TATA: ಟಾಟಾದ ಹೊಚ್ಚ ಹೊಸ ಕಾರಿನ ಫೋಟೋಗಳು ಸೋರಿಕೆ.. ಇದರ ಮೇಲೆಯೇ ಎಲ್ಲರ ಕಣ್ಣು, ಯಾವುದು?
ಭಾರತದ ಇವಿ (ಎಲೆಕ್ಟ್ರಿಕ್ ವೆಹಿಕಲ್) ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ (Tata Motors) ಅತಿಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಅದರಲ್ಲೂ ಟಿಯಾಗೊ ಇವಿ, ಟಿಗೊರ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ ಮತ್ತು ಕರ್ವ್ ಇವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. 2025ರಲ್ಲಿ ಎರಡು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಕಂಪನಿಯು ತೆರೆಮರೆಯಲ್ಲಿ ಸಿದ್ದತೆಯನ್ನು ನಡೆಸುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಮೊದಲಿಗೆ ಹ್ಯಾರಿಯರ್ ಇವಿ, ಆ ನಂತರದ ದಿನಗಳಲ್ಲಿ ಸಿಯೆರಾ ಇವಿಯನ್ನು ಮಾರಾಟಕ್ಕೆ ತರಲಿದೆ.
2023ರಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಆಟೋ ಎಕ್ಸ್‌ಪೋದಲ್ಲಿಯೇ ಟಾಟಾ ಸಿಯೆರಾ ಇವಿಯ ಕಾನ್ಸೆಪ್ಟ್ ಮಾಡೆಲ್‌ನ್ನು ಪ್ರದರ್ಶಿಸಲಾಗಿತ್ತು. ಸದ್ಯ, ಉತ್ಪಾದನೆಗೆ ಸಿದ್ದಗೊಂಡಿರುವ ಹೊಚ್ಚ ಹೊಸ ಟಾಟಾ ಸಿಯೆರಾ ಇವಿ (Tata Sierra EV) ಫೋಟೋಗಳು ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಲ್‌ಚಲ್ ಸೃಷ್ಟಿಸಿವೆ ಎಂದು ಹೇಳಬಹುದು.

ಈ ಫೋಟೋಗಳಲ್ಲಿ ನೂತನ ಎಲೆಕ್ಟ್ರಿಕ್ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬ್ಲಾಂಕ್ಡ್ ಆಫ್ ಗ್ರಿಲ್, ಬ್ಲ್ಯಾಕ್ಡ್ ಔಟ್ ಫ್ರಂಟ್ ಬಂಪರ್, ಡುಯಲ್ ಟೋನ್ ರೂಫ್, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿರುವುದನ್ನು ಕಾಣಬಹುದು.
ನೂತನ ಟಾಟಾ ಸಿಯೆರಾ ಇವಿ ಕೂಡ 'ಕರ್ವ್' ಎಲೆಕ್ಟ್ರಿಕ್ ಕಾರಿನಂತೆ ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರುವ ಸಾಧ್ಯತೆಯಿದೆ. ಸಂಪೂರ್ಣವಾಗಿ ಚಾರ್ಜ್ ಮಾಡಿದರೆ ಬರೋಬ್ಬರಿ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು ಪೀಕ್ ಟಾರ್ಕ್ ಉತ್ಪಾದಿಸಲಿದೆ ಎಂದು ಅಂದಾಜಿಸಲಾಗಿದೆ.

ಹೊಸ ಟಾಟಾ ಸಿಯೆರಾ ಇವಿಯಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. ಇದು ದೊಡ್ಡದಾಗುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, 360 ಡಿಗ್ರಿ ಕ್ಯಾಮೆರಾ, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಈ ಸಿಯೆರಾ ಇವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದ್ದು, ರೂ.25 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಬಹುತೇಕ 2025ರ ಆಗಸ್ಟ್ ತಿಂಗಳಲ್ಲಿ ಮಾರಾಟಕ್ಕೆ ಬರಲಿದೆ ಎಂದು ಹೇಳಲಾಗಿದೆ. ನೂತನ ಎಲೆಕ್ಟ್ರಿಕ್ ಕಾರಿಗೆ ಯಾವುದೇ ನೇರ ಎದುರಾಳಿ ಕಾರುಗಳು ಇಲ್ಲ. ಆದರೂ ಮಹೀಂದ್ರಾ ಮತ್ತು ಬಿವೈಡಿ ಕಂಪನಿಯ ಕಾರುಗಳೊಂದಿಗೆ ಸ್ಪರ್ಧಿಸಬೇಕಾಗಿದೆ.

ಇನ್ನು ಟಾಟಾ ಸಿಯೆರಾ ಇವಿ ಮಾರಾಟಕ್ಕೆ ಬಂದ ನಂತರ, ಈ ಕಾರನ್ನು ಇಂಧನ ಚಾಲಿತ ರೂಪದಲ್ಲಿಯೂ ಪರಿಚಯಿಸಲಾಗುತ್ತದೆ. ಹೊಸ ಸಿಯೆರಾ ಇವಿ ಮೇಲೆ ಗ್ರಾಹಕರು ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಎಲೆಕ್ಟ್ರಿಕ್ ಕಾರು ಬಿಡುಗಡೆಯಾದ ನಂತರ, ದೇಶೀಯ ಕಾರು ಮಾರುಕಟ್ಟೆಯಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುವುದರಲ್ಲಿ ಎರಡು ಮಾತಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: Cartoq


Click it and Unblock the Notifications