Tata: 5 ಜನ ಓಡಾಡಲು ಈ ಟಾಟಾ ಕಾರುಗಳು ಉತ್ತಮ.. 28 ಕಿ.ಮೀ ಮೈಲೇಜ್, ರೂ.5.65 ಲಕ್ಷ ಬೆಲೆ
ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯ ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಂಪನಿಯ ಟಿಯಾಗೊ (Tiago) ಹಾಗೂ ಟಿಗೂರ್ (Tigor) ಜನಪ್ರಿಯ ಕಾರುಗಳಾಗಿವೆ. ನೀವು ಹೊಸ ಕಾರನ್ನು ತೆಗೆದುಕೊಳ್ಳಲು ಆಲೋಚಿಸಿದ್ದರೆ.. ಇವು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ಕಾರುಗಳ ಬೆಲೆ (Price), ಕಾರ್ಯಕ್ಷಮತೆ (Performance) ಮತ್ತು ವೈಶಿಷ್ಟ್ಯ (Features)ಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಈ ಕಾರು, ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. 20.01 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಟಾಟಾ ಟಿಯಾಗೊ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ (ಒ) ಹಾಗೂ ಎಕ್ಸ್‌ಟಿ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಪಡೆದಿದೆ. ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ, ಟೊರ್ನಾಡೋ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಯಬಹುದು.
ನೂತನ ಟಾಟಾ ಟಿಯಾಗೊ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 2 ಏರ್‌ಬ್ಯಾಗ್‌ನ್ನು ಒಳಗೊಂಡಿದೆ.

ಟಾಟಾ ಟಿಗೂರ್ (Tata Tigor) ಸೆಡಾನ್ ಬಗ್ಗೆ ಮಾತನಾಡುವುದಾದರೆ, ಇದು ರೂ.6.30 ಲಕ್ಷದಿಂದ ರೂ.9.55 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಜಡ್ ಮತ್ತು ಎಕ್ಸ್‌ಜಡ್ ಪ್ಲಸ್ ಎಂಬ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಹೊಂದಿದೆ. ಜೊತೆಗೆ ಓಪಲ್ ವೈಟ್, ಮ್ಯಾಗ್ನೆಟಿಕ್ ರೆಡ್ ಮತ್ತು ಡೇಟೋನಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಈ ಕಾರಿನಲ್ಲಿ 5 ಜನರು ಓಡಾಡಬಹುದು.
ಈ ಟಾಟಾ ಟಿಗೂರ್ ಸೆಡಾನ್ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 19.28 ರಿಂದ 19.60 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿಗಳು 26.49 ರಿಂದ 28.06 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.
ಹೊಸ ಟಿಗೂರ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8 ಸ್ಪೀಕರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications