Tata Safari: ಕಲ್ಲು ಬಂಡೆಯಂತಿರುವ ಟಾಟಾ ಸಫಾರಿ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ದೊಡ್ಡಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಸಫಾರಿ ಎಸ್‌ಯುವಿಯು ಅದರ ನಿರ್ಮಾಣ ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು, ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಮತ್ತು ಇಎಂಐ ಆಯ್ಕೆಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಟಾಟಾ ಸಫಾರಿ (Tata Safari) ಕಾರು ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಮಾತ್ರ ಲಭ್ಯವಿದೆ. ಇದರ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಸ್ಮಾರ್ಟ್ ರೂ.20.42 ಲಕ್ಷ, ಸ್ಮಾರ್ಟ್ (ಒ) ರೂ.21.04 ಲಕ್ಷ, ಪ್ಯೂರ್ ರೂ.22.28 ಲಕ್ಷ, ಪ್ಯೂರ್ (ಒ) ರೂ.22.90 ಲಕ್ಷ, ಅಡ್ವೆಂಚರ್ ರೂ.26.61 ಲಕ್ಷ ಹಾಗೂ ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಅಕಂಪ್ಲಿಶ್ಡ್ ಪ್ಲಸ್ ಎಟಿ ಮಾದರಿಯು ರೂ.33.86 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ಈ ಕಾರನ್ನು ರೂ.2,04,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿದರದಲ್ಲಿ ಐದು ವರ್ಷದ ಅವಧಿಗೆ ಮಾಸಿಕ ರೂ.38,872 ಇಎಂಐ ಕಟ್ಟಬೇಕು. ನೂತನ ಟಾಟಾ ಸಫಾರಿ ಎಸ್‌ಯುವಿಯು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ಕಾಸ್ಮಿಕ್ ಗೋಲ್ಡ್, ಸ್ಟೆಲ್ಲರ್ ಫ್ರಾಸ್ಟ್ ಸೇರಿದಂತೆ 4 ನವೀನ ಬಣ್ಣಗಳ ಆಯ್ಕೆಯೊಂದಿಗೂ ಖರೀದಿಗೆ ಲಭ್ಯವಿದೆ.
ಈ ಟಾಟಾ ಸಫಾರಿ 2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 170 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 350 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದ್ದು, 14.50 ರಿಂದ 16.30 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಹೊಸ ಟಾಟಾ ಸಫಾರಿ ಎಸ್‌ಯುವಿ 6 ರಿಂದ 7 ಆಸನ ಆಯ್ಕೆ ವ್ಯವಸ್ಥೆಯೊಂದಿಗೆ ದೊರೆಯುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಡುಯಲ್ ಜೋನ್ ಆಟೋಮೆಟಿಕ್ ಎಸಿ, ಸನ್‌ರೂಫ್ ಹಾಗೂ ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯಲ್ಲಿ 'ಟಾಟಾ ಸಫಾರಿ' 5-ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ ಗರಿಷ್ಠ 32ಕ್ಕೆ 30.08, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.54 ಅಂಕಗಳನ್ನು ಗಳಿಸಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಲು 7 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಟಾಟಾ ಸಫಾರಿ ಎಸ್‌ಯುವಿಗೆ ಎಂಜಿ ಹೆಕ್ಟರ್ ಪ್ಲಸ್, ಹ್ಯುಂಡೈ ಅಲ್ಕಾಜರ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ700 ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಕುರಿತು ಮಾತ್ರವೇ ವಿವರಿಸಲಾಗಿದೆ. ಈ ದರಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications