ಟಾಟಾ ನೆಕ್ಸಾನ್ ಸಿಎನ್‌ಜಿ ಬಿಡುಗಡೆ ವಿವರ ಸೋರಿಕೆ: ಯಾರಿಗೆಲ್ಲಾ ಎದೆನಡುಕ ಶುರುವಾಯ್ತು ಗೊತ್ತಾ?
ಭಾರತದ ಹೆಮ್ಮೆಯ ಕಾರು ನಿರ್ಮಾಣ ಕಂಪನಿಯಾದ ಟಾಟಾ ಮೋಟಾರ್ಸ್ ದಿನ ಕಳೆದಂತೆ ಗ್ರಾಹಕರಿಗೆ ಸಾಕಷ್ಟು ಹತ್ತಿರವಾಗುತ್ತಿದ್ದು, ಮಾರುಕಟ್ಟೆಯಲ್ಲೂ ಹೆಚ್ಚಉ ಸದ್ದು ಮಾಡುತ್ತಿದೆ. ಟಾಟಾ ಮೋಟಾರ್ಸ್‌ನ ಪ್ರಸಿದ್ದ ಕಾರು ಮಾದರಿಗಳಲ್ಲಿ ಟಾಟಾ ನೆಕ್ಸಾನ್ ಸಹ ಒಂದು. ಈ ಕಾರಿನ ಒಂದು ವಿಶೇಷತೆ ಏನೆಂದರೆ ಸದ್ಯಕ್ಕೆ ಭಾರತೀಯ ಮಾರುಕಟ್ಟೆಯಲ್ಲಿ ಇದು ಪೆಟ್ರೋಲ್ ಡೀಸೆಲ್ ಮತ್ತು ಎಲೆಕ್ಟ್ರಿಕ್ ರೂಪಾಂತರದಲ್ಲಿ ಲಭ್ಯವಿದೆ. ಇದೀಗ ಟಾಟಾ ಮೋಟಾರ್ಸ್ ಈ ಕಾರಿಗೆ ಸಿಎನ್‌ಜಿಯನ್ನು ಸಹ ಪರಿಚಯಿಸುತ್ತಿದ್ದು ಇದು ಈ ಕಾರಿನ ಮಾರಾಟವನ್ನು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.
ಟಾಟಾ ಮೋಟಾರ್ಸ್, ನೆಕ್ಸಾನ್ ಸಿಎನ್‌ಜಿ ಕಾರಿನ ಕಾನ್ಸೆಪ್ಟ್ ಅನ ಈ ಹಿಂದೆ ನಡೆದಂತಹ ಭಾರತ್ ಮೊಬಿಲಿಟಿ ಶೋನಲ್ಲಿ ಅನಾವರಣಗೊಳಿಸಿತ್ತು. ಆ ಸಂಧರ್ಭದಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ಸಹ ವ್ಯಕ್ತವಾಗಿತ್ತು. ಆದರೆ ಇದೀಗ ಕೆಲವೇ ಸಮಯದಲ್ಲಿ ಟಾಟಾ ನೆಕ್ಸಾನ್ ಸಿಎನ್‌ಜಿ ಜೊತೆ ಬರಲಿದ್ದು, ಕಾರು ಕೊಳ್ಳುವವರು ಇದಕ್ಕಾಗಿ ಕಾಯುತ್ತಿರುವುದು ಸುಳ್ಳಲ್ಲ.

ಮಾಹಿತಿಗಳ ಪ್ರಕಾರ ನೆಕ್ಸಾನ್ ಸಿಎನ್‌ಜಿಯು 2025ರ ಆರಂಭದಲ್ಲಿ ಮಾರುಕಟ್ಟೆಗೆ ಕಾಲಿಡಲಿದೆ. ಈ ಕಾರು ಭಾರತದ ಮೊದಲ ಟರ್ಬೋ ಚಾರ್ಜ್ಡ್ ಸಿಎನ್‌ಜಿ ಕಾರು ಇದಾಗಿರಲಿದೆ ಎಂಬುದು ಈ ಕಾರಿನ ಮತ್ತೊಂದು ವಿಶೇಷ. ಈ ಕಾರು ಮಾರುತಿಯ ಬ್ರೇಝಾ ಕಾರಿಗೆ ನೇರ ಎದುರಾಳಿಯಾಗಿರಲಿದೆ ಎಂಬುದು ಹಲವು ಕಾರು ಪಂಡಿತರ ಅಭಿಪ್ರಾಯ.
ಹೊಸ ಸಿಎನ್‌ಜಿ (TATA Nexon CNG) ಚಾಲಿತ ಟಾಟಾ ನೆಕ್ಸಾನ್ ಎಸ್‌ಯುವಿ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು,100 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 150 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿರಬಹುದು. ಜೊತೆಗೆ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ.

ನೂತನ ಟಾಟಾ ನೆಕ್ಸಾನ್ ಸಿಎನ್‌ಜಿ ಕಾರು 26.99 ಕೆಎಂ/ಕೆಜಿ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದ್ದು, ಬಹುತೇಕ ಇಂಧನ ಚಾಲಿತ ಮಾದರಿಯಂತೆಯೇ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಆದರೆ, ಕಂಪನಿ ಕಡೆಯಿಂದ ಈ ಕುರಿತು ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಮುಂಬರುವ ದಿನಗಳಲ್ಲಿ ಎಲ್ಲ ಕುತೂಹಲಗಳಿಗೂ ತೆರೆಬೀಳಲಿದೆ.
ಪ್ರಸ್ತುತ ದೇಶೀಯವಾಗಿ ಖರೀದಿಗೆ ಸಿಗುವ ಇಂಧನ ಚಾಲಿತ ಟಾಟಾ ನೆಕ್ಸಾನ್ ಎಸ್‌ಯುವಿ, ರೂ.8.15 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಫಿಯರ್‌ಲೆಸ್ ಪ್ಲಸ್, ಪ್ಯೂರ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ತೆರಳಬಹುದು.
ಟಾಟಾ ನೆಕ್ಸಾನ್ ಕಾರು, 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ರೂಪಾಂತರಗಳ ಅನ್ವಯ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಅನ್ನು ಪಡೆದಿದ್ದು, 17.01 ರಿಂದ 24.08 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications