TATA: 5-ಸೀಟರ್.. ಟಾಟಾದ ಈ ಜನಪ್ರಿಯ ಕಾರುಗಳು ಪ್ರತಿಯೊಬ್ಬರಿಗೂ ಇಷ್ಟ, ದಾಖಲೆ ಸಂಖ್ಯೆಯಲ್ಲಿ ಮಾರಾಟ!

ಟಾಟಾ ಮೋಟಾರ್ಸ್ (Tata Motors), ಸುರಕ್ಷಿತ ಕಾರು ತಯಾರಿಕೆಗೆ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ಕಂಪನಿಯ ಪಂಚ್, ನೆಕ್ಸಾನ್ ಹಾಗೂ ಕರ್ವ್ ಪ್ರಖ್ಯಾತ ಎಸ್‌ಯುವಿಗಳಾಗಿ ಹೊರಹೊಮ್ಮಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಈ ನವೆಂಬರ್‌ನಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರನ್ನು ಸೆಳೆದಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಟಾಟಾ ಪಂಚ್ (Tata Punch) ಮಾರಾಟದ ಅಂಕಿಅಂಶಗಳ ಕುರಿತಂತೆ ಮಾತನಾಡೋಣ. ಇದೊಂದು ಮೈಕ್ರೋ ಎಸ್‌ಯುವಿಯಾಗಿದೆ. ಕಳೆದ ತಿಂಗಳು (ನವೆಂಬರ್-2024) ಕಂಪನಿಯು 15,435 ಯುನಿಟ್ ಪಂಚ್ ಕಾರುಗಳನ್ನು ಮಾರಾಟಗೊಳಿಸಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 14,383 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 7% ಬೆಳವಣಿಗೆಯಾಗಿದೆ.

Tata Punch Nexon And Curvv Cars November Sales 2024 Report

ಟಾಟಾ ಪಂಚ್ ಇಂಧನ/ಎಲೆಕ್ಟ್ರಿಕ್ ರೂಪದಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರಿನ ಇಂಧನ ಚಾಲಿತ ಮಾದರಿಯು ರೂ.6.13 ಲಕ್ಷದಿಂದ ರೂ.10.15 ಲಕ್ಷ ಬೆಲೆಯನ್ನು ಹೊಂದಿದೆ. ಎಲೆಕ್ಟ್ರಿಕ್ ಚಾಲಿತ ಮಾದರಿಯು ಕನಿಷ್ಠ ರೂ.9.99 ಲಕ್ಷ ಮತ್ತು ಗರಿಷ್ಠ ರೂ.14.29 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇವೆರೆಡು ಕಾರುಗಳಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ಟಾಟಾ ನೆಕ್ಸಾನ್ (Tata Nexon) ಜನಪ್ರಿಯ ಎಸ್‌ಯುವಿಯಾಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಈ ನವೆಂಬರ್‌ನಲ್ಲಿ 15,329 ಯುನಿಟ್ ನೆಕ್ಸಾನ್ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ನವೆಂಬರ್‌ನಲ್ಲಿ ಮಾರಾಟಗೊಳಿಸಿದ 14,916 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 3% ಪ್ರಗತಿ ಸಾಧಿಸಲಾಗಿದೆ.

Tata Punch Nexon And Curvv Cars November Sales 2024 Report

ಈ ನೆಕ್ಸಾನ್ ಎಸ್‌ಯುವಿ ಸಹ ಇಂಧನ/ಎಲೆಕ್ಟ್ರಿಕ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ ಇಂಧನ ಚಾಲಿತ ಮಾದರಿಯು ಕನಿಷ್ಠ ರೂ.8 ಲಕ್ಷ ಮತ್ತು ರೂ.15.80 ಲಕ್ಷ ದರವನ್ನು ಹೊಂದಿದೆ. ಎಲೆಕ್ಟ್ರಿಕ್ ಚಾಲಿತ ಮಾದರಿ ರೂ.12.49 ಲಕ್ಷದಿಂದ ರೂ.17.19 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ.

ಕಳೆದ ಆಗಸ್ಟ್‌ನಲ್ಲಿ ಬಿಡುಗಡೆಯಾಗಿದ್ದ ಟಾಟಾ ಕರ್ವ್ (Tata Curvv) ನಿಧಾನವಾಗಿ ಗೇಮ್ ಚೇಂಜರ್ ಎಸ್‌ಯುವಿ ಆಗಿ ಹೊರಹೊಮ್ಮಿದೆ. ಈ ನವೆಂಬರ್‌ನಲ್ಲಿ ಕಂಪನಿಯು 5,101 ಯುನಿಟ್ ಕರ್ವ್ ಕಾರು ಮಾರಾಟಗೊಂಡಿದೆ. ಅಕ್ಟೋಬರ್‌ನಲ್ಲಿ 5,351 ಯುನಿಟ್, ಸೆಪ್ಟೆಂಬರ್‌ನಲ್ಲಿ 4,763 ಯುನಿಟ್ ಹಾಗೂ ಆಗಸ್ಟ್‌ನಲ್ಲಿ 3,455 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Tata Punch Nexon And Curvv Cars November Sales 2024 Report

ಹೊಸ ಟಾಟಾ ಕರ್ವ್ ಎಸ್‌ಯುವಿಯ ಇಂಧನ ಚಾಲಿತ ಮಾದರಿಯು ರೂ.10 ಲಕ್ಷದಿಂದ ರೂ.19 ಲಕ್ಷ ಬೆಲೆಯನ್ನು ಒಳಗೊಂಡಿದೆ. ಎಲೆಕ್ಟ್ರಿಕ್ ಮಾದರಿಯು ರೂ.17.49 ಲಕ್ಷದಿಂದ ರೂ.21.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇವೆರೆಡು ಕಾರುಗಳು 5 ಆಸನವನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.

ಇನ್ನು, ಈ ಟಾಟಾ ಪಂಚ್, ನೆಕ್ಸಾನ್ ಮತ್ತು ಕರ್ವ್ ಎಸ್‌ಯುವಿಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಜನರ ಕುಟುಂಬದ ಆಯ್ಕೆಯ ಕಾರುಗಳಾಗಿವೆ. ಮುಂಬರುವ ದಿನಗಳಲ್ಲಿ ಈ ಮೂರು ಎಸ್‌ಯುವಿಗಳಿಗೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, December 9, 2024, 21:24 [IST]
English summary
Tata punch nexon and curvv cars november sales 2024 report
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+