ಟಾಟಾ ಕಾರು ಖರೀದಿಸಬೇಕೇ.. ಕೆಲವೇ ದಿನಗಳಲ್ಲಿ 'ಮೈಲೇಜ್ ಕಿಂಗ್' ನೆಕ್ಸಾನ್ ಸಿಎನ್‌ಜಿ ಬಿಡುಗಡೆ: ಬೆಲೆ ಎಷ್ಟು?

ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಲವೇ ತಿಂಗಳ ಹಿಂದೆ ಆಟೋಮೆಟಿಕ್ (Automatic) ಗೇರ್‌ಬಾಕ್ಸ್ ಹೊಂದಿರುವ ಟಿಯಾಗೊ (Tiago) ಮತ್ತು ಟಿಗೂರ್ (Tigor) ಸಿಎನ್‌ಜಿ ಕಾರುಗಳನ್ನು ಮಾರಾಟಕ್ಕೆ ತಂದಿತ್ತು. ಸದ್ಯ, ಸಿಎನ್‌ಜಿ ಚಾಲಿತ ನೆಕ್ಸಾನ್ (Nexon) ಕಾರನ್ನು ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಮಾರುಕಟ್ಟೆಗೆ ಬರಲಿದೆ ಎಂದು ವರದಿಯಾಗಿದೆ.

ನೂತನ ಟಾಟಾ ನೆಕ್ಸಾನ್ ಸಿಎನ್‌ಜಿ (Tata Nexon CNG) ಎಸ್‌ಯುವಿ, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಕೂಡ ಹೊಂದಿರಲಿದೆ ಎಂದು ತಿಳಿದುಬಂದಿದೆ. 1.2-ಲೀಟರ್ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಎಂಜಿನ್ ಪಡೆದಿರಲಿದ್ದು, 100 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 150 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದೆ ಎನ್ನಲಾಗಿದೆ.

Tata Nexon CNG Car Get Automatic Gearbox Expected Price Details

ಹೊಚ್ಚ ಹೊಸ ಟಾಟಾ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ ಗರಿಷ್ಠ ಇಂಧನ ದಕ್ಷತೆ (Fuel efficiency) ಹೊಂದಿರಲಿದ್ದು, 26.99 ಕೆಎಂ/ಕೆಜಿ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.9 ಎಕ್ಸ್ ಶೋರೂಂ ಬೆಲೆಯನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.

ಈ ಟಾಟಾ ನೆಕ್ಸಾನ್ ಸಿಎನ್‌ಜಿ ಸಹ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ನೆಕ್ಸಾನ್ ಕಾರಿಗೆ ಬಹುತೇಕ ಹೋಲಿಕೆಯಾಗುತ್ತದೆ. ಟ್ವಿನ್ 60-ಲೀಟರ್ ಸಿಎನ್‌ಜಿ ಟ್ಯಾಂಕ್‌ನ್ನು ಒಳಗೊಂಡಿರಲಿದ್ದು, ವಾರಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 230 ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ ಎಂದು ತಿಳಿದುಬಂದಿದೆ.

Tata Nexon CNG Car Get Automatic Gearbox Expected Price Details

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಇಂಧನ ಚಾಲಿತ ನೆಕ್ಸಾನ್ ಕಾರು ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ನೆಕ್ಸಾನ್ ಕಾರು 17.01 ದಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ ಪಡೆದಿದೆ.

ಟಾಟಾ ನೆಕ್ಸಾನ್ ಇವಿ (ಎಲೆಕ್ಟ್ರಿಕ್ ಕಾರು) ಕೂಡ ಖರೀದಿಗೆ ಲಭ್ಯವಿದೆ. ರೂ.14.49 ಲಕ್ಷದಿಂದ ರೂ.19.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 30 ರಿಂದ 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಕ್ರಮವಾಗಿ 325 ರಿಂದ 465 ರೇಂಜ್ (ಮೈಲೇಜ್) ನೀಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, August 24, 2024, 17:35 [IST]
English summary
Tata nexon cng car get automatic gearbox expected price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+