಫಿಯರ್ಲೆಸ್ ಪರ್ಪಲ್, ಫ್ಲೇಮ್ ರೆಡ್, ಕ್ಯಾಲ್ಗರಿ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 350 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಟಾಟಾ ನೆಕ್ಸಾನ್ ಎಸ್‌ಯುವಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ)ಯನ್ನು ಪಡೆದಿದೆ.
ನೂತನ ಟಾಟಾ ನೆಕ್ಸಾನ್ ಇವಿ (ಎಲೆಕ್ಟ್ರಿಕ್ ಕಾರು) ಬಗ್ಗೆ ಹೇಳುವುದಾದರೆ, ಇದು ರೂ.14.49 ಲಕ್ಷದಿಂದ ರೂ.19.49 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 30 ಮತ್ತು 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 325 ರಿಂದ 465 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಈ ಕಾರಿನಲ್ಲಿ 5 ಜನರು ಪ್ರಯಾಣಿಯಬಹುದು.
ಈ ನೆಕ್ಸಾನ್ ಇವಿ 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications