Tata Nexon EV: 465 ಕಿ.ಮೀ ಓಡುವ ಟಾಟಾ ನೆಕ್ಸಾನ್ ಇವಿ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದಲ್ಲಿ ಕಳೆದ ಎರಡು ವರ್ಷದಿಂದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ವೇಗವಾಗಿ ಬೆಳವಣಿಗೆಯಾಗುತ್ತಿದ್ದು, ದೇಶೀಯ ಕಾರು ತಯಾರಕ 'ಟಾಟಾ ಮೋಟಾರ್ಸ್' ಈ ವಿಭಾಗದಲ್ಲಿ ಮುಂಚೂಣಿಯಲ್ಲಿದೆ. ಕಂಪನಿಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬೆಲೆಗೆ ತಕ್ಕಂತೆ ಆಕರ್ಷಕ ವಿನ್ಯಾಸ, ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆಯನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ.

ಇಲ್ಲಿ ನೂತನ ಟಾಟಾ ನೆಕ್ಸಾನ್ ಇವಿ (Tata Nexon EV), ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ. ಬೆಂಗಳೂರಿನಲ್ಲಿ ಈ ಕಾರಿನ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಕ್ರಿಯೇಟಿವ್ ಪ್ಲಸ್ ರೂ.15.85 ಲಕ್ಷ, ಫಿಯರ್‌ಲೆಸ್‌ ರೂ.17.38 ಲಕ್ಷ, ಫಿಯರ್‌ಲೆಸ್‌ ಪ್ಲಸ್ ರೂ.17.91 ಲಕ್ಷ, ಫಿಯರ್‌ಲೆಸ್‌ ಪ್ಲಸ್ ಎಸ್ ರೂ.18.44 ಲಕ್ಷ, ಎಂಪವರ್ಡ್ ರೂ.19.12 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

Tata Nexon Ev On Road Price and Emi Details

ಫಿಯರ್‌ಲೆಸ್‌ ಎಲ್ಆರ್ ರೂ.19.49 ಲಕ್ಷ, ಫಿಯರ್‌ಲೆಸ್‌ ಪ್ಲಸ್ ಎಲ್ಆರ್ ರೂ.20.02 ಲಕ್ಷ, ಫಿಯರ್‌ಲೆಸ್‌ ಪ್ಲಸ್ ಎಸ್ ಎಲ್ಆರ್ ರೂ.20.54 ಲಕ್ಷ, ಎಂಪವರ್ಡ್ ಪ್ಲಸ್ ಎಲ್ಆರ್ ಡಾರ್ಕ್ ರೂ.21.27 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಎಂಪವರ್ಡ್ ಪ್ಲಸ್ ಎಲ್ಆರ್ ರೂಪಾಂತರ (ವೇರಿಯೆಂಟ್) ರೂ.21.39 ಲಕ್ಷ ಆನ್-ರೋಡ್ ಬೆಲೆಯನ್ನು ಪಡೆದಿದೆ.

ನೀವು ಈ ಟಾಟಾ ನೆಕ್ಸಾನ್ ಇವಿಯನ್ನು ರೂ.1,59,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿ ದರದಲ್ಲಿ ಐದು ವರ್ಷದ ಅವಧಿಗೆ ತಿಂಗಳಿಗೆ ರೂ.30,166 ಇಎಂಐ ಕಟ್ಟಬೇಕು. ಹೊಸ ನೆಕ್ಸಾನ್ ಇವಿಯು ಅತ್ಯುತ್ತಮ ವಿನ್ಯಾಸವನ್ನು ಹೊಂದಿದ್ದು, ಫ್ಲೇಮ್ ರೆಡ್, ಪ್ರಿಸ್ಟಿನ್ ವೈಟ್, ಇಂಟೆನ್ಸಿ ಟೀಲ್, ಡೇಟೋನಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

Tata Nexon Ev On Road Price and Emi Details

ಟಾಟಾ ನೆಕ್ಸಾನ್ ಇವಿಯು ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. 30 ಕೆಡಬ್ಲ್ಯೂಹೆಚ್ ಬ್ಯಾಟರಿ ಹೊಂದಿರುವ ಕಾರಿನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 129 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 215 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಸಂಪೂರ್ಣ ಚಾರ್ಜ್ ನಲ್ಲಿ 325 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.

ಮತ್ತೊಂದು 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಕಾರಿನಲ್ಲಿ ಉಪಯೋಗಿಸಲಾಗಿರುವ ಎಲೆಕ್ಟ್ರಿಕ್ ಮೋಟಾರ್, 144 ಪಿಎಸ್ ಪವರ್ ಮತ್ತು 215 ಪೀಕ್ ಟಾರ್ಕ್ ಉತ್ಪಾದಿಸಲಿದ್ದು, ಭರ್ತಿ ಚಾರ್ಜ್ ನಲ್ಲಿ 465 ಕಿಲೋಮೀಟರ್ ಓಡುತ್ತದೆ. ನೆಕ್ಸಾನ್ ಇವಿ ಬ್ಯಾಟರಿಯು ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಕೇವಲ 56 ನಿಮಿಷದಲ್ಲಿ 10 ರಿಂದ 80% ಚಾರ್ಜ್ ಆಗುತ್ತದೆ.

Tata Nexon Ev On Road Price and Emi Details

ಈ ಕಾರು, 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋ ಎಸಿ, ಕ್ರೂಸ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಸೇರಿದಂತೆ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ನೆಕ್ಸಾನ್ ಇವಿ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್ಸ್, ಹಿಲ್ ಹೋಲ್ಡ್, ಡಿಸೆಂಟ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, April 26, 2024, 10:28 [IST]
English summary
Tata nexon ev on road price and emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+