10 ಲಕ್ಷ ರೂಪಾಯಿ ಬೆಲೆ.. 6 ಏರ್‌ಬ್ಯಾಗ್‌ನೊಂದಿಗೆ ಸಿಗುತ್ತವೆ ಟಾಟಾ, ಹ್ಯುಂಡೈ, ಕಿಯಾ ಕಾರುಗಳು
ಹೊಸ ಕಾರು ಖರೀದಿಸುವವರೂ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ. ಆದರೆ, ಯಾವ ಕಾರು ಬಜೆಟ್ ಬೆಲೆಯಲ್ಲಿ ಭರಪೂರ ರಕ್ಷಣಾತ್ಮಕ ವೈಶಿಷ್ಟ್ಯಗಳೊಂದಿಗೆ ದೊರೆಯುತ್ತದೆ ಎಂಬುದರ ಬಗ್ಗೆ ಅರಿವಿರುವುದಿಲ್ಲ. ಇಲ್ಲಿ 6 ಏರ್‌ಬ್ಯಾಗ್‌ನೊಂದಿಗೆ 10 ಲಕ್ಷ ರೂಪಾಯಿ ದರದಲ್ಲಿ ಲಭ್ಯವಿರುವ ಟಾಟಾ, ಹ್ಯುಂಡೈ, ಕಿಯಾ ಕಾರುಗಳ ಕುರಿತು ವಿವರಿಸಿದ್ದೇವೆ.
ಮೊದಲಿಗೆ 6 ಏರ್‌ಬ್ಯಾಗ್‌ನೊಂದಿಗೆ ಸಿಗುವ ಟಾಟಾ ನೆಕ್ಸಾನ್ (Tata Nexon) ಫೇಸ್‌ಲಿಫ್ಟ್ ಎಸ್‌ಯುವಿ ತಿಳಿಯೋಣ. ಈ ಕಾರು ರೂ.8.15 ಲಕ್ಷದಿಂದ ರೂ.15.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ವಿವಿಧ ರೂಪಾಂತರ ಹಾಗೂ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಹಾಗೂ ಡಿಸೇಲ್ ಎಂಜಿನ್ ಪಡೆದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 17.01 ರಿಂದ 24.08 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ ಗ್ಲೋಬಲ್ ಎನ್‌ಸಿಎಪಿ (Global NCAP) ಪರೀಕ್ಷೆಯಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ಹಿಲ್ ಅಸಿಸ್ಟ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) 360 - ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter) ಎಸ್‌ಯುವಿ ಸಹ 6 ಏರ್‌ಬ್ಯಾಗ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ನೊಂದಿಗೆ ಸಿಗಲಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸಿಂಗಲ್-ಪೇನ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಹ್ಯುಂಡೈ ಎಕ್ಸ್‌ಟರ್ ಸುರಕ್ಷತೆಗಾಗಿ ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಕ್ಯಾಮೆರಾ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 19.4 ರಿಂದ 27.1 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಕೊರಿಯಾ ಮೂಲದ ಕಿಯಾ (Kia), ಮಾರಾಟಗೊಳಿಸುವ ಸೆಲ್ಟೋಸ್ (Seltos) ಸಹ 6 ಏರ್‌ಬ್ಯಾಗ್‌ನೊಂದಿಗೆ ದೊರೆಯುತ್ತದೆ. ಈ ಎಸ್‌ಯುವಿ ರೂ.10.90 ಲಕ್ಷದಿಂದ ರೂ.20.30 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. 5 ಆಸನ ವ್ಯವಸ್ಥೆಯನ್ನು ಪಡೆದಿದ್ದು, 17 ರಿಂದ 20.7 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಸುರಕ್ಷತೆಯ ವಿಚಾರವಾಗಿ ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), HAC (ಹಿಲ್ ಅಸಿಸ್ಟ್ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾ, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಕ್ರೂಸ್ ಕಂಟ್ರೋಲ್ ಅನ್ನು ಪಡೆದಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ, ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್, ಮಾರುತಿ ಗ್ರ್ಯಾಂಡ್ ವಿಟಾರಾ ದೊಡ್ಡ ಎದುರಾಳಿಯಾಗಿವೆ.
ಕಿಯಾ ಸೋನೆಟ್ (Kia Sonet) ಕಾರು ಕೂಡ 6 ಏರ್‌ಬ್ಯಾಗ್ ಆಯ್ಕೆಯಲ್ಲಿ ಲಭ್ಯವಿದೆ. ರೂ.7.79 ಲಕ್ಷದಿಂದ ರೂ.14.89 ಲಕ್ಷ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ನೊಂದಿಗೆ ದೊರೆಯಲಿದ್ದು, ಸುರಕ್ಷತೆಗಾಗಿ ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








