Nexon - Brezza: ಟಾಟಾ ನೆಕ್ಸಾನ್, ಮಾರುತಿ ಸುಜುಕಿ ಬ್ರೆಝಾ ನಡುವೆ ತೀವ್ರ ಕದನ..! ಎಲ್ಲಿಗೆ ಹೋಗುತ್ತೋ?
ಭಾರತದಲ್ಲಿ ಟಾಟಾ ನೆಕ್ಸಾನ್ (Tata Nexon) ಮತ್ತು ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಪ್ರಿಯ ಎಸ್‌ಯುವಿಗಳಾಗಿವೆ. ಉತ್ತಮ ಕಾರ್ಯಕ್ರಮತೆ, ಆಕರ್ಷಕ ವೈಶಿಷ್ಟ್ಯವನ್ನು ಹೊಂದಿರುವುದು ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಆ ಕಾರಣಕ್ಕೆ ಇವೆರೆಡು ಕಾರುಗಳು ಜಿದ್ದಾಜಿದ್ದಿಗೆ ಬಿದ್ದಂತೆ ಮಾರಾಟವಾಗುತ್ತಿವೆ.
ಸದ್ಯ ಏಪ್ರಿಲ್ 1, 2023 ರಿಂದ ಫೆಬ್ರವರಿ 2024 ರವರೆಗಿನ ಆರ್ಥಿಕ ವರ್ಷದ (FY24) ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿಗಳ ಮಾರಾಟದ ವಿವರಗಳು ಲಭಿಸಿದೆ. ಬ್ರೆಝಾಗೆ ಹೋಲಿಕೆ ಮಾಡಿದರೆ ನೆಕ್ಸಾನ್ ಸ್ವಲ್ಪ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 155,283 ಯುನಿಟ್ ಬ್ರೆಝಾ ಹಾಗೂ 157,639 ಯುನಿಟ್ ನೆಕ್ಸಾನ್ ಕಾರುಗಳು ಮಾರಾಟವಾಗಿವೆ. ಇವೆರಡರ ನಡುವಿನ ಅಂತರ ಕೇವಲ 2,356 ಯುನಿಟ್‌ಗಳು ಮಾತ್ರವಾಗಿವೆ.

ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿ ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ 4 ರೂಪಾಂತರಗಳು ಹಾಗೂ 7-ಮೊನೊಟೋನ್, 3-ಡುಯಲ್ ಟೋನ್ ಬಣ್ಣಗಳೊಂದಿಗೆ ಲಭ್ಯವಿದೆ. ವಿನ್ಯಾಸದ ವಿಚಾರದಲ್ಲಿಯೂ ಈ ಕಾರು ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ನೂತನ ಮಾರುತಿ ಸುಜುಕಿ ಬ್ರೆಝಾ 1.5-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್‌ನೊಂದಿಗೆ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 17.38 ರಿಂದ 19.80 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 25.51 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.

ಈ ಬ್ರೆಝಾ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಪ್ಯಾಡಲ್ ಶಿಫ್ಟರ್, ಸಿಂಗಲ್-ಪೇನ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿ ರೂ.8.15 ಲಕ್ಷದಿಂದ ರೂ.15.60 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯುತ್ತದೆ. ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, 7-ಸ್ವೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.

ಹೊಸ ಟಾಟಾ ನೆಕ್ಸಾನ್ ಕಾರು 17.01 ರಿಂದ 24.08 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ. ಈ ನೆಕ್ಸಾನ್ ಸಿಎನ್‌ಜಿ ಆಯ್ಕೆಯಲ್ಲೂ ಮುಂಬರುವ ತಿಂಗಳಲ್ಲಿ ಬಿಡುಗಡೆಯಾಗಲಿದೆ..
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








