TATA: ಟಾಟಾದ ಮತ್ತೊಂದು ಹೊಸ ಕಾರು ಸೆಪ್ಟೆಂಬರ್‌ನಲ್ಲಿ ಬಿಡುಗಡೆ.. ಬೆಲೆ ಎಷ್ಟು, ಮೈಲೇಜ್ ಏನಿರುತ್ತೆ?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. 2024ರ ಹಣಕಾಸು ವರ್ಷದಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು 13.63% ಪಾಲನ್ನು ಹೊಂದಿದ್ದು, ಪ್ರಮುಖ 10 ಕಾರು ಮಾರಾಟ ಕಂಪನಿಗಳ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿ ನೀಡಿ, ಅಗ್ರ ಸ್ಥಾನಕ್ಕೇರಲು ದೊಡ್ಡಮಟ್ಟದಲ್ಲಿ ಪ್ರಯತ್ನಿಸುತ್ತಿದೆ. ಅದಕ್ಕಾಗಿ ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯ ಹೊಂದಿರುವ ವಿವಿಧ ಕಾರುಗಳನ್ನು ಒಂದಾದ ಮೇಲೆ ಒಂದರಂತೆ ಬಿಡುಗಡೆ ಮಾಡುತ್ತಿದೆ.
ಆಗಸ್ಟ್ 7ರಂದು ಹೊಸ ಕರ್ವ್ (Curvv) ಕೂಪೆ ಎಸ್‌ಯುವಿಯನ್ನು ಪರಿಚಯಿಸುತ್ತಿದೆ. ಈ ಕಾರು ಮೊದಲಿಗೆ ಎಲೆಕ್ಟ್ರಿಕ್ ರೂಪದಲ್ಲಿ ಬರಲಿದೆ. ಆ ನಂತರ, ಇಂಧನ ಚಾಲಿತ (ಪೆಟ್ರೋಲ್ ಹಾಗೂ ಡೀಸೆಲ್) ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ. ಸೆಪ್ಟೆಂಬರ್‌ನಲ್ಲಿ ಬಹುನಿರೀಕ್ಷಿತ ಸಿಎನ್‌ಜಿ ಚಾಲಿತ ನೆಕ್ಸಾನ್ (Nexon) ಎಸ್‌ಯುವಿಯನ್ನು ಮಾರಾಟಕ್ಕೆ ತರಲಿದೆ ಎಂದು ತಿಳಿದುಬಂದಿದ್ದು, ಗ್ರಾಹಕರು ಕೂಡ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

ಹೊಸ ಟಾಟಾ ನೆಕ್ಸಾನ್ ಸಿಎನ್‌ಜಿ (Tata Nexon CNG) ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು,100 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 150 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಸಿಗಲಿದೆ ಎಂದು ಹೇಳಲಾಗಿದೆ. 26.99 ಕೆಎಂ/ಕೆಜಿ ಮೈಲೇಜ್ ಕೂಡ ನೀಡಬಹುದು ಎಂದು ಅಂದಾಜಿಸಲಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬ್ರೆಝಾ ಸಿಎನ್‌ಜಿ (Maruti Suzuki Brezza CNG) ಕಾರಿಗೆ ಟಾಟಾ ನೆಕ್ಸಾನ್ ಸಿಎನ್‌ಜಿ ಪ್ರಬಲವಾದ ಸ್ಪರ್ಧೆಯೊಡ್ಡಲಿದೆ. ಇದರ ಬಹುತೇಕ ವೈಶಿಷ್ಟ್ಯ ಇಂಧನ ಚಾಲಿತ ನೆಕ್ಸಾನ್ ಕಾರಿಗೆ ಹೋಲಿಕೆಯಾಗಲಿದ್ದು, ರೂ.9 ಲಕ್ಷದಿಂದ ರೂ.10.40 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎನ್ನಲಾಗಿದೆ.

ಸಾಮಾನ್ಯ ಟಾಟಾ ನೆಕ್ಸಾನ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದ್ದು, ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಫಿಯರ್‌ಲೆಸ್ ಪ್ಲಸ್, ಪ್ಯೂರ್ ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಪಡೆದಿದೆ. ಫ್ಲೇಮ್ ರೆಡ್, ಕ್ಯಾಲ್ಗರಿ ವೈಟ್, ಡೇಟೋನಾ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ.
ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.01 ರಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಟಾಟಾ ನೆಕ್ಸಾನ್ ಕಾರಿನಲ್ಲಿ 5 ಜನರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ ಹಾಗೂ ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ)ಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications