ಇವೆರೆಡು ಜನಪ್ರಿಯ ಕಾರುಗಳು.. ಕೈಗೆಟುಕುವ ಬೆಲೆ, ಭಾರಿ ಮೈಲೇಜ್.. 5-ಸೀಟರ್.. ನಿಮಗೆ ಯಾವುದು ಇಷ್ಟ?

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಹಾಗೂ ಮಹೀಂದ್ರಾ (Mahindra) ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಂಪನಿಗಳು ಮಾರಾಟಗೊಳಿಸುವ ಹ್ಯಾಚ್‌ಬ್ಯಾಕ್, ಎಸ್‌ಯುವಿ ಹಾಗೂ ಎಂಪಿವಿಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿವೆ. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನಾವಿಲ್ಲಿ ಜನಪ್ರಿಯ ಎಸ್‍ಯುವಿಗಳಾದ ಟಾಟಾ ನೆಕ್ಸಾನ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒಗಳ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ವಿಶ್ಲೇಷಣೆ ಮಾಡಿದ್ದೇವೆ.

ಬೆಲೆ (Price): ಟಾಟಾ ನೆಕ್ಸಾನ್ (Tata Nexon) ರೂ.8 ರಿಂದ ರೂ.15.50 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ರೂ.7.79 ರಿಂದ ರೂ.15.49 ಲಕ್ಷ ಬೆಲೆಯನ್ನು ಹೊಂದಿದೆ. ಇವೆರೆಡು ಕಾರುಗಳಲ್ಲಿ ನೆಕ್ಸಾನ್ ಕೊಂಚ ದುಬಾರಿ ದರವನ್ನು ಒಳಗೊಂಡಿದೆ.

Tata Nexon Vs Mahindra XUV 3XO Price Mileage Features Comparison Which Is The Best

ಸುತ್ತಳತೆ (Dimensions): ಈ ಕಾರುಗಳು ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸ (ಡಿಸೈನ್) ಹೊಂದಿವೆ. ಟಾಟಾ ನೆಕ್ಸಾನ್ ಎಸ್‌ಯುವಿ 3,995 ಎಂಎಂ ಉದ್ದ, 1,805 ಎಂಎಂ ಅಗಲ, 1,620 ಎಂಎಂ ಎತ್ತರ ಹಾಗೂ 2,498 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು 3,990 ಎಂಎಂ ಉದ್ದ, 1,821 ಎಂಎಂ ಅಗಲ ಮತ್ತು 1,647 ಎಂಎಂ ಎತ್ತರ ಹಾಗೂ 2,600 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance): ಟಾಟಾ ನೆಕ್ಸಾನ್ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ & 7-ಸ್ವೀಡ್ ಡುಯಲ್ ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್‌ಬಾಕ್ಸ್‌ನ್ನು ಪಡೆದಿದೆ. 17.01 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Tata Nexon Vs Mahindra XUV 3XO Price Mileage Features Comparison Which Is The Best

ಈ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ 1.2-ಲೀಟರ್ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಆದರೆ ನೆಕ್ಸಾನ್ 'ಸಿಎನ್‌ಜಿ' ಪವರ್‌ಟ್ರೇನ್ ಹೊಂದಿರುವುದರಿಂದ ಸ್ವಲ್ಪ ಹೆಚ್ಚಿನ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು (Features): ಟಾಟಾ ನೆಕ್ಸಾನ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರುಗಳು ಬಹುತೇಕ ಒಂದೇ ರೀತಿಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ನೆಕ್ಸಾನ್ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ಸ್ ಮತ್ತು 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್‌ಗಳನ್ನು ಒಳಗೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು, ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್ಪ್ಲೇಗಳು (10.25-ಇಂಚು), ಕ್ರೂಸ್ ಕಂಟ್ರೋಲ್, ಡುಯಲ್ - ಝೋನ್ ಎಸಿ (ಏರ್ ಕಂಡೀಷನ್) ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರುಗಳು ಪ್ರಯಾಣಿಕರ ರಕ್ಷಣೆಗಾಗಿ ಒಂದೇ ರೀತಿಯ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ನೆಕ್ಸಾನ್ ಎಸ್‌ಯುವಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು, 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್- 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, November 4, 2024, 10:30 [IST]
English summary
Tata nexon vs mahindra xuv 3xo price mileage features comparison which is the best
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+