ನೀರಲ್ಲೂ ಮೀನನ್ನು ನಾಚಿಸುವಂತೆ ಟಾಟಾ ಪಂಚ್ ಎಲೆಕ್ಟ್ರಿಕ್ ಪರ್ಫಾಮೆನ್ಸ್: ಆಫ್-ರೋಡ್ ವಾಹನಗಳೇ ಕಕ್ಕಾಬಿಕ್ಕಿ
ಭಾರತದ ಮೈಕ್ರೋ ಎಸ್‌ಯುವಿ (SUV) ಮಾರುಕಟ್ಟೆಯಲ್ಲಿ ಟಾಟಾ ಪಂಚ್ (Tata Punch) ವಿಶೇಷವಾದ ಸ್ಥಾನಗಳಿಸಿದೆ. ಸದ್ಯ, ಕಂಪನಿಯು ಎಲೆಕ್ಟ್ರಿಕ್ ರೂಪದಲ್ಲಿ ಪಂಚ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಟಾಟಾ ಮೋಟಾರ್ಸ್ ಕಂಪನಿಯು ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿಗಾಗಿ (Tata Punch EV) ಮತ್ತೊಂದು ಟೀಸರ್ ಅನ್ನು ಬಿಡುಗಡೆ ಮಾಡಿದೆ.
ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನ ಹೊಸ ಟೀಸರ್ ವೀಡಿಯೊದಲ್ಲಿ ಎಲೆಕ್ಟ್ರಿಕ್ ಮೈಕ್ರೋ ಎಸ್‌ಯುವಿಯ ಆಫ್-ರೋಡ್ ಸಾಮರ್ಥ್ಯಗಳನ್ನು ತೋರಿಸುತ್ತದೆ. ಈ ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು ಟ್ರ್ಯಾಕ್‌ಗಳು ಮತ್ತು ಒರಟಾದ ರಸ್ತೆಗಳಂತಹ ವಿವಿಧ ಭೂಪ್ರದೇಶಗಳಲ್ಲಿ ಅದರ ಕಾರ್ಯಕ್ಷಮತೆಯನ್ನು ಪ್ರದರ್ಶಿಸುತ್ತದೆ. ಟೀಸರ್ ಜೊತೆಗೆ, ಟಾಟಾ ಇಂಟೀರಿಯರ್ ಚಿತ್ರಗಳನ್ನು ಬಹಿರಂಗಪಡಿಸಿದೆ.

ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನಲ್ಲಿ ದೊಡ್ಡದಾದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಹೊಂದಿರುತ್ತದೆ ಎಂದು ಖಚಿತಪಡಿಸಿದೆ. ಈ ಯುನಿಟ್ Apple CarPlay ಮತ್ತು Android Auto ಎರಡಕ್ಕೂ ಕನೆಕ್ಟ್ ಆಗಿರುತ್ತದೆ. ನವೀಕರಿಸಿದ ಸೆಂಟರ್ ಕನ್ಸೋಲ್ ಈಗ ಟಚ್-ಸೆನ್ಸಿಟಿವ್ ಎಸಿ ಕಂಟ್ರೋಲ್ ಪ್ಯಾನೆಲ್ ಅನ್ನು ಸಂಯೋಜಿಸುತ್ತದೆ, ಇದು ನೆಕ್ಸಾನ್‌ನಲ್ಲಿ ಕಂಡುಬರುವ ವಿನ್ಯಾಸವನ್ನು ನೆನಪಿಸುತ್ತದೆ.
ಹೆಚ್ಚುವರಿಯಾಗಿ ಟಾಟಾ ಪಂಚ್ ಇವಿ ಹೊಸ ಟು-ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಪ್ರಕಾಶಿತ ಟಾಟಾ ಲೋಗೋದೊಂದಿಗೆ ಅಳವಡಿಸಿಕೊಂಡಿದೆ. ದನ್ನು ಟಾಟಾ ನೆಕ್ಸಾನ್ ಇವಿಯಿಂದ ಎರವಲು ಪಡೆಯಲಾಗಿದೆ, ಟಚ್ ಆಧಾರಿತ ಕಂಟ್ರೋಲ್ ಗಳನ್ನು ಒಳಗೊಂಡಿದೆ. ಇನ್ನು ಈ ಎಸ್‍ಯುವಿಯ ಒಳಭಾಗದಲ್ಲಿ ತಾಜಾ ಡ್ಯುಯಲ್-ಟೋನ್ ಅಪ್ಹೋಲ್ಸ್ಟರಿ, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು AQI ಡಿಸ್ಪ್ಲೇಯೊಂದಿಗೆ ಏರ್ ಪ್ಯೂರಿಫೈಯರ್ ಹೊಂದಿದೆ.

ಇದರೊಂದಿಗೆ ಆಟೋ ಫೋಲ್ಡ್ ORVM ಗಳು, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, ಲೆಥೆರೆಟ್ ಸೀಟುಗಳು, 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರ್, ಸನ್‌ರೂಫ್ ಅನ್ನು ಹೊಂದಿದೆ. , ಕ್ರೂಸ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿರುತ್ತದೆ.
ಗಮನಾರ್ಹವಾಗಿ, ಟಾಟಾ ಪಂಚ್ ಇವಿ ಟಾಟಾದ ಹೊಸ Acti.EV (ಅಡ್ವಾನ್ಸ್ಡ್ ಕನೆಕ್ಟೆಡ್ ಟೆಕ್ ಇಂಟೆಲಿಜೆಂಟ್ ಎಲೆಕ್ಟ್ರಿಕ್ ವೆಹಿಕಲ್) ಪ್ಲಾಟ್‌ಫಾರ್ಮ್‌ನ ಆದ್ಗಾರವಾಗಿದೆ. ಈ ಪ್ಲಾಟ್‌ಫಾರ್ಮ್ ಅನ್ನು ಮುಂಬರುವ ಎಲೆಕ್ಟ್ರಿಕ್ ಮಾದರಿಗಳಾದ ಹ್ಯಾರಿಯರ್ ಇವಿ ಮತ್ತು ಕರ್ವ್ ಇವಿ ಆಧರಿಸಿರುತ್ತದೆ. ಈ Acti.EV ಆರ್ಕಿಟೆಕ್ಚರ್ ಬಹುಮುಖವಾಗಿದೆ, ವಿವಿಧ ಬಾಡಿ ಗಾತ್ರಗಳು, ಪವರ್‌ಟ್ರೇನ್‌ಗಳು ಮತ್ತು ಡ್ರೈವ್‌ಟ್ರೇನ್ ಸಿಸ್ಟಂಗಳಿಗೆ ಸ್ಥಳಾವಕಾಶ ನೀಡುತ್ತದೆ.

ಈ ಪ್ಲಾಟ್‌ಫಾರ್ಮ್ ಆಧಾರಿತ ಟಾಟಾದ ಎಲೆಕ್ಟ್ರಿಕ್ ವಾಹನಗಳು 300 ಕಿಮೀ ಮತ್ತು 600 ಕಿಮೀ ರೇಂಜ್ ಅನ್ನು ನೀಡುವ ನಿರೀಕ್ಷೆಯಿದೆ. ಪ್ಲಾಟ್‌ಫಾರ್ಮ್ 11kW AC ಚಾರ್ಜಿಂಗ್ ಮತ್ತು 150kW ವರೆಗೆ ವೇಗದ DC ಚಾರ್ಜಿಂಗ್ ಎರಡನ್ನೂ ಬೆಂಬಲಿಸುತ್ತದೆ.ಈ ಮೈಕ್ರೋ ಎಸ್‍ಯುವಿ ಎರಡು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಇದು ಸ್ಟ್ಯಾಂಡರ್ಡ್ ಮತ್ತು ಲಾಂಗ್ ರೇಂಜ್ ಆಗಿದೆ.
ಸ್ಪರ್ಧೆಯ ದೃಷ್ಟಿಯಿಂದ, ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು ಸಿಟ್ರಮ್ eC3 ಎಲೆಕ್ಟ್ರಿಕ್ ಕಾರಿಗೆ ಪೈಪೋಟಿ ನೀಡುತ್ತದೆ. ಈ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ರೂ.12 ಲಕ್ಷವಾಗಿದೆ. ಇನ್ನು ಈ ಟಾಟಾ ಎಲೆಕ್ಟಿಕ್ ಕಾರಿನ ಟಾಪ್ ವೆರಿಯೆಂಟ್ ರೂ.14 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿರುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications