Tata Nexon: ಬಹುಬೇಡಿಕೆಯ ಟಾಟಾ ನೆಕ್ಸಾನ್ ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ದೇಶದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ನೆಕ್ಸಾನ್ (Nexon) ಎಸ್‌ಯುವಿ ಅತ್ಯಾಧುನಿಕ ವೈಶಿಷ್ಟ್ಯ ಹಾಗೂ ವಿನ್ಯಾಸವನ್ನು ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ಬಗ್ಗೆ ವಿವರಿಸಿದ್ದೇವೆ.
ಬೆಂಗಳೂರಿನಲ್ಲಿ ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿಯ ಬೇಸ್ ಮಾಡೆಲ್ ಸ್ಮಾರ್ಟ್ (ಪೆಟ್ರೋಲ್) ರೂ.9.91 ಲಕ್ಷ, ಅತಿ ಹೆಚ್ಚು ಮಾರಾಟಗೊಳ್ಳುವ ಫಿಯರ್‌ಲೆಸ್ ಪ್ಲಸ್ ಎಸ್ ಡಿಟಿ (ಪೆಟ್ರೋಲ್) ರೂಪಾಂತರ ರೂ.17.01 ಲಕ್ಷ, ಬೇಸ್ ಮಾಡೆಲ್ ಪ್ಯೂರ್ ರೂ.13.91 ಲಕ್ಷ ಹಾಗೂ ಗರಿಷ್ಠ ಸಂಖ್ಯೆಯಲ್ಲಿ ಗ್ರಾಹಕರು ಕೊಂಡುಕೊಳ್ಳುವ ಫಿಯರ್‌ಲೆಸ್ ಪ್ಲಸ್ ಎಸ್ ಡಿಟಿ (ಡೀಸೆಲ್) ಮಾದರಿ ರೂ.18.75 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ರೂ.99,000 ಡೌನ್ ಪೇಮೆಂಟ್ ಪಾವತಿಸಿ ಟಾಟಾ ನೆಕ್ಸಾನ್ ಕಾರನ್ನು ಕೊಂಡುಕೊಂಡರೆ, ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.18,855 ಇಎಂಐ ಕಟ್ಟಬೇಕು. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, ಫಿಯರ್ಲೆಸ್ ಪರ್ಪಲ್, ಫ್ಲೇಮ್ ರೆಡ್, ಕ್ಯಾಲ್ಗರಿ ವೈಟ್, ಡೇಟೋನಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಟಾಟಾ ನೆಕ್ಸಾನ್ ಎರಡು ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 115 ಪಿಎಸ್ ಪವರ್ ಹಾಗೂ 260 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಈ ಟಾಟಾ ನೆಕ್ಸಾನ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಮತ್ತು 7-ಸ್ವೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದ್ದು, FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಜೊತೆಗೆ 17.01 ರಿಂದ 24.08 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಟಾಟಾ ನೆಕ್ಸಾನ್ ಎಸ್‌ಯುವಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ & ಹೈಟ್ ಅಡ್ಜಸ್ಟ್ಎಬಲ್ ಫ್ರಂಟ್ ಸೀಟ್ಸ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ಸ್, ಸಬ್ ವೂಫರ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು 6 ಏರ್‌ಬ್ಯಾಗ್, ಹಿಲ್ ಅಸಿಸ್ಟ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಟಾಟಾ ನೆಕ್ಸಾನ್ ಎಸ್‌ಯುವಿಗೆ ಕಿಯಾ ಸೋನೆಟ್, ರೆನಾಲ್ಟ್ ಕಿಗರ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ ಇಲ್ಲಿ ಕೆಲವು ಮಾದರಿಗಳ ಆನ್-ರೋಡ್ ಬೆಲೆ ಕುರಿತು ಮಾತ್ರ ತಿಳಿಸಿಕೊಟ್ಟಿದ್ದೇವೆ. ಇನ್ನಷ್ಟು ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications