Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಹ್ಯಾಚ್‌ಬ್ಯಾಕ್, ಎಸ್‌ಯುವಿಗಳು ಆಕರ್ಷಕ ವೈಶಿಷ್ಟ್ಯ ಮತ್ತು ವಿನ್ಯಾಸವನ್ನು ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಜನಪ್ರಿಯ 'ಪಂಚ್' ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಟಾಟಾ ಪಂಚ್ (Tata Punch) ಎಸ್‌ಯುವಿಯ ಬೇಸ್ ಮಾಡೆಲ್ ಪ್ಯೂರ್ (ಪೆಟ್ರೋಲ್) ರೂ.7.49 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಅಡ್ವೆಂಚರ್ (ಪೆಟ್ರೋಲ್) ಮಾಡೆಲ್ ರೂ.8.95 ಲಕ್ಷ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಖರೀದಿಸುವ ಮತ್ತು ಬೇಸ್ ವೇರಿಯೆಂಟ್ ಪ್ಯೂರ್ (ಸಿಎನ್‌ಜಿ) ರೂ.8.82 ಲಕ್ಷ ಮತ್ತು ಟಾಪ್ ಎಂಡ್ ಮಾಡೆಲ್ ಅಕಾಂಪ್ಲೀಶೆಡ್ ರೂ.11.96 ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ಈ ಕಾರನ್ನು ರೂ.75,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.14,251 ಇಎಂಐ ಕಟ್ಟಬೇಕು. ನೂತನ ಟಾಟಾ ಪಂಚ್ ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ಅಟಾಮಿಕ್ ಆರೆಂಜ್, ಟ್ರಾಪಿಕಲ್ ಮಿಸ್ಟ್, ಡೇಟೋನಾ ಗ್ರೇ, ಆರ್ಕಸ್ ವೈಟ್ ಸೇರಿದಂತೆ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ.
ಟಾಟಾ ಪಂಚ್ ಮೆಕ್ರೋ ಎಸ್‌ಯುವಿಯಾಗಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 18.8 ರಿಂದ 20.09 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.99 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7-ಇಂಚಿನ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಡಿಫಾಗರ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಟಾಟಾ ಪಂಚ್ ಎಲೆಕ್ಟ್ರಿಕ್ ರೂಪದಲ್ಲಿಯೂ ಖರೀದಿಗೆ ಲಭ್ಯವಿದ್ದು, ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಈ ಕಾರು 25 ಕೆಡಬ್ಲ್ಯೂಹೆಚ್ ಮತ್ತು 35 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 315 ಕಿಲೋಮೀಟರ್ ರಿಂದ 421 ಕಿಲೋಮೀಟರ್ ಕ್ರಮಿಸುತ್ತದೆ.
ಈ ಟಾಟಾ ಪಂಚ್ ಇವಿ, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ನಿಮ್ಮ ಗಮನಕ್ಕೆ.. ಇಲ್ಲಿ ಪಂಚ್ ಕಾರಿನ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications