ರತನ್ ಟಾಟಾ ಕಂಪನಿಯ ಪವರ್: ಈ ಜನಪ್ರಿಯ ಕಾರು 4,00,000 ಯುನಿಟ್ ಮಾರಾಟ, ರೂ.6 ಲಕ್ಷ ಬೆಲೆ
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಂಪನಿಯ 'ಪಂಚ್' ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿದ್ದು, ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, ಈ ಕಾರಿನ ಮಾರಾಟದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
2021ರ ಅಕ್ಟೋಬರ್‌ನಲ್ಲಿ ಟಾಟಾ ಪಂಚ್ (Tata Punch) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿತ್ತು. ಅಂದಿನಿಂದಲೇ ಈ ಕಾರು ಭಾರಿ ಬೇಡಿಕೆ ಪಡೆದುಕೊಂಡಿದ್ದು, ಕೇವಲ 34 ತಿಂಗಳಲ್ಲಿ 4 ಲಕ್ಷ ಯುನಿಟ್ ಮಾರಾಟಗೊಳಿಸಲಾಗಿದೆ. ಈ ಮೂಲಕ ರತನ್ ಟಾಟಾ ಮಾಲೀಕತ್ವದ ಕಂಪನಿಯು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ.

ಟಾಟಾ ಪಂಚ್ ಎಸ್‌ಯುವಿ ಮಾರುಕಟ್ಟೆಗೆ ಬಂದ ಮೊದಲ 10 ತಿಂಗಳಲ್ಲಿ 1 ಲಕ್ಷ ಯುನಿಟ್ ಮಾರಾಟ ಮಾಡಲಾಗಿತ್ತು. ಆ ನಂತರದ 9 ತಿಂಗಳ ಅವಧಿಯಲ್ಲಿ ಮಾರಾಟ ಪ್ರಮಾಣ ದ್ವಿಗುಣಗೊಂಡಿತು. 2023ರ ಡಿಸೆಂಬರ್ ವೇಳೆಗೆ 3 ಲಕ್ಷ ಯುನಿಟ್ ಕಾರುಗಳು ಮಾರಾಟವಾಗಿದ್ದವು. ವಿಶೇಷವಾಗಿ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಟಾಟಾ ಪಂಚ್ ಶೇಕಡ 68% ಮಾರುಕಟ್ಟೆ ಪಾಲನ್ನು ಹೊಂದಿದೆ.
ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ಪಂಚ್ ಎಸ್‌ಯುವಿ, ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪ್ಯೂರ್ ಹಾಗೂ ಅಡ್ವೆಂಚರ್ ಒಳಗೊಂಡಂತೆ ಹಲವು ರೂಪಾಂತರ (ವೇರಿಯೆಂಟ್)ಗಳನ್ನು ಪಡೆದಿದೆ. ಅಟಾಮಿಕ್ ಆರೆಂಜ್, ಟ್ರಾಪಿಕಲ್ ಮಿಸ್ಟ್, ಡೇಟೋನಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಪಂಚ್ ಕಾರು ಎರಡು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ಮಾದರಿಗಳು 18.8 -20.09 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.99 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ.
ಟಾಟಾ ಪಂಚ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಬಹುದು. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 366 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್-ವ್ಯೂ ಕ್ಯಾಮೆರಾವನ್ನು ಪಡೆದಿದೆ.
ಟಾಟಾ ಪಂಚ್ ಎಲೆಕ್ಟ್ರಿಕ್ ರೂಪದಲ್ಲಿಯೂ ಖರೀದಿಗೆ ದೊರೆಯುತ್ತದೆ. ಇದು ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 25 ಮತ್ತು 35 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಕ್ರಮವಾಗಿ 315 ರಿಂದ 421 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications