Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಇದೀಗ ನೆಕ್ಸಾನ್ (Nexon) ಕಾಂಪ್ಯಾಕ್ಟ್ ಎಸ್‌ಯುವಿ ಲೈನ್-ಅಪ್ ವಿಸ್ತರಿಸಿದ್ದು, 5 ಹೊಸ ಎಎಂಟಿ (ಆಟೋಮೇಟೆಡ್ ಮ್ಯಾನುವಲ್ ಟ್ರಾಸ್ಮಿಷನ್) ರೂಪಾಂತರಗಳನ್ನು ಬಿಡುಗಡೆಗೊಳಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೆಕ್ಸಾನ್ ಸ್ಮಾರ್ಟ್ ಪ್ಲಸ್ (Smart+) ಪೆಟ್ರೋಲ್ ಎಎಂಟಿ ರೂಪಾಂತರ ರೂ.10 ಲಕ್ಷ ಎಕ್ಸ್ ಶೋರೂಂ (ಮುಂಬೈ) ಬೆಲೆಯನ್ನು ಹೊಂದಿದೆ. ಪ್ಯೂರ್ (Pure) ಡಿಸೇಲ್ ಎಎಂಟಿ ಆವೃತ್ತಿಯು ರೂ.11.80 ಲಕ್ಷ ಆರಂಭಿಕ ದರವನ್ನು ಪಡೆದಿದೆ. ಈ ಮೊದಲು ಪರಿಚಯಿಸಲಾಗಿದ್ದ ಕೈಗೆಟುಕುವ ಬೆಲೆಯ ನೆಕ್ಸಾನ್ ಕ್ರಿಯೇಟಿವ್ ಪೆಟ್ರೋಲ್ ಎಎಂಟಿ ಮಾದರಿ ರೂ.11.70 ಲಕ್ಷ, ಡಿಸೇಲ್ ಎಎಂಟಿ ರೂಪಾಂತರ ರೂ.13 ಲಕ್ಷ ಬೆಲೆಯನ್ನು ಹೊಂದಿತ್ತು.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನೂತನ ನೆಕ್ಸಾನ್ ಸ್ಮಾರ್ಟ್ ಪ್ಲಸ್ ರೂಪಾಂತರ 7-ಇಂಚಿನ ಟಚ್‌ಸ್ಕ್ರೀನ್, ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ಸ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4 ಸ್ಪೀಕರ್, ಎಲೆಕ್ಟ್ರಿಕಲಿ ಅಡ್ಜಸ್ಟ್ಏಬಲ್ ವಿಂಗ್ ಮಿರರ್ಸ್, 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ ಪ್ಯೂರ್ ಮಾದರಿ ಪುಲ್ ಎಲ್‌ಇಡಿ ಹೆಡ್‌ಲ್ಯಾಂಪ್ಸ್, ಟೈಲ್ ಲ್ಯಾಂಪ್ಸ್, ರೂಫ್ ರೈಲ್ಸ್, ರೇರ್ ಎಸಿ ವೆಂಟ್ಸ್, ವೀಲ್ ಕವರ್ಸ್, 4-ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಾಯ್ಸ್ ಕಮಾಂಡ್ಸ್, ಸನ್‌ರೂಫ್, ಆಟೋ ಹೆಡ್‌ಲ್ಯಾಂಪ್ಸ್, ವೈಪರ್ಸ್ ಮತ್ತು ಎಲೆಕ್ಟ್ರೋಕ್ರೋಮಿಕ್ ರೇರ್ ವ್ಯೂ ಮಿರರ್ ಒಳಗೊಂಡಂತೆ ಹತ್ತಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಹೊಸ ರೂಪಾಂತರಗಳ ಪವರ್ ಟ್ರೇನ್ ಆಯ್ಕೆ ಬಗ್ಗೆ ಮಾತನಾಡುವುದಾದರೆ, ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 120 ಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ವೀಡ್ ಎಎಂಟಿ ಹಾಗೂ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.
1.5-ಲೀಟರ್ ಡೀಸೆಲ್ ಎಂಜಿನ್ 115 ಹೆಚ್‌ಪಿ ಪವರ್ ಮತ್ತು 260 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ವೀಡ್ ಮ್ಯಾನುವಲ್, 6-ಎಎಂಟಿ ಅಥವಾ 7-ಸ್ವೀಡ್ ಡುಯಲ್ ಕ್ಲಚ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಈ ಕಾರಿಗೆ ಮಹೀಂದ್ರಾ ಎಕ್ಸ್‌ಯುವಿ300, ಮಾರುತಿ ಸುಜುಕಿ ಬ್ರೆಜ್ಜಾ, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ದೊಡ್ಡ ಎದುರಾಳಿಯಾಗಿವೆ.

ಟಾಟಾ ಕಂಪನಿಯು ನೆಕ್ಸಾನ್ ಇವಿಯನ್ನು ಮಾರಾಟ ಮಾಡುತ್ತಿದ್ದು, ಇದು ರೂ.14.74 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. 30 ಕೆಡಬ್ಲ್ಯೂಹೆಚ್ ಹಾಗೂ 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 325 ಕಿ.ಮೀ ರಿಂದ 465 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಇಕೋ, ಸಿಟಿ, ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಪಡೆದಿದೆ.
ನೆಕ್ಸಾನ್ ಇವಿ ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ 10-80% ಚಾರ್ಜ್ ಆಗಲು 56 ನಿಮಿಷ ಸಾಕು. ಈ ಕಾರು 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, 10.25-ಇಂಚಿನ ಪುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ಆಲ್-ವೀಲ್ ಡಿಸ್ಕ್ ಬ್ರೇಕ್ಸ್ ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications