Tata: ಟಾಟಾದ ಎಲೆಕ್ಟ್ರಿಕ್ ಕಾರುಗಳಿಗಾಗಿ ಶೋರೂಂ ಎದುರು ಕ್ಯೂ ನಿಂತ ಗ್ರಾಹಕರು!.. ರೂ.10.99 ಲಕ್ಷ ಆರಂಭಿಕ ಬೆಲೆ

ದೇಶದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಟಿಯಾಗೊ, ಟಿಗೂರ್, ಆಲ್ಟ್ರೋಜ್, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವು ಅತ್ಯಾಧುನಿಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಪಡೆದಿರುವುದರಿಂದ ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಅದರಲ್ಲೂ ದೇಶೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಟಾಟಾ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದು, ಹಲವು ವಿದ್ಯುತ್ ಚಾಲಿತ ಹ್ಯಾಚ್‌ಬ್ಯಾಕ್‌, ಸೆಡಾನ್‌ ಹಾಗೂ ಕಾಂಪ್ಯಾಕ್ಟ್ ಎಸ್‌ಯುವಿಗಳನ್ನು ದೊಡ್ಡಸಂಖ್ಯೆಯಲ್ಲಿ ಮಾರಾಟ ಮಾಡುತ್ತಿದೆ.

ಟಾಟಾ ಕಂಪನಿಯ ಪಂಚ್ ಇವಿ ಹಾಗೂ ನೆಕ್ಸಾನ್ ಇವಿಗಳು ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ದಿನದಿಂದ ದಿನಕ್ಕೆ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತ್ತಿವೆ. ಪಂಚ್ ಇವಿ ಬಿಡುಗಡೆಗೊಂಡು ಕೇವಲ 5 ತಿಂಗಳಾಗಿದ್ದು, ಈವರೆಗೆ ಬರೋಬ್ಬರಿ 10,000 ಕಾರುಗಳನ್ನು ಮಾರಾಟಗೊಳಿಸಲಾಗಿದೆ. ಅದೇ ರೀತಿಯಲ್ಲಿ ನೆಕ್ಸಾನ್ ಇವಿಯನ್ನು 2020ರಲ್ಲಿ ಪರಿಚಯಿಸಲಾಗಿತ್ತು. ಸರಿ ಸುಮಾರು 68,000ಕ್ಕೂ ಅಧಿಕ ಕಾರುಗಳನ್ನು ಮಾರಲಾಗಿದೆ. ಒಟ್ಟಾರೆ, ಎರಡು ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಸೇರಿಸಿ, 78,000 ಯುನಿಟ್‌ ಮಾರಾಟ ಮಾಡಲಾಗಿದೆ.

Tata Sales 78 000 Punch Ev And Nexon Ev Rs 11 Lakh Starting Price 421 Km Range

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ಪಂಚ್ ಇವಿ (Tata Punch EV) ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಅಡ್ವೆಂಚರ್, ಎಂಪವರ್ಡ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳು ಮತ್ತು ಹಲವು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಪಂಚ್ ಇವಿಯು 25 ಹಾಗೂ 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ ಕ್ರಮವಾಗಿ 315 ರಿಂದ 421 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇದರ ಬ್ಯಾಟರಿಯು ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಶೇಕಡ 10 ರಿಂದ 80% ಚಾರ್ಜ್ ಆಗಲು 56 ನಿಮಿಷ ತೆಗೆದುಕೊಳ್ಳುತ್ತದೆ.

Tata Sales 78 000 Punch Ev And Nexon Ev Rs 11 Lakh Starting Price 421 Km Range

ನೂತನ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಏರ್ ಪ್ಯೂರಿಫೈಯರ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV) ಬಗ್ಗೆ ಹೇಳುವುದಾದರೆ, ಈ ಕಾರು ರೂ.14.49 ಲಕ್ಷದಿಂದ ರೂ.19.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 30 ಕೆಡಬ್ಲ್ಯೂಹೆಚ್ ಮತ್ತು 40.5 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 325 ಕಿ.ಮೀ ರಿಂದ 465 ಕಿಲೋಮೀಟರ್ ಓಡುತ್ತದೆ. ಇಕೋ, ಸಿಟಿ, ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಒಳಗೊಂಡಿದೆ.

ಈ ನೆಕ್ಸಾನ್ ಇವಿಯಲ್ಲಿಯೂ 5 ಮಂದಿ ಓಡಾಟವನ್ನು ನಡೆಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್ ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, June 17, 2024, 17:07 [IST]
English summary
Tata sales 78000 punch ev and nexon ev rs 11 lakh starting price 421 km range
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+