Tata: ಪಂಚ್, ಆಲ್ಟ್ರೋಜ್ ಸಿಎನ್‌ಜಿ ಕಾರುಗಳಲ್ಲಿ ಆಟೋಮೆಟಿಕ್ ಗೇರ್‌ಬಾಕ್ಸ್?.. ಬೈಕ್‌ನಂತೆ ಮೈಲೇಜ್!

ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors), ನಂಬಿಕೆಯ ಕಾರು ತಯಾರಕ ಕಂಪನಿಯಾಗಿದೆ. ಇತ್ತೀಚೆಗೆ ಟಿಯೊಗೊ (Tiago) ಮತ್ತು ಟಿಗೂರ್ (Tigor) ಸಿಎನ್‌ಜಿ ಆಟೋಮೆಟಿಕ್ ಮಾದರಿಗಳನ್ನು ಬಿಡುಗಡೆಗೊಳಿಸಿತ್ತು. ಇವು ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಕಿಟ್ ಪಡೆದ ಮೊದಲ ಅಟೋಮೆಟಿಕ್ ಕಾರುಗಳೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದವು. ಗ್ರಾಹಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಸದ್ಯ, ಟಾಟಾ ಕಂಪನಿಯು ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ದೊರೆಯುವ ಪಂಚ್ (Punch) ಮತ್ತು ಆಲ್ಟ್ರೋಜ್ (Altroz) ಸಿಎನ್‌ಜಿ ಕಾರುಗಳನ್ನು ಟಿಯೊಗೊ, ಟಿಗೂರ್ ರೀತಿಯಲ್ಲಿಯೇ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು. ಈ ಕುರಿತಂತೆ ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ. ಆದರೆ, ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Tata Punch, Altroz CNG Car Get Automatic Gearbox: Mileage Like Bike?

ಮೊದಲಿಗೆ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್ (Tata Punch) ಸಿಎನ್‌ಜಿ ಮ್ಯಾನುವಲ್ ಆವೃತ್ತಿ ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.7.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1.2-ಲೀಟರ್ ಎಂಜಿನ್ ಹೊಂದಿದ್ದು, 73.5 ಪಿಎಸ್ ಗರಿಷ್ಠ ಪವರ್, 103 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ವೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದ್ದು, 26.99 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ಟಾಟಾ ಪಂಚ್ ಸಿಎನ್‌ಜಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಪವರ್ ಅಡ್ಜಸ್ಟಬಲ್ ಎಕ್ಸ್‌ಟೀರಿಯರ್ ರೇರ್ ವ್ಯೂ ಮಿರರ್, ಟಚ್ ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್, ಅಲಾಯ್ ವೀಲ್ಸ್, ಫಾಗ್ ಲೈಟ್ಸ್ - ಫ್ರಂಟ್, ಫ್ರಂಟ್ & ರೇರ್ ಪವರ್ ವಿಂಡೋಸ್ ಅನ್ನು ಪಡೆದಿದೆ.

Tata Punch, Altroz CNG Car Get Automatic Gearbox: Mileage Like Bike?

ಟಾಟಾ ಆಲ್ಟ್ರೋಜ್ (Tata Altroz) ಸಿಎನ್‌ಜಿ ಮ್ಯಾನುವಲ್ ರೂಪಾಂತರ ರೂ.7.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಪಡೆದಿದ್ದು, 73.5 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 103 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ 26.20 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಈ ಆಲ್ಟ್ರೋಜ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್ ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್ ಒಳಗೊಂಡಿದ್ದು, ಫ್ರಂಟ್ ಏರ್‌ಬ್ಯಾಗ್‌, ಆಟೋ ಪಾರ್ಕ್ ಲಾಕ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಪಡೆದಿದೆ.

ಇತ್ತೀಚೆಗೆ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ ಟಾಟಾ ಟಿಯಾಗೊ, ಟಿಗೂರ್ ಸಿಎನ್‌ಜಿ ಆಟೋಮೆಟಿಕ್ ಮಾದರಿಗಳು, 1.2-ಲೀಟರ್ ಎಂಜಿನ್ ಹೊಂದಿದ್ದು, 72 ಪಿಎಸ್ ಗರಿಷ್ಠ ಪವರ್, 95 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿವೆ. 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತವೆ. 28.06 ಕೆಎಂ/ಕೆಜಿ ಇಂಧನ ದಕ್ಷತೆ ಹೊಂದಿವೆ ಎಂದು ತಿಳಿದುಬಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, February 12, 2024, 18:28 [IST]
English summary
Tata punch altroz cng car get automatic gearbox mileage like bike
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+