Tata Nexon: ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ರೂ.1 ಲಕ್ಷ ರಿಯಾಯಿತಿ.. 14 ಲಕ್ಷ ಬೆಲೆ, 465 ಕಿ.ಮೀ ಓಡುತ್ತದೆ!

ದೇಶದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ನೆಕ್ಸಾನ್ (Nexon) ಎಲೆಕ್ಟ್ರಿಕ್ ಕಾರನ್ನು ಅತಿಹೆಚ್ಚು ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಈ ಫೆಬ್ರವರಿ ತಿಂಗಳು, ನೆಕ್ಸಾನ್ ಇವಿ ರೂ.1 ಲಕ್ಷವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ ಎಂಬ ವಿವರಗಳು ಲಭಿಸಿವೆ.

ಟಾಟಾ ನೆಕ್ಸಾನ್ ಇವಿ (Tata Nexon EV)ಯ ಹಿಂದಿನ ವರ್ಷದ (MY2023) ಮಾದರಿಗಳು ಗರಿಷ್ಠ ಡಿಸ್ಕೌಂಟ್ ಆಫರ್ ಪಡೆದಿದ್ದು, ನಗದು ರಿಯಾಯಿತಿ, ವಿನಿಮಯ ಬೋನಸ್, ಕಾರ್ಪೊರೇಟ್ ಬೋನಸ್‌ ಸೇರಿದಂತೆ ವಿವಿಧ ಕೊಡುಗೆಯನ್ನು ಒಳಗೊಂಡಿವೆ. ಆದಾಗ್ಯೂ, ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್, ಬಣ್ಣ ಮತ್ತು ರೂಪಾಂತರಗಳನ್ನು ಆಧರಿಸಿ, ಈ ರಿಯಾಯಿತಿ ಸೌಲಭ್ಯಗಳು ಬೇರೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Tata Nexon EV Get Upto Rs.1 Lakh Discount In February 2024: Rs 14 Lakh Price, 465 Km Range

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ನೆಕ್ಸಾನ್ ಇವಿ ಫೇಸ್‌ಲಿಫ್ಟ್, ರೂ.14.74 ಲಕ್ಷದಿಂದ ರೂ.19.94 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕ್ರಿಯೇಟಿವ್, ಫಿಯರ್ ಲೇಸ್, ಎಂಪವರ್ಡ್ ಎಂಬ 3 ರೂಪಾಂತರಗಳು ಹಾಗೂ ಫ್ಲೇಮ್ ರೆಡ್, ಪ್ರಿಸ್ಟಿನ್ ವೈಟ್, ಇಂಟೆನ್ಸಿ ಟೀಲ್, ಎಂಪವರ್ಡ್ ಆಕ್ಸೈಡ್ ಸೇರಿದಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

ಈ ಟಾಟಾ ನೆಕ್ಸಾನ್ ಇವಿ, 30 ಕೆಡಬ್ಲ್ಯೂಹೆಚ್ (kWh) ಹಾಗೂ 40.5 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್‌ನೊಂದಿಗೆ ಗ್ರಾಹಕರಿಗೆ ಲಭ್ಯವಿದೆ. ಇವುಗಳಲ್ಲಿ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, ಕ್ರಮವಾಗಿ 127 ಬಿಹೆಚ್‌ಪಿ ಮತ್ತು 143 ಬಿಹೆಚ್‌ಪಿ ಗರಿಷ್ಠ ಪವರ್ (ಶಕ್ತಿ), 215 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

Tata Nexon EV Get Upto Rs.1 Lakh Discount In February 2024: Rs 14 Lakh Price, 465 Km Range

ರೇಂಜ್ (ಮೈಲೇಜ್) ವಿಚಾರಕ್ಕೆ ಬರುವುದಾದರೆ, ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ ಭರ್ತಿ ಚಾರ್ಜ್ ನಲ್ಲಿ 325 ಕಿಲೋಮೀಟರ್ ರಿಂದ 465 ಕಿಲೋಮೀಟರ್ ಕ್ರಮಿಸುತ್ತದೆ. ಇಕೋ, ಸಿಟಿ ಮತ್ತು ಸ್ಪೋರ್ಟ್ಸ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಪಡೆದಿದ್ದು, ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಈ ಕಾರಿನ ಬ್ಯಾಟರಿ ಪ್ಯಾಕ್, ಶೇಕಡ 10 - 80% ಚಾರ್ಜ್ ಆಗಲು 56 ನಿಮಿಷಬೇಕು.

ಅದೇ ಮನೆ ವಿದ್ಯುತ್ ಬಳಕೆಯಲ್ಲಿ ನೆಕ್ಸಾನ್ ಇವಿ ಬ್ಯಾಟರಿ ಪ್ಯಾಕ್ ಅನ್ನು ಪೂರ್ತಿ ಚಾರ್ಜ್ ಮಾಡಲು ಗರಿಷ್ಠ 10 ಗಂಟೆಗೂ ಹೆಚ್ಚಿನ ಸಮಯಾವಕಾಶ ಬೇಕಾಗುತ್ತದೆ. ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದಾಗಿದ್ದು, ವಿನ್ಯಾಸದ ದೃಷ್ಟಿಯಿಂದ ಸಹ ಅತ್ಯುತ್ತಮವಾಗಿದೆ. ವಿಶೇಷವಾಗಿ ಸ್ಲಿಕ್ ಸ್ಪ್ಲಿಟ್ ಹೆಡ್‌ಲ್ಯಾಂಪ್, ಎಲ್ಇಡಿ ಲೈಟ್ ಸ್ಟ್ರಿಪ್‌ ಅನ್ನು ಪಡೆದಿದೆ.

Tata Nexon EV Get Upto Rs.1 Lakh Discount In February 2024: Rs 14 Lakh Price, 465 Km Range

ಟಾಟಾ ನೆಕ್ಸಾನ್ ಇವಿ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 12.3 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, 10.25 - ಇಂಚಿನ ಸಂಪೂರ್ಣ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, 9 - ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸಿಂಗಲ್ ಪೇನ್ ಸನ್‌ರೂಫ್ ಅನ್ನು ಹೊಂದಿದೆ.

ಈ ಕಾರು, 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್ - ವೀಲ್ ಡಿಸ್ಕ್ ಬ್ರೇಕ್ಸ್, ಹಿಲ್ ಹೋಲ್ಡ್, ಡಿಸೆಂಟ್ ಕಂಟ್ರೋಲ್, ಆಟೋ - ಡಿಮ್ಮಿಂಗ್ ಐಆರ್‌ವಿಎಂ, ಬ್ಲೈಂಡ್ ವ್ಯೂ ಮಾನಿಟರ್‌, 360 - ಡಿಗ್ರಿ ಕ್ಯಾಮೆರಾ ಸೇರಿದಂತೆ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. ನೆಕ್ಸಾನ್ ಇವಿಗೆ ಮಹೀಂದ್ರಾ ಎಕ್ಸ್‌ಯುವಿ400 ಇವಿ ಪ್ರಬಲ ಎದುರಾಳಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 8, 2024, 15:27 [IST]
English summary
Tata nexon ev get upto rs 1 lakh discount in february 2024 14 lakh price 465 km range
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+