Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್‌ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
ಭಾರತದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಒದಗಿಸುವ ಮೂಲಕ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿದೆ. ಪ್ರತಿ ವರ್ಷ ಗ್ರಾಹಕರನ್ನು ಆಕರ್ಷಿಸುವ ವಿವಿಧ ಕಾರುಗಳನ್ನು ಬಿಡುಗಡೆಗೊಳಿಸುವ ಮೂಲಕ ಮನೆಮಾತಾಗಿದೆ. ಮುಂಬರಲಿರುವ ತಿಂಗಳಲ್ಲಿ ಸಿಎನ್‌ಜಿ ಚಾಲಿತ ನೆಕ್ಸಾನ್ ಎಸ್‌ಯುವಿಯನ್ನು ಪರಿಚಯಿಸಲು ಸಿದ್ದತೆಯನ್ನು ನಡೆಸುತ್ತಿದೆ.
ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಮೊದಲ ಬಾರಿಗೆ 2017ರಲ್ಲಿ ನೆಕ್ಸಾನ್ (Nexon) ಕಾರನ್ನು ಲಾಂಚ್ ಮಾಡಿತ್ತು. ಅಂದಿನಿಂದ ಇಂದಿನವರೆಗೆ ಹೆಚ್ಚಿನ ಬೇಡಿಕೆಯನ್ನು ಹೊಂದಿದ್ದು, ಬಹುತೇಕರ ಆಯ್ಕೆಯ ವಾಹನವಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕಂಪನಿಯು 6 ಲಕ್ಷಕ್ಕೂ ಅಧಿಕ ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. ಸುರಕ್ಷತೆಯಲ್ಲೂ ಇಂಧನ ಹಾಗೂ ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್ ಮಾದರಿಗಳಿಗೆ ಸರಿಸಾಟಿಯೇ ಇಲ್ಲ. ಗ್ಲೋಬಲ್ ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್ ಪಡೆದಿವೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯಲ್ಲಿ ಏರ್ಪಡಿಸಿದ್ದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಸಿಎನ್‌ಜಿ ಚಾಲಿತ ನೆಕ್ಸಾನ್ ಕಾನ್ಸೆಪ್ಟ್ ಕಾರನ್ನು ಪ್ರದರ್ಶಿಸಲಾಗಿತ್ತು. ಆದರೆ, ಯಾವುದೇ ಮಹತ್ವದ ಅಂಶಗಳ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಈ ಎಸ್‌ಯುವಿ ಹತ್ತಾರು ನವೀನ ವಿಶೇಷತೆಗಳನ್ನು ಪಡೆದಿರಲಿದ್ದು, ಟ್ವಿನ್ ಸಿಲಿಂಡರ್ ತಂತ್ರಜ್ಞಾನವನ್ನು ಆಧರಿಸಿದೆ. ಜೊತೆಗಿದು 60 ಲೀಟರ್ ಸಿಎನ್‌ಜಿ ಇಂಧನ ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿರಲಿದ್ದು, 230 ಲೀಟರ್ ಬೂಟ್ ಸ್ಪೇಸ್ ಕೂಡ ಒಳಗೊಂಡಿರಲಿದೆ ಎನ್ನಲಾಗಿದೆ.
ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್‌ಜಿ ಚಾಲಿತ ಮಾದರಿಯು ವಿವಿಧ ರಸ್ತೆಗಳಲ್ಲಿ ಚಲಿಸಲು ಸಾಧ್ಯವಾಗುವಂತೆ ಶಕ್ತಿಯುತ ಎಂಜಿನ್ ಪಡೆದಿರುವ ನೀರಿಕ್ಷೆಯಿದೆ. ಇದು 1.2-ಲೀಟರ್ 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿರಲಿದ್ದು, 118 ಬಿಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಮತ್ತು 170 ಎನ್ಎಂ ಪೀಕ್ ಟಾರ್ಕ್ ಹೊರಹಾಕಬಹುದು. 5-ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಆಯ್ಕೆಯಲ್ಲಿಯೂ ಲಭ್ಯವಾಗಬಹುದು.

ನೂತನ ಟಾಟಾ ನೆಕ್ಸಾನ್ ಸಿಎನ್‌ಜಿ ಕಾರು ಯಾವ ಬೈಕ್ ಗೂ ಕಮ್ಮಿಯಿಲ್ಲದಂತೆ ಮೈಲೇಜ್ ನೀಡುವ ಸಾಧ್ಯತೆಯಿದ್ದು, 26.99 ಕೆಎಂ/ಕೆಜಿ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಇಂಧನ ಮತ್ತು ಎಲೆಕ್ಟ್ರಿಕ್ ರೂಪದಲ್ಲಿ ಖರೀದಿಗೆ ದೊರೆಯುವ ಹೊಸ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‌ಯುವಿಯಂತೆಯೇ ಸಿಎನ್‌ಜಿ ಕಾರು ಸಹ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಸದ್ಯ ಭಾರತದ ಮಾರುಕಟ್ಟೆಯಲ್ಲಿ ಇಂಧನ ಚಾಲಿತ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಕಾರು ರೂ.8.15 ಲಕ್ಷದಿಂದ ರೂ.15.80 ಲಕ್ಷ ಎಕ್ಷ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, 7-ಸ್ವೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಅನ್ನು ಪಡೆದಿದೆ.
ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ 17.01 - 24.08 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್ ಬ್ಯಾಗ್ ಪಡೆದಿದೆ.
ಟಾಟಾ ನೆಕ್ಸಾನ್ ಇವಿ ರೂ.14.74 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. ಇದರಲ್ಲಿ 30 ಕೆಡಬ್ಲ್ಯೂಹೆಚ್ (kWh) ಮತ್ತು 40.5 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಉಪಯೋಗಿಸಲಾಗಿದೆ. ಭರ್ತಿ ಚಾರ್ಜ್ ನಲ್ಲಿ ರೂಪಾಂತರಗಳಿಗೆ ಅನುಗುಣವಾಗಿ 325 ರಿಂದ 465 ಕಿ.ಮೀ ಕ್ರಮಿಸಲಿದ್ದು, ಯುವ ಗ್ರಾಹಕರನ್ನು ಆಕರ್ಷಿಸುವ ವಿವಿಧ ವೈಶಿಷ್ಟ್ಯಗಳನ್ನು ಕೂಡ ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications