Tata: ಟಾಟಾ ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್, ಸಫಾರಿ ಡಾರ್ಕ್ ಎಡಿಷನ್ ಬಿಡುಗಡೆ.. ರೂ.11 ಲಕ್ಷ ಆರಂಭಿಕ ಬೆಲೆ
ದೇಶದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಜನಪ್ರಿಯತೆ ಗಳಿಸಿದೆ. ಸೋಮವಾರ ಹೊಚ್ಚ ಹೊಸ ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಹಾಗೂ ಸಫಾರಿ ಎಸ್‌ಯುವಿಗಳ ಡಾರ್ಕ್ ಎಡಿಷನ್ (Dark Edition) ಮಾದರಿಯನ್ನು ಮಾರುಕಟ್ಟೆಯಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ.
ಭಾರತದಲ್ಲಿ ಮೊದಲ ಬಾರಿಗೆ 2019ರಲ್ಲಿ ಟಾಟಾ ಮೋಟಾರ್ಸ್ ಹ್ಯಾರಿಯರ್ (Harrier) ಡಾರ್ಕ್ ಎಡಿಷನ್ ಮಾದರಿಯನ್ನು ಪರಿಚಯಿಸಿತ್ತು. ಆ ಬಳಿಕ ಸಫಾರಿ ಹಾಗೂ ನೆಕ್ಸಾನ್ ಎಸ್‌ಯುವಿಗಳು ಡಾರ್ಕ್ ಎಡಿಷನ್ ಅವತಾರದಲ್ಲಿ ಲಾಂಚ್ ಆಗಿದ್ದವು. ಇತ್ತೀಚೆಗೆ ಈ ಎಲ್ಲ ಕಾರುಗಳನ್ನು ಕಂಪನಿಯು ನವೀನ ವಿನ್ಯಾಸ ಹಾಗೂ ಆಧುನಿಕ ವೈಶಿಷ್ಟ್ಯಗಳೊಂದಿಗೆ ಮೇಲ್ದರ್ಜೆ ರಿಸಿತ್ತು. ಈಗ ಇವುಗಳನ್ನೇ ಡಾರ್ಕ್ ಎಡಿಷನ್ ರೂಪದಲ್ಲಿ ಬಿಡುಗಡೆಗೊಳಿಸಿದೆ.

ನೂತನ ಟಾಟಾ ನೆಕ್ಸಾನ್ ಡಾರ್ಕ್ ಎಡಿಷನ್ ಬಗ್ಗೆ ಮಾತನಾಡುವುದಾದರೆ, ಈ ಎಸ್‌ಯುವಿ ರೂ.11.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ವೀಲ್ಸ್ ಸೇರಿದಂತೆ ಇದರ ಹೊರ ಹಾಗೂ ಒಳಭಾಗವು ಸಂಪೂರ್ಣವಾಗಿ ಕಪ್ಪು (Black) ಬಣ್ಣದಿಂದ ಕೂಡಿದ್ದು, ರಸ್ತೆಯಲ್ಲಿ ಹೋಗಬೇಕಾದರೆ, ಯಾರೇ ಆಗಲಿ ಒಮ್ಮೆ ತಿರುಗಿ ನೋಡುವಂತೆ ಮಾಡುತ್ತದೆ. ಉಳಿದಂತೆ ಕಾರ್ಯಕ್ಷಮತೆ ವೈಶಿಷ್ಟ್ಯಗಳಲ್ಲಿ ಯಾವುದೇ ಬದಲಾವಣೆಯನ್ನು ಪಡೆಯದೇ ಸಾಮಾನ್ಯ ನೆಕ್ಸಾನ್ ಕಾರಿನಂತೆಯೇ ಇದೆ.
ಟಾಟಾ ನೆಕ್ಸಾನ್ ಇವಿ (Nexon EV) ಕೂಡ ಡಾರ್ಕ್ ಎಡಿಷನ್ ಅವತಾರದಲ್ಲಿ ಬಿಡುಗಡೆಯಾಗಿದ್ದು, ರೂ.19.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ನೂತನ ಹ್ಯಾರಿಯರ್ ಡಾರ್ಕ್ ಎಡಿಷನ್ (Harrier Dark Edition) ಎಸ್‌ಯುವಿ ರೂ.19.99 ಲಕ್ಷ ಮತ್ತು ಸಫಾರಿ ಡಾರ್ಕ್ ಎಡಿಷನ್ (Safari Dark Edition) ಕಾರು ರೂ.20.6 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ದೇಶೀಯ ಮಾರುಕಟ್ಟೆಯಲ್ಲಿ ಮಾಮೂಲಿ ನೆಕ್ಸಾನ್ ಎಸ್‌ಯುವಿ ರೂ.8.15 ಲಕ್ಷದಿಂದ ರೂ.15.60 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 17.01 ರಿಂದ 24.08 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಅದೇ ರೀತಿಯಲ್ಲಿ ನೆಕ್ಸಾನ್ ಇವಿ ರೂ.14.74 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಈ ಕಾರು 30 ಕೆಡಬ್ಲ್ಯೂಹೆಚ್ ಮತ್ತು 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯಲಿದ್ದು, ಭರ್ತಿ ಚಾರ್ಜ್ ನಲ್ಲಿ 325 ಕಿ.ಮೀ ರಿಂದ 465 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್) ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟಾಟಾ ಹ್ಯಾರಿಯರ್ ಎಸ್‌ಯುವಿ ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. 2.0-ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಸುರಕ್ಷತೆಗಾಗಿ ಭಾರತ್ ಎನ್‌ಸಿಎಪಿ (Bharat NCAP) ಪರೀಕ್ಷೆಯಲ್ಲಿ 5 ಸ್ಟಾರ್ ರೇಟಿಂಗ್ ಗಳಿಸಿದೆ.
ಟಾಟಾ ಸಫಾರಿ ಎಸ್‌ಯುವಿ ರೂ.16.19 ಲಕ್ಷದಿಂದ ರೂ.27.34 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 14.50 ರಿಂದ 16.30 ಮೈಲೇಜ್ ನೀಡುತ್ತದೆ. 12.3 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 10.25 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications