Tata Nexon: ಟಾಟಾ ನೆಕ್ಸಾನ್ ಕಾರು ಖರೀದಿಸುವವರ ಗಮನಕ್ಕೆ.. ಸಿಹಿಸುದ್ದಿ, ರೂ.8 ಲಕ್ಷ ಬೆಲೆ, 24 ಕಿ.ಮೀ ಮೈಲೇಜ್

ಭಾರತದಲ್ಲಿ ಟಾಟಾ (Tata) ವಿಶ್ವಾಸಾರ್ಹ ಕಾರು ತಯಾಕರ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. 5 ತಿಂಗಳ ಹಿಂದೆ, ಕಂಪನಿಯು ನವೀಕರಿಸಿದ ನೆಕ್ಸಾನ್ (Updated Nexon) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಅಂದಿನಿಂದಲೇ ಈ ಕಾರು ಹೆಚ್ಚಿನ ಬೇಡಿಕೆ ಪಡೆದುಕೊಂಡಿದ್ದು, ಸದ್ಯ ಇದರ ಕಾಯುವಿಕೆ ಅವಧಿ ಕಡಿಮೆಯಾಗಿದೆ ಎಂಬ ಮಾಹಿತಿ ದೊರೆತಿದೆ.

ಟಾಟಾ ನೆಕ್ಸಾನ್ (Tata Nexon) ಫೇಸ್‌ಲಿಫ್ಟ್ ಎಸ್‌ಯುವಿ, ಪೆಟ್ರೋಲ್ ರೂಪಾಂತರಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು ಕನಿಷ್ಠ 8 ವಾರಗಳು ಕಾಯಬೇಕು. ಅದೇ ರೀತಿಯಲ್ಲಿ ಡೀಸೆಲ್ ರೂಪಾಂತರಗಳು ಡಿಲೆವರಿಯಾಗಲು 4-6 ವಾರಗಳು ಸಾಕು. ಈ ಕಾಯುವಿಕೆ ಅವಧಿ (Waiting Period) ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್ (Dealership), ರೂಪಾಂತರ (Variant), ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Tata Nexon SUV Waiting Period Decreases 8 Weeks February: 8 Lakh Price, 24 Km Mileage

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ನೆಕ್ಸಾನ್ ಎಸ್‌ಯುವಿ, ರೂ.8.15 ಲಕ್ಷದಿಂದ ರೂ.15.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಪ್ಯೂರ್, ಕ್ರಿಯೇಟಿವ್, ಫಿಯರ್ ಲೆಸ್ ರೂಪಾಂತರ ಹಾಗೂ ಫಿಯರ್ಲೆಸ್ ಪರ್ಪಲ್, ಫ್ಲೇಮ್ ರೆಡ್, ಕ್ಯಾಲ್ಗರಿ ವೈಟ್ ಸೇರಿದಂತೆ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ನೆಕ್ಸಾನ್ ಎಸ್‌ಯುವಿ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಪಿಎಸ್ ಪವರ್ (ಶಕ್ತಿ), 170 ಎನ್ಎಂ ಪೀಕ್ ಟಾರ್ಕ್, ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 115 ಪಿಎಸ್ ಗರಿಷ್ಠ ಪವರ್ ಮತ್ತು 260 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Tata Nexon SUV Waiting Period Decreases 8 Weeks February: 8 Lakh Price, 24 Km Mileage

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಮತ್ತು 7-ಸ್ವೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಜೊತೆಗೆ FWD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಮೈಲೇಜ್ ವಿಚಾರವಾಗಿ ಹೇಳುವುದಾದರೆ, ನೆಕ್ಸಾನ್ ಎಸ್‌ಯುವಿ 17.01 ರಿಂದ 24.08 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಒಳಗೊಂಡಿದೆ.

ನೆಕ್ಸಾನ್ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್‌, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತೆಯ ವಿಚಾರದಲ್ಲಿಯೂ ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿ ಅತ್ಯುತ್ತಮವಾಗಿದ್ದು, ಗ್ಲೋಬಲ್ ಎನ್‌ಸಿಎಪಿ (Global NCAP) ಪರೀಕ್ಷೆಯಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ವಯಸ್ಕರ ರಕ್ಷಣೆ (Adult Occupant) ವಿಭಾಗದಲ್ಲಿ 34ಕ್ಕೆ 32.22 ಹಾಗೂ ಮಕ್ಕಳ ರಕ್ಷಣೆ (Child Occupant) ವಿಭಾಗದಲ್ಲಿ 49ಕ್ಕೆ 44.52 ಅಂಕಗಳನ್ನು ಗಳಿಸಿದೆ.

ನೆಕ್ಸಾನ್ ಎಸ್‌ಯುವಿ 6 ಏರ್‌ಬ್ಯಾಗ್‌, ಹಿಲ್ ಅಸಿಸ್ಟ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) 360 - ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರಿಗೆ ಕಿಯಾ ಸೋನೆಟ್, ಮಹೀಂದ್ರಾ ಎಕ್ಸ್‌ಯುವಿ300, ರೆನಾಲ್ಟ್ ಕಿಗರ್, ಮಾರುತಿ ಸುಜುಕಿ ಬ್ರೆಝಾ, ನಿಸ್ಸಾನ್ ಮ್ಯಾಗ್ನೈಟ್ ಮತ್ತು ಹ್ಯುಂಡೈ ವೆನ್ಯೂ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 22, 2024, 10:41 [IST]
English summary
Tata nexon suv waiting period decreases 8 weeks february 8 lakh price 24 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+