TATA: ಡೀಲರ್‌ಶಿಪ್‌ಗೆ ಬಂದೇ ಬಿಡ್ತು ಟಾಟಾದ ಹೊಸ ಕಾರು, 5 ಸೀಟರ್.. ಬೆಲೆ ಇಷ್ಟೇನಾ.. ವಿಶೇಷತೆಗಳೇನು?
ದಿವಂಗತ ರತನ್ ಟಾಟಾ ಒಡೆತನದ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಕಂಪನಿ ಮಾರಾಟಗೊಳಿಸುವ ಪಂಚ್ (Punch) ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿ ಹೊರಹೊಮ್ಮಿದೆ. ದಸರಾ ಹಬ್ಬದ ಹಿನ್ನೆಲೆ, ಈ ಕಾರಿನ ಹೊಚ್ಚ ಹೊಸ ವಿಶೇಷ ಆವೃತ್ತಿ (Special Edition) ಅಥವಾ ನೂತನ ಮಾದರಿಯನ್ನು (New Model) ಬಿಡುಗಡೆಗೊಳಿಸಿದೆ. ಅದಕ್ಕೆ 'ಪಂಚ್ ಕ್ಯಾಮೊ ಎಡಿಷನ್' ಎಂದು ನಾಮಕರಣ ಮಾಡಲಾಗಿದೆ. ಇದು ಕೆಲವು ತಿಂಗಳವರೆಗೆ ಮಾತ್ರ ಖರೀದಿಗೆ ಲಭ್ಯವಾಗಲಿದೆ ಎಂದು ವರದಿಯಾಗಿದೆ.
ಸದ್ಯ, ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ಹೊಸ ಟಾಟಾ ಪಂಚ್ ಕ್ಯಾಮೊ ಎಡಿಷನ್ (Tata Punch Camo Edition) ಎಸ್‌ಯುವಿಯನ್ನು ಕಂಪನಿಯು ತಲುಪಿಸುವುದಕ್ಕೆ ಶುರು ಮಾಡಿದೆ. ಈ ಕಾರು ರೂ.8.45 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಹಲವು ವಿಶೇಷತೆಗಳಿಗೂ ಸಾಕ್ಷಿಯಾಗಿದೆ.

ಈ ನೂತನ ಕಾರು, ಹೊರಭಾಗದಲ್ಲಿ (ಔಟ್-ಸೈಡ್) ಸೀವೀಡ್ ಗ್ರೀನ್ ಬಣ್ಣದ (ಕಲರ್) ಆಯ್ಕೆಯನ್ನು ಹೊಂದಿದೆ. ವೈಟ್ ರೂಫ್‌ನ್ನು ಒಳಗೊಂಡಿದ್ದು, ಚಾರ್ಕೋಲ್ ಗ್ರೇ ಬಣ್ಣವನ್ನು ಪಡೆದಿರುವ 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಒಳಭಾಗವು (ಇನ್-ಸೈಡ್) ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, 5 ಆಸನ (ಸೀಟ್) ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.
ಹೊಸ ಟಾಟಾ ಪಂಚ್ ಕ್ಯಾಮೊ ಎಡಿಷನ್ ಎಸ್‌ಯುವಿ ಯುವ ಗ್ರಾಹಕರನ್ನು ಸೆಳೆಯುವಂತಹ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಟೈಪ್ ಸಿ ಚಾರ್ಜಿಂಗ್ ಪೋರ್ಟ್, ಸೆಂಟರ್ ಆರ್ಮ್‌ರೆಸ್ಟ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಎಸ್‌ಯುವಿ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 86 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ನೂತನ ಟಾಟಾ ಪಂಚ್ ಕ್ಯಾಮೊ ಎಡಿಷನ್ ಸಿಎನ್‌ಜಿ ಚಾಲಿತ ರೂಪದಲ್ಲಿಯೂ ಲಭ್ಯವಿದ್ದು, ಇದೇ 1.2-ಲೀಟರ್ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 73 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 103 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಸಿಗುತ್ತದೆ. ಜೊತೆಗೆ ಈ ಕಾರು, 19 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡುತ್ತದೆ.

ಒಟ್ಟಾರೆಯಾಗಿ ಸಾಕಷ್ಟು ಅತ್ಯಾಧುನಿಕವಾಗಿರುವ ಟಾಟಾ ಪಂಚ್ ಕ್ಯಾಮೊ ಎಡಿಷನ್ ಎಸ್‌ಯುವಿ ಡೀಲರ್‌ಶಿಪ್‌ಗಳನ್ನು ತಲುಪಲು ಶುರುವಾಗಿರುವುದು ಗ್ರಾಹಕರಿಗೆ ಖುಷಿತಂದಿದೆ. ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಬಹುದು ಎಂದು ಕಂಪನಿಯು ನಿರೀಕ್ಷಿಸಿದ್ದು, ಮುಂಬರುವ ದಿನಗಳಲ್ಲಿ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








