ಟಾಟಾದ ಈ ಕಾರಿಗೆ ಒಮ್ಮೆ ಬಂಡವಾಳ ಹಾಕಿದರೆ ಸಾಕು, ಪೆಟ್ರೋಲ್‌ಗೆ ದುಡ್ಡೇ ಬೇಕಿಲ್ಲ.. ಎಲ್ಲವೂ ಉಳಿತಾಯ!
ದೇಶದಲ್ಲಿ ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ಕಾರುಗಳನ್ನು ಕೊಂಡುಕೊಳ್ಳುವವರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಇವುಗಳಿಗೆ ಒಮ್ಮೆ ಮಾತ್ರ ಬಂಡವಾಳವನ್ನು ಹಾಕಿ ತೆಗೆದುಕೊಳ್ಳಬೇಕಾಗಿದ್ದು, ಆ ಬಳಿಕ ಅತಿ ಕಡಿಮೆ ವೆಚ್ಚದಲ್ಲಿ ನಿರ್ವಹಣೆಯನ್ನು ಮಾಡಬಹುದು. ಸದ್ಯ, ಟಾಟಾ ಪಂಚ್ ಎಲೆಕ್ಟ್ರಿಕ್ ಎಸ್‌ಯುವಿ ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ.
ನೀವು ಹೊಚ್ಚ ಹೊಸ ಟಾಟಾ ಪಂಚ್ ಇವಿ (Tata Punch EV)ಯನ್ನು ಕೊಂಡುಕೊಳ್ಳಬೇಕೇ.. ಇಲ್ಲಿ ಈ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ. ನೂತನ ಪಂಚ್ ಇವಿ ಪೆಟ್ರೋಲ್ ಕಾರುಗಳಿಗೆ ಉತ್ತಮವಾದ ಪರ್ಯಾಯವಾಗಿದ್ದು, ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ.

ಈ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಅಡ್ವೆಂಚರ್, ಎಂಪವರ್ಡ್ ಎಂಪವರ್ಡ್ ಪ್ಲಸ್ ಎಂಬ ರೂಪಾಂತರ (ವೇರಿಯೆಂಟ್)ಗಳೊಂದಿಗೆ ಲಭ್ಯವಿದೆ. ಜೊತೆಗೆ 1-ಮೊನೊಟೋನ್ ಹಾಗೂ 5-ಡುಯಲ್ ಟೋನ್ ಬಣ್ಣಗಳ ಆಯ್ಕೆಯನ್ನು ಕೂಡ ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.
ಟಾಟಾ ಪಂಚ್ ಇವಿ ಎರಡು ಬ್ಯಾಟರಿ ಪ್ಯಾಕ್‌ನೊಂದಿಗೆ ಖರೀದಿಗೆ ಸಿಗುತ್ತದೆ. 25 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿರುವ ಮಾದರಿಯು ಸಂಪೂರ್ಣ ಚಾರ್ಜ್ ನಲ್ಲಿ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಅದೇ ರೀತಿಯಲ್ಲಿ 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಆವೃತ್ತಿಯು ಭರ್ತಿ ಚಾರ್ಜ್ ನಲ್ಲಿ 421 ಕಿ.ಮೀ ಕ್ರಮಿಸಿಸುತ್ತದೆ.

ಈ ಕಾರಿನ ಬ್ಯಾಟರಿಯು ಡಿಸಿ ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ ಶೇಕಡ 10 - 80% ಚಾರ್ಜ್ ಆಗಲು ಕೇವಲ 56 ನಿಮಿಷವನ್ನು ತೆಗೆದುಕೊಳ್ಳುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಏರ್ ಪ್ಯೂರಿಫೈಯರ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಂಚ್ ಇವಿಯು ಒಳಗೊಂಡಿದೆ.
ಟಾಟಾ ಪಂಚ್ ಇವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, 360-ಡಿಗ್ರಿ ಕ್ಯಾಮೆರಾ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಟೋ ಹೋಲ್ಡ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಬ್ಲೈಂಡ್ ಸ್ಪಾಟ್ ವ್ಯೂ ಮಾನಿಟರ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಅನ್ನು ಹೊಂದಿದೆ. ಈ ಕಾರಿಗೆ ಎಂಜಿ ಕಾಮೆಟ್ ಇವಿ ಪ್ರಬಲ ಪ್ರತಿಸ್ಪರ್ಧಿಯಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಕಂಪನಿಯು ಪಂಚ್ ಇವಿ ಮಾತ್ರವಲ್ಲದೆ, ಟಿಯಾಗೊ ಇವಿಯನ್ನು ಮಾರಾಟ ಮಾಡುತ್ತಿದೆ. ಇದು ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. 19.2 ಮತ್ತು 24 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದಿದ್ದು, ಭರ್ತಿ ಚಾರ್ಜ್ ನಲ್ಲಿ 250 ರಿಂದ 315 ಕಿ.ಮೀ ಓಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications