Tata: ಟಾಟಾದಿಂದ ಸಿಹಿಸುದ್ದಿ.. ಎಲೆಕ್ಟ್ರಿಕ್ ಕಾರುಗಳ ಬೆಲೆ ಭಾರೀ ಇಳಿಕೆ, ರೂ.7.99 ಲಕ್ಷ ಆರಂಭಿಕ ಬೆಲೆ
ದೇಶದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಇದೀಗ ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲೆಕ್ಟ್ರಿಕ್ ಕಾರುಗಳ ಬೆಲೆಯನ್ನು ರೂ.25,000 ದಿಂದ ರೂ.1.20 ಲಕ್ಷ ವರೆಗೆ ಕಡಿತಗೊಳಿಸಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.
ಮೊದಲಿಗೆ ಟಾಟಾ ನೆಕ್ಸಾನ್ ಇವಿ (Tata Nexon ev) ದರ ಇಳಿಕೆಯ ಬಗ್ಗೆ ಮಾತನಾಡೋಣ. ಈ ಕಾರಿನ ಮೀಡಿಯಂ ರೇಂಜ್ (Medium Range - MR) ಮಾದರಿ ಬೆಲೆಯನ್ನು ರೂ.25,000 ಕಡಿಮೆ ಮಾಡಲಾಗಿದ್ದು, ರೂ.14.49 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ಲಾಂಗ್ ರೇಂಜ್ (Long Range - LR) ರೂಪಾಂತರದ ದರವನ್ನು ಗರಿಷ್ಠ ರೂ.1.20 ಲಕ್ಷ ಇಳಿಕೆ ಮಾಡಲಾಗಿದ್ದು, ರೂ.16.99 ಲಕ್ಷ ಬೆಲೆಯನ್ನು ಪಡೆದಿದೆ.

ಅದೇ ರೀತಿಯಲ್ಲಿ ಟಾಟಾದ ಎಂಟ್ರಿ ಲೆವೆಲ್ ಟಿಯಾಗೊ ಇವಿ (Tiago ev) ಕಾರಿನ ಬೆಲೆಯು ರೂ.70,000 ಕಡಿಮೆಯಾಗಿದ್ದು, ರೂ.7.99 ಲಕ್ಷ ಪ್ರಾರಂಭಿಕ ಬೆಲೆಯನ್ನು ಪಡೆದಿದೆ. ಆದರೆ, ಇತ್ತೀಚೆಗೆ ಭಾರತದ ಮಾರುಕಟ್ಟೆಯಲ್ಲಿ ರೂ.10.99 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಬಿಡುಗಡೆಗೊಂಡ ಪಂಚ್ ಇವಿ ಬೆಲೆಯನ್ನು ಇಳಿಕೆ ಮಾಡಿಲ್ಲ. ಹಾಗೆಯೇ ಟಿಗೂರ್ ಇವಿ ದರವನ್ನು ಕಡಿತಗೊಳಿಸಿಲ್ಲ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ನೆಕ್ಸಾನ್ ಇವಿ ಫೇಸ್‌ಲಿಫ್ಟ್, 30 ಕೆಡಬ್ಲ್ಯೂಹೆಚ್ (kWh) ಮತ್ತು 40.5 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇವುಗಳಲ್ಲಿ ಬಳಸಿರುವ ಎಲೆಕ್ಟ್ರಿಕ್ ಮೋಟಾರ್, ಕ್ರಮವಾಗಿ 127 ಬಿಹೆಚ್‌ಪಿ ಹಾಗೂ 143 ಬಿಹೆಚ್‌ಪಿ ಗರಿಷ್ಠ ಪವರ್ (ಶಕ್ತಿ), 215 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ನೆಕ್ಸಾನ್ ಇವಿ ರೂಪಾಂತರಗಳಿಗೆ ಅನುಗುಣವಾಗಿ ಪೂರ್ತಿ ಚಾರ್ಜ್‌ನಲ್ಲಿ 325 ಕಿ.ಮೀ ರಿಂದ 465 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಇಕೋ, ಸಿಟಿ ಮತ್ತು ಸ್ಪೋರ್ಟ್ಸ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಹೊಂದಿದೆ. ಮನೆ ವಿದ್ಯುತ್ ಬಳಕೆಯಲ್ಲಿ ಈ ನೆಕ್ಸಾನ್ ಇವಿ ಬ್ಯಾಟರಿ ಪ್ಯಾಕ್, ಸಂಪೂರ್ಣ ಚಾರ್ಜ್ ಆಗಲು 10 ಗಂಟೆಗೂ ಹೆಚ್ಚಿನ ಸಮಯಾವಕಾಶ ಬೇಕು.
ಟಾಟಾ ನೆಕ್ಸಾನ್ ಇವಿ, 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, 10.25-ಇಂಚಿನ ಸಂಪೂರ್ಣ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್ಸ್, ಹಿಲ್ ಹೋಲ್ಡ್, ಡಿಸೆಂಟ್ ಕಂಟ್ರೋಲ್ ಅನ್ನು ಹೊಂದಿದೆ.

ಟಾಟಾ ಟಿಯಾಗೊ ಇವಿ ಬಗ್ಗೆ ಹೇಳುವುದಾದರೆ, ಎಕ್ಸ್ಇ, ಎಕ್ಸ್‌ಟಿ ಸೇರಿದಂತೆ 4 ರೂಪಾಂತರ ಮತ್ತು ಸಿಗ್ನೇಚರ್ ಟೀಲ್ ಬ್ಲೂ, ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್, ಪ್ರಿಸ್ಟಿನ್ ವೈಟ್ ಒಳಗೊಂಡಂತೆ 5 ಬಣ್ಣಗಳೊಂದಿಗೆ ಸಿಗುತ್ತದೆ. ಇದು 19.2 ಕೆಡಬ್ಲ್ಯೂಹೆಚ್ (kWh) ಮತ್ತು 24 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ.
ಈ ಕಾರು, ಬ್ಯಾಟರಿ ಪ್ಯಾಕ್‌ಗೆ ಅನುಗುಣವಾಗಿ ಭರ್ತಿ ಚಾರ್ಜ್ ನಲ್ಲಿ 250 ಕಿಲೋಮೀಟರ್ ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಕಾರಿನ ಬ್ಯಾಟರಿ ಪ್ಯಾಕ್ ಶೇಕಡ 10 - 80% ಚಾರ್ಜ್ ಆಗಲು ಕೇವಲ 57 ನಿಮಿಷ ಸಾಕು. 15ಎ ಸಾಕೆಟ್ ಚಾರ್ಜರ್ ಉಪಯೋಗ ಮಾಡಿದಾಗ 7 ಗಂಟೆಗೂ ಹೆಚ್ಚಿನ ಸಮಯಾವಕಾಶಬೇಕು.
ಟಾಟಾ ಟಿಯಾಗೊ ಇವಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.


Click it and Unblock the Notifications