Tata: ಟಾಟಾದಿಂದ ದೊಡ್ಡ ಸಿಹಿಸುದ್ದಿ.. ಶೋರೂಂ ಮುಂದೆ ಕ್ಯೂ ನಿಲ್ಲುವುದು ಪಕ್ಕಾ!

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಕಾರುಗಳು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಸದ್ಯ 2024ರ ಜೂನ್ ತಿಂಗಳು ಬಂದರೂ ದೇಶಾದ್ಯಂತ ಹಲವು ಟಾಟಾ ಡೀಲರ್‌ಶಿಪ್‌ಗಳಲ್ಲಿ 2023ರ ಟಿಯಾಗೊ, ಟಿಗೂರ್, ಆಲ್ಟ್ರೋಜ್, ನೆಕ್ಸಾನ್, ಹ್ಯಾರಿಯರ್ ಹಾಗೂ ಸಫಾರಿ ಕಾರುಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ. ಶೀಘ್ರದಲ್ಲಿಯೇ ಅವುಗಳನ್ನು ಖಾಲಿ ಮಾಡಬೇಕಾಗಿದ್ದು, ಆ ಕಾರಣಕ್ಕೆ ಭಾರೀ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ.

ಮೊದಲಿಗೆ ಟಾಟಾ ಸಫಾರಿ (Tata Safari) ಎಸ್‌ಯುವಿ ಪಡೆದುಕೊಂಡಿರುವ ರಿಯಾಯಿತಿ ಪ್ರಯೋಜನದ ಬಗ್ಗೆ ಮಾತನಾಡೋಣ. 2023ರಲ್ಲಿ ಉತ್ಪಾದಿಸಿದ ಸಫಾರಿ ಪ್ರಿ-ಫೇಸ್‌ಲಿಫ್ಟ್ ಮಾದರಿ (ಮಾಡೆಲ್)ಗಳು ರೂ.1.25 ಲಕ್ಷ ಹಾಗೂ ಫೇಸ್‌ಲಿಫ್ಟ್ ಆವೃತ್ತಿಗಳು ರೂ.80,000ವರೆಗೆ ಡಿಸ್ಕೌಂಟ್ ಅನ್ನು ಹೊಂದಿವೆ. ದೇಶೀಯವಾಗಿ ಖರೀದಿಗೆ ಲಭ್ಯವಿರುವ ಸಫಾರಿ ಕಾರು ರೂ.16.19 ಲಕ್ಷದಿಂದ ರೂ.27.34 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

Tata safari Harrier Nexon Altroz Tiago Tigor 2023 Model Have Big Discount In June 2024

ಈ ಸಫಾರಿಯು 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 6-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

2023ರಲ್ಲಿ ತಯಾರಿಸಲಾದ ಟಾಟಾ ಹ್ಯಾರಿಯರ್ (Tata Harrier) ಸಹ ಭರ್ಜರಿ ಡಿಸ್ಕೌಂಟ್ ಆಫರ್ ಪಡೆದಿದೆ. ಪ್ರಿ-ಫೇಸ್‌ಲಿಫ್ಟ್ ರೂಪಾಂತರ (ವೇರಿಯೆಂಟ್)ಗಳು ರೂ.1.25 ಲಕ್ಷ ಹಾಗೂ ಫೇಸ್‌ಲಿಫ್ಟ್ ಮಾದರಿಗಳು ರೂ.80,000ವರೆಗೆ ರಿಯಾಯಿತಿ ಸೌಲಭ್ಯವನ್ನು ಹೊಂದಿವೆ. ನೂತನ ಹ್ಯಾರಿಯರ್ ಕಾರು ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

Tata safari Harrier Nexon Altroz Tiago Tigor 2023 Model Have Big Discount In June 2024

ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿಯು ಉತ್ತಮ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. 2023ರಲ್ಲಿ ಸಿದ್ದಪಡಿಸಲಾದ ಈ ಕಾರಿನ ಪೆಟ್ರೋಲ್ ಮಾದರಿಗಳು ರೂ.90,000 ಹಾಗೂ ಡೀಸೆಲ್ ಚಾಲಿತ ಆವೃತ್ತಿಗಳು ರೂ.75,000ವರೆಗೆ ಡಿಸ್ಕೌಂಟ್ ಅನ್ನು ಪಡೆದಿವೆ. ಹಾಗೆಯೇ ಅದೇ ವರ್ಷ ಉತ್ಪಾದನೆಗೊಂಡ ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಗಳು ರೂ.60,000ವರೆಗೆ ರಿಯಾಯಿತಿಯನ್ನು ಒಳಗೊಂಡಿವೆ.

ಹೊಚ್ಚ ಹೊಸ ಟಾಟಾ ನೆಕ್ಸಾನ್ ಕಾರು ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Tata safari Harrier Nexon Altroz Tiago Tigor 2023 Model Have Big Discount In June 2024

2023ರ ಟಾಟಾ ಆಲ್ಟ್ರೋಜ್ (Tata Altroz) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಖರೀದಿ ಮೇಲೂ ಭರ್ಜರಿ ರಿಯಾಯಿತಿ ಪ್ರಯೋಜನ ದೊರೆಯುತ್ತಿದೆ. ಈ ಕಾರು, ಒಟ್ಟು ರೂ.65,000ವರೆಗೆ ಡಿಸ್ಕೌಂಟ್ ಆಫರ್‌ನ್ನು ಪಡೆದಿದೆ. ನೂತನ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್‌ ರೂ.6.65 ಲಕ್ಷದಿಂದ ರೂ.10.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಸಿಗುತ್ತದೆ.

ಟಾಟಾ ಟಿಯಾಗೊ (Tata Tiago) ಕೂಡ ದೊಡ್ಡಮಟ್ಟದಲ್ಲಿ ರಿಯಾಯಿತಿಯನ್ನು ಹೊಂದಿದೆ. 2023ರಲ್ಲಿ ತಯಾರಿಸಿದ ಪೆಟ್ರೋಲ್ ರೂಪಾಂತರಗಳು ರೂ.85,000 ಹಾಗೂ ಸಿಎನ್‌ಜಿ ಆವೃತ್ತಿಗಳು ರೂ.80,000ವರೆಗೆ ಡಿಸ್ಕೌಂಟ್ ಅನ್ನು ಒಳಗೊಂಡಿವೆ. ಟಾಟಾ ಟಿಗೂರ್ ಕಾರಿಗೂ ಉತ್ತಮವಾದ ರಿಯಾಯಿತಿ ಲಭ್ಯವಿದೆ. ಇದು ರೂ.80,000ವರೆಗೆ ಡಿಸ್ಕೌಂಟ್ ಆಫರ್‌ನ್ನು ಪಡೆದಿದೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿಗಳು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ನ್ನು ಆಧರಿಸಿ ಬೇರೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, June 6, 2024, 11:21 [IST]
English summary
Tata safari harrier nexon altroz tiago tigor 2023 model have big discount in june 2024
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+